Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ರಶ್ಮಿಕಾ ಮಂದಣ್ಣ ಅವರು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸುದೀರ್ಘ ಬರಹದ ಪೋಸ್ಟ್‌ಗಳನ್ನು ಹಂಚಿಕೊಂಡು ತಿರುಗೇಟು ಕೊಟ್ಟಿದ್ದಾರೆ.
"ಸುಮಾರು 8 ವರ್ಷಗಳಷ್ಟು ಹಳೆಯದಾದ, ತಮ್ಮ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾದ ಖಾಸಗಿ ಸಂಭಾಷಣೆಯನ್ನು ಯಾರೋ ಬೇಕು ಅಂತಲೇ ಅನಧಿಕೃತವಾಗಿ ರೆಕಾರ್ಡ್ ಮಾಡಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಕಿರುಕುಳ ಆಗುತ್ತಿದೆ," ಎಂದು ರಶ್ಮಿಕಾ ಆರೋಪಿಸಿದ್ದಾರೆ.

'ವ್ಯೂವ್ಸ್, ಎಂಗೇಜ್‌ಮೆಂಟ್‌ಗಾಗಿ ಕೀಳುಮಟ್ಟದ ಕೆಲಸ'
"ನಾನು ಹೇಳಿದ ಮಾತುಗಳನ್ನು ಉದ್ದೇಶಪೂರ್ವಕವಾಗಿ ಸಂದರ್ಭಕ್ಕೆ ತಕ್ಕಂತೆ ಬಳಸದೆ, ಸುಳ್ಳು ಕಥೆಗಳನ್ನು ಸೃಷ್ಟಿಸಿ, ವಿವಾದವನ್ನು ಹುಟ್ಟಿಹಾಕುವ ಪ್ರಯತ್ನ ನಡೆಯುತ್ತಿದೆ. ಕೇವಲ ವ್ಯೂವ್ಸ್ ಮತ್ತು ಎಂಗೇಜ್‌ಮೆಂಟ್‌ಗಾಗಿ ಇಂತಹ ಕೀಳುಮಟ್ಟದ ಕೆಲಸಗಳನ್ನು ಮಾಡಲಾಗುತ್ತಿದೆ," ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಸುಮಾರು 8 ವರ್ಷಗಳ ಹಿಂದಿನ ಹಳೆಯ ಖಾಸಗಿ ಸಂಭಾಷಣೆಯನ್ನು, ಸಂಬಂಧಪಟ್ಟವರ ಗಮನಕ್ಕೂ ಬಾರದೆ ಅಥವಾ ಅನುಮತಿಯಿಲ್ಲದೆ ರೆಕಾರ್ಡ್ ಮಾಡಿ ರಿಲೀಸ್ ಮಾಡಲಾಗಿದೆ. ಆ ಸಂಭಾಷಣೆಯ ಒಂದು ಸಣ್ಣ ಭಾಗವನ್ನು ಉದ್ದೇಶಪೂರ್ವಕವಾಗಿ ಸಂದರ್ಭಕ್ಕೆ ತಕ್ಕಂತೆ ಬಳಸದೆ, ಮತ್ತೊಂದು ವಿವಾದವನ್ನು ಸೃಷ್ಟಿಸಲು ಬಳಸಿಕೊಳ್ಳಲಾಗಿದೆ. ನನ್ನ ವೈಯಕ್ತಿಕ ಜೀವನದ ಇತ್ತೀಚಿನ ಬೆಳವಣಿಗೆ ಜೊತೆಯಲ್ಲೇ ಇದೆಲ್ಲ ನಡೆದಿದೆ.
"ಕಾನೂನು ಕ್ರಮ ಕೈಗೊಳ್ಳಲಾಗುವುದು"
ಮಾಧ್ಯಮ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಇಂತಹ ಕಿರುಕುಳ ಮತ್ತು ದಾಳಿಗಳನ್ನು ತಾಳ್ಮೆಯಿಂದ ಸಹಿಸಿಕೊಂಡು ಬಂದಿದ್ದೆವು. ಆದರೆ, ಈ ಬಾರಿ ಮಿತಿ ಮೀರಿದೆ. ಕಳೆದ 24 ಗಂಟೆಗಳ ಘಟನೆಗಳು ತಾವು ತಾಳ್ಮೆ ಕಳೆದುಕೊಳ್ಳುವಂತೆ ಮಾಡುತ್ತಿವೆ. ಈ ವಿವಾದವು ತನ್ನ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಅನಗತ್ಯ ತೊಂದರೆ ಉಂಂಟುಮಾಡಿದೆ.
ಹೀಗಾಗಿ, ಈ ಆಡಿಯೋ ಅಥವಾ ಅದಕ್ಕೆ ಸಂಬಂಧಿಸಿದ ತಪ್ಪು ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವ ಮಾಧ್ಯಮಗಳು, ಇನ್‌ಫ್ಲುಯೆನ್ಸರ್‌ಗಳು ಮತ್ತು ವೈಯಕ್ತಿಕ ಖಾತೆಗಳಿಗೆ 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ. ಅದರೊಳಗೆ ಇದನ್ನು ಡಿಲೀಟ್ ಮಾಡದಿದ್ದರೆ ಕಾನೂನಿನ ಮೊರೆ ಹೋಗಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ
ಈ ವಿಷಯಕ್ಕೆ ಸಂಬಂಧ ಇಲ್ಲದವರನ್ನು ಅನಗತ್ಯವಾಗಿ ಮುಜುಗರಕ್ಕೆ ದೂಡಿದ್ದಾರೆ. ಇದು ಗೌಪ್ಯತೆಯ ಗಂಭೀರ ಉಲ್ಲಂಘನೆ, ದಾರಿ ತಪ್ಪಿಸುವ, ಮಾನಹಾನಿಕರ ವಿಷಯಗಳ ಪ್ರಸಾರವಾಗಿದೆ. ನಾವು ಜೀವನದಲ್ಲಿ ಮುಂದೆ ಸಾಗುತ್ತ, ಬೆಳೆಯುತ್ತ, ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತ ಧನಾತ್ಮಕವಾಗಿ ಬೆಳೆಯುತ್ತಿರುವಾಗ, ಕೆಲವರು ಇನ್ನೊಬ್ಬರ ಘನತೆ, ಶಾಂತಿಯನ್ನು ಹಾಳು ಮಾಡುತ್ತಿರುವುದು ದುರದೃಷ್ಟಕರ. ಕಳೆದ 8 ವರ್ಷಗಳಿಂದ ನನ್ನ ಮೇಲೆ ದಾಳಿ ಮಾಡಿದಾಗ ನಾನು ಮೌನವಾಗಿದ್ದೆ. ಆದರೆ, ಇಂದು ಬೇರೆಯವರನ್ನು ಇದಕ್ಕೆ ಎಳೆದು ತಂದಾಗ, ನಾನು ಸುಮ್ಮನೆ ಇರಲು ಸಾಧ್ಯವಿಲ್ಲ.
ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್ ಮಾಡಿದ್ದೀರ. ಅವರೆಲ್ರಿಗೂ ತುಂಬು ಹೃದಯದ ಧನ್ಯವಾದಗಳು. ಒಂದ್ ಮಾತು ಈ ಸಮಯದಲ್ಲಿ ಹೇಳಲೇಬೇಕು ಅನ್ಸಿದೆ - ಬೇಕಂತ ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್ ಮಾತನಾಡೋ ಜನ, ಒಂದ್ ಅರ್ಥ ಮಾಡ್ಕೊಬೇಕು - ಅವರೆಲ್ಲ ನನ್ನ ಜೀವನ ಹೇಗಿರಬೇಕು ಅಂತ ನಿರ್ಧಾರ ಮಾಡಕ್ಕಾಗತ್ತಾ? ನಮ್ ಜೀವನ ನಮ್ಗಲ್ವಾ? ನಮ್ ನಿರ್ಧಾರ ನಾವೇ ತೊಗೋಬೇಕು ಮತ್ತೆ ತೊಗೋತೀವಿ ಕೂಡ ಎಂದು ಬರೆದುಕೊಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಈ ಖುಷಿಯ ಸಂದರ್ಭದಲ್ಲಿ ಇಂತಹ ಹಳೆಯ ವಿಚಾರಗಳನ್ನು ಕೆದಕಿ ವಿವಾದ ಸೃಷ್ಟಿಸುತ್ತಿರುವುದು ತಮಗೆ ನೋವು ತಂದಿದೆ. ತನ್ನ ಕುಟುಂಬವನ್ನು ಮತ್ತು ಆಪ್ತರನ್ನು ಈ ಅನಗತ್ಯ ವಿವಾದಕ್ಕೆ ಎಳೆದುತಂದಿದ್ದಾದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ, ತಮಗೆ ಮತ್ತು ತಮ್ಮ ಕುಟುಂಬಕ್ಕೆ ಆಗುತ್ತಿರುವ ಈ ಕಿರುಕುಳದ ವಿರುದ್ಧ ರಶ್ಮಿಕಾ ಮಂದಣ್ಣ ಈಗ ಕಾನೂನಿನ ಮೂಲಕ ಹೋರಾಡಲು ನಿರ್ಧರಿಸಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications