Shubha Poonja: ಸಮಯ ಬಂದಾಗ ನಾನೇ ಸತ್ಯ ಹೇಳ್ತೀನಿ: ಡಿವೋರ್ಸ್ ವದಂತಿ ಬೆನ್ನಲ್ಲೇ ನಟಿ ಶುಭಾ ಪೂಂಜಾ ಪೋಸ್ಟ್‌

ಕನ್ನಡ ಚಿತ್ರರಂಗದ ಖ್ಯಾತ ನಟಿ, ಬಿಗ್‌ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ (Shubha Poonja) ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಚರ್ಚೆಗಳು ಭಾರಿ ಸದ್ದು ಮಾಡುತ್ತಿವೆ. ಶುಭಾ ಪೂಂಜಾ ಹಾಗೂ ಸುಮಂತ್ ದಂಪತಿ ಪರಸ್ಪರ ದೂರವಾಗುತ್ತಿದ್ದು, ಶೀಘ್ರದಲ್ಲೇ ಡಿವೋರ್ಸ್ ಪಡೆಯಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಎಲ್ಲ ಅಂತೆ-ಕಂತೆಗಳಿಗೆ ನಟಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಳ್ಳುವ ಮೂಲಕ ನಟಿ ಪ್ರತಿಕ್ರಿಯಿಸಿದ್ದಾರೆ.

ಶುಭಾ ಪೂಂಜಾ ಅವರ ವೈಯಕ್ತಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಸ್ವತಃ ನಟಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಪತಿ ಸುಮಂತ್ ಹಾಗೂ ತಮ್ಮ ನಡುವಿನ ದಾಂಪತ್ಯ ಮುರಿದುಬಿದ್ದಿದೆ ಎಂಬ ಗಾಸಿಪ್‌ಗಳಿಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಶುಭಾ ಪೂಂಜಾ ತೆರೆ ಎಳೆಯಲು ಯತ್ನಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಮಾಧ್ಯಮಗಳು ಹಾಗೂ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

Shubha Poonja

ಪೋಸ್ಟ್‌ನಲ್ಲಿ, "ನನ್ನೆಲ್ಲ ಆತ್ಮೀಯ ಮಾಧ್ಯಮ ಮಿತ್ರರಿಗೆ ನಮಸ್ಕಾರಗಳು. ನಾನು ಚಿತ್ರರಂಗಕ್ಕೆ ಕಾಲಿಟ್ಟ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನನ್ನು ಸದಾ ಬೆಂಬಲಿಸುತ್ತಾ, ಪ್ರೋತ್ಸಾಹಿಸುತ್ತಾ ಬಂದಿದ್ದೀರಿ. ಇದೀಗ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದು ಇಷ್ಟೇ, ಸೂಕ್ತ ಸಮಯ ಬಂದಾಗ ನನ್ನ ವೈಯಕ್ತಿಕ ಜೀವನದಲ್ಲಿ ಸದ್ಯ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ನಾನೇ ನಿಮಗೆ ಖುದ್ದಾಗಿ ಎಲ್ಲವನ್ನೂ ತಿಳಿಸುತ್ತೇನೆ" ಎಂದು ಶುಭಾ ಬರೆದುಕೊಂಡಿದ್ದಾರೆ.

ಸಿನಿಮಾ ಹಿಟ್‌ ಆದ್ರೂ 'ದುನಿಯಾ' ರಶ್ಮಿ ಚಿತ್ರರಂಗದಿಂದ ದೂರ ಸರಿದಿದ್ದೇಕೆ? ಕಂಬ್ಯಾಕ್ ಬಗ್ಗೆ ಶುರುವಾಯ್ತು ಹೊಸ ಚರ್ಚೆ
ಸಿನಿಮಾ ಹಿಟ್‌ ಆದ್ರೂ 'ದುನಿಯಾ' ರಶ್ಮಿ ಚಿತ್ರರಂಗದಿಂದ ದೂರ ಸರಿದಿದ್ದೇಕೆ? ಕಂಬ್ಯಾಕ್ ಬಗ್ಗೆ ಶುರುವಾಯ್ತು ಹೊಸ ಚರ್ಚೆ

"ನಮಗೂ ಸ್ವಲ್ಪ ಸಮಯಾವಕಾಶ ಕೊಡಿ"

ತಮ್ಮ ಖಾಸಗಿ ಜೀವನವನ್ನು ಗೌರವಿಸುವಂತೆ ಕೋರಿರುವ ಅವರು, "ಅಲ್ಲಿಯವರೆಗೂ ನನಗೂ ಹಾಗೂ ಸುಮಂತ್ ಅವರಿಗೂ ಸ್ವಲ್ಪ ಕಾಲಾವಕಾಶ ಕೊಡಿ ಎಂದು ಅತ್ಯಂತ ವಿನಮ್ರವಾಗಿ ವಿನಂತಿಸಿಕೊಳ್ಳುತ್ತೇನೆ" ಎಂದು ಪೋಸ್ಟ್ ಕೊನೆಗೊಳಿಸಿದ್ದಾರೆ. ನಟಿಯ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ, ಅವರ ವೈಯಕ್ತಿಕ ಬದುಕಿನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಂತಾಗಿದೆ.

ಉದ್ಯಮಿ ಸುಮಂತ್ ಮಹಾಬಲ ಅವರನ್ನು ಪ್ರೀತಿಸಿ ವಿವಾಹವಾಗಿದ್ದ ಶುಭಾ ಪೂಂಜಾ, ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿ ದಂಪತಿಯ ಸುಂದರ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ಉಂಟಾಗಿರುವ ಮನಸ್ತಾಪವೇ ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಎನ್ನಲಾಗುತ್ತಿದ್ದು, ನಟಿಯ ಮುಂದಿನ ನಡೆ ಏನೆಂಬುದನ್ನು ಅವರೇ ಅಧಿಕೃತವಾಗಿ ಘೋಷಿಸುವವರೆಗೂ ಕಾಯಬೇಕಿದೆ.

Shubha Poonja

ಪತಿಯನ್ನು ಚಿನ್ನಿ ಬಾಂಬ್‌ ಎನ್ನುತ್ತಿದ್ದ ಶುಭಾ

ನಟಿ ಶುಭಾ ಪೂಂಜಾ ಅವರ ವೈಯಕ್ತಿಕ ಜೀವನದ ಕುರಿತು ಕೇಳಿಬರುತ್ತಿರುವ ಕಹಿ ಸುದ್ದಿಗಳು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿವೆ. ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದ ನಟಿ ಶುಭಾ ಪೂಂಜಾ ಮತ್ತು ಉದ್ಯಮಿ ಸುಮಂತ್ ಮಹಾಬಲ ಅವರು 2022ರಲ್ಲಿ ಮಂಗಳೂರಿನಲ್ಲಿ ಅತ್ಯಂತ ಸರಳವಾಗಿ ಮದುವೆಯಾಗಿದ್ದರು. ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದ ಈ ಜೋಡಿಯ ಸಂಸಾರದಲ್ಲಿ ಇಷ್ಟು ಬೇಗ ಬಿರುಗಾಳಿ ಎದ್ದಿರುವುದು ಸಂಚಲನ ಮೂಡಿಸಿದೆ.

ವರದಿಗಳ ಪ್ರಕಾರ, ವಿವಾಹವಾದ ನಾಲ್ಕೇ ವರ್ಷಗಳಲ್ಲಿ ದಂಪತಿಗಳ ನಡುವೆ ತೀವ್ರ ಮನಸ್ತಾಪ ಉಂಟಾಗಿದ್ದು, ಇಬ್ಬರೂ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಇಷ್ಟು ದಿನ ಸೋಷಿಯಲ್ ಮೀಡಿಯಾದಲ್ಲಿ ಮಾದರಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದ ಇವರು, ಈಗ ಸದ್ದಿಲ್ಲದೆ ದೂರವಾಗಲು ನಿರ್ಧರಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಶುಭಾ ಪೂಂಜಾ ಮತ್ತು ಸುಮಂತ್ ನಡುವಿನ ಮುನಿಸಿಗೆ ಹಾಗೂ ಈ ವಿಚ್ಛೇದನದ ನಿರ್ಧಾರಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಬಹಿರಂಗವಾಗಿಲ್ಲ. ಈ ಕುರಿತು ಮಾಧ್ಯಮಗಳು ಸುಮಂತ್ ಮಹಾಬಲ ಅವರನ್ನು ಸಂಪರ್ಕಿಸಲು ಯತ್ನಿಸಿದಾಗ, ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಇದು ತಮ್ಮ ವೈಯಕ್ತಿಕ ವಿಷಯವಾಗಿದ್ದರಿಂದ ದಯವಿಟ್ಟು ನಮ್ಮ ಖಾಸಗಿತನ ಕಾಪಾಡಿಕೊಳ್ಳಲು ಬಿಡಿ ಎಂದು ಮನವಿ ಮಾಡಿದ್ದಾರೆ. ಡಿವೋರ್ಸ್‌ ಲಿಸ್ಟ್‌ಗೆ ಈ ಜೋಡಿ ಸೇರದೇ ಇರಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+