Dhanveer: ಸಿಸಿಬಿ ವಿಚಾರಣೆ ಬಳಿಕ ಸ್ಪೆಷಲ್ ಮೆಸೇಜ್ ಕೊಟ್ಟ ನಟ ಧನ್ವೀರ್
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿ ಇಡೀ ದೇಶದೆಲ್ಲೆಡೆ ಸುದ್ದಿಯಾಗಿದೆ. ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಇಷ್ಟೆಲ್ಲ ಐಷಾರಾಮಿ ವ್ಯವಸ್ಥೆ ಇದೆಯೇ ಎಂಬ ಬಗ್ಗೆ ಸಾರ್ವಜನಿಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕೂಡ ಮುಜುಗರಕ್ಕೀಡಾಗಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಅವರು ವಿಶೇಷ ಸಭೆ ಕರೆದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಇನ್ನು ಇದೇ ಕೇಸ್ ಸಂಬಂಧ ನಟ ದರ್ಶನ್ ಆಪ್ತ ಹಾಗೂ ನಟ ಧನ್ವೀರ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಧನ್ವೀರ್ ಸೋಷಿಯಲ್ ಮೀಡಿಯಾದಲ್ಲಿ ಸ್ಪೆಷಲ್ ಫೋಟೋ ಹಂಚಿಕೊಂಡು ಕುತೂಹಲ ಮೂಡಿಸಿದ್ದಾರೆ.
ಹೌದು, ನಟ ದರ್ಶನ್ ಜೈಲು ವಿವಾದ ಸಂಬಂಧ ಸಿಸಿಬಿ ವಿಚಾರಣೆಗೆ ನಟ ಧನ್ವೀರ್ ಗೌಡ ಹಾಜರಾಗಿದ್ದರು. ಅವರ ಮೊಬೈಲ್ ವಶಕ್ಕೆ ಪಡೆದು ತಾಂತ್ರಿಕ ತಪಾಸಣೆ ಸಹ ನಡೆಸಲಾಗಿದೆ. ಜೈಲಿನಲ್ಲಿ ರಾಜಾತಿಥ್ಯ ವಿಡಿಯೋಗಳು ವೈರಲ್ ಆರೋಪದ ಹಿನ್ನೆಲೆಯಲ್ಲಿ ಧನ್ವೀರ್ ಅವರನ್ನು ವಿಚಾರಣೆ ನಡೆಸಲಾಗಿತ್ತು. ಆದರೆ, ಹೆಚ್ಚಿನ ತನಿಖೆಯ ನಂತರ ಧನ್ವೀರ್ ಅವರ ಮೊಬೈಲ್‍ನಲ್ಲಿ ಯಾವುದೇ ವಿಡಿಯೋಗಳು ಶೇರ್ ಆಗಿಲ್ಲ ಎಂದು ತಿಳಿದುಬಂದಿರುವುದಾಗಿ ಮೂಲಗಳು ಹೇಳಿವೆ.

ನಟ ಧನ್ವೀರ್ ಮೊಬೈಲ್ ಇಂದ ಯಾವುದೇ ವೀಡಿಯೊಗಳು ಹೋಗಿಲ್ಲ ಎಂದು ವರದಿ ನೀಡಲಾಗಿದೆ. ಜೈಲಿನಲ್ಲಿ ರಾಜಾತಿಥ್ಯದ ವೀಡಿಯೊ ಹಂಚಿಕೆ ಮಾಡಿದ್ದ ಆರೋಪದಡಿ ಸಿಸಿಬಿ ಪೊಲಿಸರು ನಿನ್ನೆಯಿಂದಲೂ ನಟ ಧನ್ವೀರ್ ಅವರನ್ನು ವಿಚಾರಣೆ ನಡೆಸಿದ್ದರು. ಧನ್ವೀರ್ ಫೋನ್ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದರು. ಆದರೆ ಧನ್ವೀರ್ ಮೊಬೈಲ್‌ನಿಂದ ಯಾವುದೇ ವೀಡಿಯೊಗಳು ಹೋಗಿಲ್ಲ ಎಂದು ಸಿಸಿಬಿ ರಿಪೋರ್ಟ್ ಮಾಡಿದೆಯಂತೆ.
ಜೈಲು ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ವೀರ್ ಮೇಲೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ಇನ್ನು ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆ ಧನ್ವೀರ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಸ್ಪೆಷಲ್ ಫೋಟೋ ಹಂಚಿಕೊಂಡಿದ್ದಾರೆ. ನಟ ದರ್ಶನ್ ಅವರೊಂದಿಗೆ ತೆಗೆಸಿಕೊಂಡಿರುವ ಫೋಟೋ ಶೇರ್ ಮಾಡಿದ್ದು, ಇದರಲ್ಲಿ ಹಾರ್ಟ್ ಮತ್ತು ಸ್ಟಾರ್ ಇಮೋಜಿಯನ್ನು ಹಾಕಿದ್ದಾರೆ. ಧನ್ವೀರ್ ಹಂಚಿಕೊಂಡಿರುವ ಫೋಟೋ ನೋಡಿ ದರ್ಶನ್ ಫ್ಯಾನ್ ಖುಷಿಪಟ್ಟಿದ್ದಾರೆ.
ಅಧಿಕಾರಿಗಳ ಮೇಲೆ ಕ್ರಮ
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕಾನೂನು ಬಾಹಿರ ಚಟವಟಿಕೆಗಳು ನಡೆದಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಘಟನೆಯ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಕಾರಾಗೃಹದ ಚೀಫ್ ಸೂಪರಿಂಟೆಂಡೆಂಟ್ ಅವರನ್ನ ಟ್ರಾನ್ಸ್‌ಫರ್ ಮಾಡಿ, ಚೀಫ್ ಸೂಪರಿಂಟೆಂಡೆಂಟ್ ಹುದ್ದೆಗೆ ಐಪಿಎಸ್ ಅಧಿಕಾರಿಯನ್ನು ನಿಯೋಜಿಸುವುದಾಗಿ ಹೇಳಿದ್ದಾರೆ.












Click it and Unblock the Notifications