Darshan Thoogudeepa: ‘ದನ ಇದ್ದಂಗೆ ಇದ್ದಾನೆ...’ ನಟ ದರ್ಶನ್‌ಗೆ ಜಾಡಿಸಿದ ಪತ್ರಕರ್ತ ಅಜಿತ್ ಹನುಮಕ್ಕನವರ್!
ದರ್ಶನ್ ತೂಗುದೀಪ್ ವಿಚಾರದಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ್ ಹಾಗೂ ದರ್ಶನ್ ಅಭಿಮಾನಿಗಳ ಜಗಳ ಜೋರಾಗಿರುವ ಈ ಸಮಯದಲ್ಲೇ, ಪರಪ್ಪನ ಅಗ್ರಹಾರದಲ್ಲಿ ದರ್ಶನ್ ತೂಗುದೀಪ್ & ಗ್ಯಾಂಗ್ ಕಳ್ಳಾಟದ ಬಗ್ಗೆ ಮತ್ತೊಮ್ಮೆ ಬೆಂಕಿಯೇ ಹೊತ್ತಿದೆ. ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಇದೀಗ, ದರ್ಶನ್ ತೂಗುದೀಪ್‌ಗೆ 'ದನ ಇದ್ದಂಗೆ ಇದ್ದಾನೆ..' ಅಂತಾ ಹೇಳಿರುವ ವಿಡಿಯೋ ಇಂಟರ್‌ನೆಟ್ & ಸೋಷಿಯಲ್ ಮೀಡಿಯಾ ಪೂರ್ತಿ ಸಂಚಲನ ಸೃಷ್ಟಿ ಮಾಡಿದೆ! ಹಾಗಾದ್ರೆ ಪತ್ರಕರ್ತ ಅಜಿತ್ ಹನುಮಕ್ಕನವರ್, ನಟ ದರ್ಶನ್ ಬಗ್ಗೆ ಹೀಗೆ ದಿಢೀರ್ ಹೇಳಿದ್ದು ಏಕೆ?
ಕನ್ನಡ ಸಿನಿಮಾ ರಂಗದಲ್ಲಿ ಸ್ಟಾರ್ ಆಗಿ ದೊಡ್ಡ ಸೌಂಡ್ ಮಾಡುತ್ತಿದ್ದ ದರ್ಶನ್‌ಗೆ ಸಂಕಷ್ಟ. ದರ್ಶನ್ ತೂಗುದೀಪ್ & ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನ ಒಳಗೆ ನೆಮ್ಮದಿಯಾಗಿ ಊಟ & ತಿಂಡಿ ಮಾತ್ರವಲ್ಲ ಎಣ್ಣೆ ಹೊಡೆಯುತ್ತಾ, ಬಿರಿಯಾನಿ ತಿಂದು, ಟೀ ಕುಡಿದು ಸಿಗರೇಟು ಕೂಡ ಸೇದುತ್ತಾ ಮಜಾ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹಾಗೇ ದರ್ಶನ್ ಜೈಲು ಒಳಗೆ ಕೂತು, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಲ್ಲಿ ಸಿಗರೇಟು ಸೇದುತ್ತಾ & ನಟೋರಿಯಸ್ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಮಾತನಾಡುತ್ತಾ ಕುಳಿತಿದ್ದ ಫೋಟೋಸ್ ವೈರಲ್ ಆಗಿತ್ತು. ಅಲ್ಲದೆ ವಿಡಿಯೋ ಕಾಲ್ ಮಾಡಿ ಜೈಲಿನಿಂದ ಮಾತನಾಡಿದ್ದ ವಿಡಿಯೋ ಕೂಡ ವೈರಲ್ ಆಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಈಗ, ದರ್ಶನ್ ತೂಗುದೀಪ್ ಅವರನ್ನ 'ದನ ಇದ್ದಂಗೆ ಇದ್ದಾನೆ...' ಎಂದಿದ್ದಾರೆ. ಈ ವಿಡಿಯೋ ಫುಲ್ ವೈರಲ್ ಆಗುತ್ತಿದೆ.

'ದನ ಇದ್ದಂಗೆ ಇದ್ದಾನೆ...' ಅಂದ್ರಾ?
ದರ್ಶನ್ ತೂಗುದೀಪ್ & ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿ ಮಜಾ ಮಾಡುತ್ತಿರುವ ಕುರಿತು ನ್ಯೂಸ್ ಓದುವ ಸಮಯದಲ್ಲಿ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರು ಗರಂ ಆಗಿದ್ದು, ನಟೋರಿಯಸ್ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ದರ್ಶನ್ ತೂಗುದೀಪ್ ಕೂತಿರುವ ಫೋಟೋ ಬಗ್ಗೆ ಕಮೆಂಟ್ ಮಾಡಿದ್ದಾರೆ. ಈ ಸಮಯದಲ್ಲಿ, ದರ್ಶನ್ ಅವರು ನಾನು ಸೊರಗಿದ್ದೇನೆ ಅಂತಾ ಕೋರ್ಟ್ ಬಳಿ ಮನವಿ ಮಾಡಿ ಮನೆ ಊಟ ಕೇಳಿದ್ದಾರೆ. ಈ ಫೋಟೋ ನೋಡಿದರೆ ಗೊತ್ತಾಗುತ್ತೆ ದರ್ಶನ್ ಸಣ್ಣ ಅಗಿಲ್ಲ ಅಂತಾ ವಿವರಣೆ ನೀಡಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ಬಗ್ಗೆ ಪತ್ರಕರ್ತ ಅಜಿತ್ ಹನುಮಕ್ಕನವರ್, 'ದನ ಇದ್ದಂಗೆ ಇದ್ದಾನೆ...' ಅಂತಾ ಹೇಳುವ ಮೂಲಕ ಬೆಂಕಿ ಹೊತ್ತಿಕೊಂಡಿದೆ! ಅಜಿತ್ ಅವರ ವಿಡಿಯೋ ಈಗ ಫುಲ್ ವೈರಲ್ ಆಗುತ್ತಿದ್ದು, ಸೋಷಿಯಲ್ ಮೀಡಿಯಾ ತುಂಬಾ ಹರಿದಾಡುತ್ತಿದೆ.
ನಟ ದರ್ಶನ್‌ಗೆ ಜಾಮೀನು ಸಿಗಲ್ಲ?
ದರ್ಶನ್ ತೂಗುದೀಪ್ ಅವರಿಗೆ ಪರಪ್ಪನ ಅಗ್ರಹಾರ ಜೈಲಲ್ಲಿ ಕೂಡ, ಸಿಗರೇಟ್ ಸಿಕ್ಕಿದ್ದು ಹೇಗೆ? ಎಂಬ ಪ್ರಶ್ನೆ ಇಡೀ ಕರ್ನಾಟಕದ ಜನರನ್ನು ಈಗ ಕಾಡುತ್ತಿದೆ. ಹೀಗಾಗಿ, ಮುಂದೆ ಯಾವ ಕ್ರಮ ಕೈಗೊಳ್ಳಲಾಗುತ್ತೆ? ಅನ್ನೋದನ್ನ ಕೂಡ ಕಾದು ನೋಡಬೇಕು. ಇದರ ಜೊತೆಯಲ್ಲಿ ವಿಡಿಯೋ ಕಾಲ್ ಕೂಡ ಮಾಡಿದ್ದಾರೆ. ದರ್ಶನ್ ತೂಗುದೀಪ್ ವಿಡಿಯೋ ಕಾಲ್ ಮಾಡಿದ ಬಗ್ಗೆ ಸಾಕ್ಷಿ ಸಿಕ್ಕಿ ಬಿದ್ದಿರುವುದು ಮತ್ತಷ್ಟು ಗಂಡಾಂತರ ತರಿಸಿದೆ. ಹಾಗೇ ಜಾಮೀನು ಸಿಗುವುದು ಕೂಡ ಮತ್ತಷ್ಟು ಕಷ್ಟ ಆಗಲಿದೆ ಎಂಬ ಮಾತು ಕೇಳಿಬಂದಿದೆ. ಈ ನಡುವೆ ಬೇರೆ ಜೈಲಿಗೆ ಶಿಫ್ಟ್ ಮಾಡೋದಕ್ಕೆ ತಯಾರಿಗಳು ಕೂಡ ಸಾಗಿವೆ.
ಸಾಲು ಸಾಲು ಸಿನಿಮಾ ರಿಲೀಸ್!
ಒಟ್ನಲ್ಲಿ, ದರ್ಶನ್ ಅವರು ಇದೀಗ ಜೈಲಿನಿಂದ ಹೊರಗೆ ಬರಲಿ ಅಂತಾ ಅವರ ಅಭಿಮಾನಿ ಬಳಗ ಕಾಯುತ್ತಿದೆ. ಮತ್ತೊಂದು ಕಡೆ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ತೂಗುದೀಪ ಅವರ ಪರ ಅಭಿಮಾನಿಗಳ ಬೆಂಬಲ ಕೂಡ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ದರ್ಶನ್ ಅವರಿಗೆ ಸಪೋರ್ಟ್ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಕೂಡ ಇದೆ. ಹಾಗೇ ಸಾಲು & ಸಾಲು ಸಿನಿಮಾ ತೆರೆಗೆ ತರುವ ಪ್ಲಾನ್ ಕೂಡ ಹಾಕಿಕೊಂಡಿದ್ದಾರೆ ದರ್ಶನ್ ಪರ ನಿಂತಿರುವ ನಿರ್ದೇಶಕ ಮತ್ತು ನಿರ್ಮಾಪಕರು ಹಾಗೂ ಕಲಾವಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications