ದರ್ಶನ್ ಪ್ರಕರಣ ವರದಿಗೆ ಹೋದ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ?

ದರ್ಶನ್ ತೂಗುದೀಪ ಕೇಸ್ ಈಗ ದೊಡ್ಡ ತಲೆನೋವು ತಂದಿದ್ದು, ಸಿದ್ದರಾಮಯ್ಯ ಸರ್ಕಾರಕ್ಕು ಈ ಪ್ರಕರಣ ನಿಭಾಯಿಸುವುದು ದೊಡ್ಡ ತಲೆನೋವಾಗಿದೆ. ಇದೇ ಸಮಯದಲ್ಲಿ ಪೊಲೀಸರಿಂದ ಪತ್ರಕರ್ತರ ಮೇಲೂ ಹಲ್ಲೆ ನಡೆದ ಗಂಭೀರ ಆರೋಪ ಕೇಳಿಬಂದಿದೆ ಹಾಗಾದ್ರೆ ಅಸಲಿಗೆ ಆಗಿದ್ದಾದ್ರು ಏನು? ಪತ್ರಕರ್ತರ ಮೇಲೆ ಪೊಲೀಸರು ನಿಜವಾಗಿಯೂ ಹಲ್ಲೆ ಮಾಡಿದ್ದಾರಾ? ಮುಂದೆ ಓದಿ.

ಅಂದಹಾಗೆ ನಟ ದರ್ಶನ್ ತೂಗುದೀಪ ವಿರುದ್ಧದ ಕೊಲೆ ಕೇಸ್ ಕ್ಷಣ ಕ್ಷಣಕ್ಕೂ ಒಂದು ತಿರುವು ಪಡೆಯುತ್ತಿದೆ. ಈ ಪೈಕಿ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೂ ಪ್ರಕರಣವು ಈಗ ದೊಡ್ಡ ತಲೆನೋವು ತಂದಿದೆ. ಸಾಲು ಸಾಲು ಪ್ರಕರಣಗಳ ನಡುವೆ ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಕೂಡ ಅರೆಸ್ಟ್ ಆಗಿದ್ದಾರೆ. ಈ ಸಮಯದಲ್ಲಿ ದರ್ಶನ್ ಇರುವ ಪೊಲೀಸ್ ಠಾಣೆ ಎದುರಲ್ಲೇ ಪೊಲೀಸ್ ಅಧಿಕಾರಿ ಒಬ್ಬರು ಪತ್ರಕರ್ತನ ಮೇಲೆ ಕೈಮಾಡಿ, ತಳ್ಳಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಧ್ಯಮಗಳಲ್ಲೂ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಈ ಮ್ಯಾಟರ್ ಗೃಹ ಸಚಿವ ಪರಮೇಶ್ವರ್ ಅವರನ್ನೂ ತಲುಪಿದೆ.

Allegedly Darshan Thoogudeepa Is Getting Good Support From Police Officers On Police Station

ಪತ್ರಕರ್ತರ ತೀವ್ರ ಆಕ್ರೋಶ!

ಮೊದಲೇ ಪೊಲೀಸ್ ಅಧಿಕಾರಿ ವರ್ತನೆಯಿಂದ ಮಾಧ್ಯಮ ಸಿಬ್ಬಂದಿ ಆಕ್ರೋಗೊಂಡಿದ್ದಾರೆ. ಈ ಸಮಯದಲ್ಲಿ ದರ್ಶನ್ ಅಭಿಮಾನಿ ಇಂದು ಮಾಧ್ಯಮಗಳ ಎದುರಿಗೆ ಬಂದು ಮಾಧ್ಯಮಗಳ ಕುರಿತು ತುಂಬ ಕೀಳಾಗಿ ಮಾತನಾಡಿದ್ದಾರೆ. ಈ ವೇಳೆ ಅಲ್ಲಿದ್ದ ಮಾಧ್ಯಮ ಸಿಬ್ಬಂದಿ ದಿಢೀರ್ ರೊಚ್ಚಿಗೆದ್ದಿದ್ದು ಆತನ ಮುಖಚರಿ ಸೆರೆಹಿಡಿಯಲು ಹೋಗಿದ್ದಾರೆ. ಈ ವೇಳೆ ಹೆದರಿದ ದರ್ಶನ್ ಅಭಿಮಾನಿ, ಆ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಇಷ್ಟಾದರೂ ಮಾಧ್ಯಮಗಳ ಸಿಬ್ಬಂದಿ ಆತನ ಹಿಂದೆ ಓಡಿದ್ದಾರೆ. ಆಗ ತಕ್ಷಣ ಪೊಲೀಸರು ಆತನನ್ನ ಪೊಲೀಸ್ ಠಾಣೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಹಾಗೇ ಆತನಿಗೆ ಅವರದ್ದೇ ಭಾಷೆಯಲ್ಲಿ ಬುದ್ಧಿ ಹೇಳಿ, ರುಚಿ ತೋರಿಸಿದ್ದಾರೆ ಎನ್ನಲಾಗಿದೆ.

ದರ್ಶನ್ & ಗ್ಯಾಂಗ್‌ಗೆ ಅನ್ನ-ಸಾರು!

ಪ್ರತಿದಿನ ಎಣ್ಣೆ ಹೊಡೆದು, ಸಖತ್ ಎಂಜಾಯ್ ಮಾಡುತ್ತಾ ಮಾಂಸ ತಿನ್ನುತ್ತಿದ್ದ ನಟ ದರ್ಶನ್ & ಗ್ಯಾಂಗ್ ಈಗ ಅನ್ನ ಸಾರು ತಿಂದು ಮಲಗುವ ಪರಿಸ್ಥಿತಿ ಬಂದಿದೆ. ಪೊಲೀಸರು ಆರೋಪಿಗಳ ತಂಡಕ್ಕೆ ಅನ್ನ ಸಾರು ನೀಡಿ, ಚಾಪೆ ಕೊಟ್ಟು ಮಲಗಿಸಿದ್ದಾರೆ. ಈ ಮೂಲಕ ಕೊಲೆ ಆರೋಪದ ಹಿನ್ನೆಲೆ ಕಂಬಿ ಹಿಂದೆ ಬಿದ್ದಿರುವ, ಸೋ ಕಾಲ್ಡ್ ಡಿ-ಬಾಸ್ ಇದೀಗ ಹಿಂಸೆ ಅನುಭವಿಸುತ್ತಿದ್ದಾರೆ. ಇದೇ ರೀತಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ದರ್ಶನ್ ಅವರ ಬೆನ್ನುಹತ್ತುವ ಅಪಾಯ ಕಾಡುತ್ತಿದ್ದು, ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ತೂಗುದೀಪ ದರ್ಶನ್ ಅವರ ಅಭಿಮಾನಿಗಳು ಸೈಲೆಂಟ್ ಆಗುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+