Amitabh Bachchan: ಅಮಿತಾಬ್ ಬಚ್ಚನ್ ದಿಢೀರನೇ ಆಸ್ಪತ್ರೆಗೆ ದಾಖಲು!

ಬಾಲಿವುಡ್‌ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಅನಾರೋಗ್ಯದ ಹಿನ್ನೆಲೆ ದಿಢೀರನೇ ಆಸ್ಪತ್ರೆಗೆ ದಾಖಲಾಗಿದ್ದಾರೆ. 81 ವರ್ಷದ ಹಿರಿಯ ನಟರಾದ ಅಮಿತಾಬ್‌ ಬಚ್ಚನ್‌ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಮುಂಜಾನೆ ಹಿರಿಯ ನಟ ಅಮಿತಾಬ್ ಬಚ್ಚನ್ ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

Amitabh Bachchan Admitted To Kokilaben Hospital

ಅಮಿತಾಬ್ ಬಚ್ಚನ್ ಅವರಿಗೆ ವಯೋಸಹಜವಾಗಿ ಇತ್ತೀಚಿನ ಕೆಲ ಸಮಯದಿಂದ ಪದೇ ಪದೇ ಅನಾರೋಗ್ಯ ಉಂಟಾಗುತ್ತಿದ್ದು, ಅಮಿತಾಬ್ ಬಚ್ಚನ್ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನೂ ಹಿರಿಯ ನಟರಾದ ಅಮಿತಾಬ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗುವ ಒಂದು ಗಂಟೆ ಮೊದಲು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ' T4950- ಎಂದೆಂದಿಗೂ ಕೃತಜ್ಞತೆಯಲ್ಲಿ' ಎಂದು ಬರೆದುಕೊಂಡಿದ್ದರು.

ಸದ್ಯ ಹಿರಿಯ ನಟನ ಆರೋಗ್ಯದ ಬಗ್ಗೆ ಅಭಿಮಾನಿಗಳು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದು, ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದಾಕ್ಷಣ ಅಮಿತಾಭ್​ ಬಚ್ಚನ್​ ಅವರಿಗೆ ಹೃದಯಕ್ಕೆ ಸಂಬಂಧಿಸಿದ ತೊಂದರೆ ಎದುರಾಗಿರಬಹುದಾ ಎಂಬ ಅನುಮಾನ ಮೂಡುತ್ತದೆ. ಆದರೆ ಕಾಲಿನ ರಕ್ತನಾಳದ ಸಮಸ್ಯೆ ಇರುವುದರಿಂದ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರ ಆರೋಗ್ಯದ ಕುರಿತು ಹೆಚ್ಚಿನ ಮಾಹಿತಿ ಬರಬೇಕಿದೆ. ಸ್ಪತ್ರೆ ಅಥವಾ ಕುಟುಂಬದವರು ಹೆಲ್ತ್​ ಅಪ್​ಡೇಟ್​ ನೀಡಲಿ ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+