Anchor Anushree: ಆ್ಯಂಕರ್ ಅನುಶ್ರೀ ಮದುವೆಗೆ ದಿನಗಣನೆ ಆರಂಭ; ವೆಡ್ಡಿಂಗ್ ಕಾರ್ಡ್ ಇಲ್ಲಿದೆ ನೋಡಿ
ಕರಾವಳಿ ಚೆಲುವೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಸುದ್ದಿ ವೈರಲ್ ಆಗುತ್ತಿದೆ. ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಅನುಶ್ರೀ ಅವರು ಕೊನೆಗೂ ಗುಡ್ ನ್ಯೂಸ್ ನೀಡಿದ್ದಾರೆ. ಆದರೆ, ಈ ಮಾತಿನ ಮಲ್ಲಿಯನ್ನ ಕೈ ಹಿಡಿಯುವ ಹುಡುಗ ಯಾರು ಅಂತ ಗೊತ್ತಾಯ್ತಾ? ಮದುವೆ ಯಾವಾಗ? ಎಂಬ ಹಲವು ಪ್ರಶ್ನೆಗಳಿಗೆ ಈಗಾಗಲೇ ಉತ್ತರ ಸಿಕ್ಕಿದೆ.
ಕನ್ನಡ ನಿರೂಪಕಿ, ನಟಿ ಅನುಶ್ರೀ ಮದುವೆಗೆ ದಿನಗಣನೆ ಶುರುವಾಗಿದೆ. ಮುಂದಿನ ವಾರವೇ ಅನುಶ್ರೀ ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ. ಆದರೆ, ನಟಿ ಹಾಗೂ ನಿರೂಪಕಿ ಅನುಶ್ರೀ ಅವರು ಈ ಬಗ್ಗೆ ಪ್ರತಿಕ್ರಿಯಿಸಿಲ್ಲ. ಇದೀಗ ಅನುಶ್ರೀ ಹಾಗೂ ಉದ್ಯಮಿ ರೋಷನ್ ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗುತ್ತಿದೆ. ಬಹಳ ಸಿಂಪಲ್ ಆಗಿರುವ ಇನ್ವಿಟೇಷನ್ ಅಷ್ಟೇ ವಿಶೇಷವಾಗಿದೆ. ಅನುಶ್ರೀ ಮದುವೆ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಅನುಶ್ರೀ ಅವರು ಗುಡ್ ನ್ಯೂಸ್ ನೀಡಿದ್ದು, ಇದೇ ತಿಂಗಳು ಅನುಶ್ರೀ ಹಾಗೂ ರೋಷನ್ ಅವರ ಮದುವೆ ನಡೆಯಲಿದೆ.

ಉದ್ಯಮಿ ರಾಮಮೂರ್ತಿ ಅವರ ಪುತ್ರ ರೋಷನ್ ಅವರೊಟ್ಟಿಗೆ ನಟಿ ಹಾಗೂ ನಿರೂಪಕಿ ಅನುಶ್ರೀ ಹಸೆಮಣೆ ಏರುತ್ತಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನಡೆಯಲಿದೆ. ಮದುವೆ, ಜವಳಿ ಸೇರಿದಂತೆ ಹಲವು ರೀತಿಯಲ್ಲಿ ಈಗಾಗಲೇ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಆಗಸ್ಟ್ 28ರಂದು ಅದ್ಧೂರಿ ಕಲ್ಯಾಣೋತ್ಸವ ನಡೆಯಲಿದ್ದು, ಬೆಳಗ್ಗೆ 10.05 ನಿಮಿಷಕ್ಕೆ ಮುಹೂರ್ತ ನಿಗದಿಯಾಗಿದೆ. ಕನಕಪುರ ರಸ್ತೆಯ ಕಗ್ಗಲಿಪುರದ ತಿಟ್ಟಹಳ್ಳಿ ಬಳಿಯ ಸಂಭ್ರಮ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ರೆಸಾರ್ಟ್‌ನಲ್ಲಿ ಮದುವೆ ನಡೆಯಲಿದೆ.
ಇನ್ನೂ ಮಹಾನಟಿ ಕಾರ್ಯಕ್ರಮದಲ್ಲಿ ಮದುವೆ ಬಗ್ಗೆ ಮಾತನಾಡಿದಾಗ ನಾಚಿಕೊಂಡ ಅನುಶ್ರೀ ಅವರ ಸಿಂಪಲ್ ಆಗಿರುವ ಆಮಂತ್ರಣ ಪತ್ರಿಕೆಯಲ್ಲಿ ಅನುಶ್ರೀ ತಮ್ಮ ಮನದಾಳದ ಮಾತಿಗೆ ಅಕ್ಷರ ರೂಪ ಕೊಟ್ಟಿದ್ದಾರೆ. "ನೀವೆಲ್ಲಾ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ" ಎಂದು ಮುದ್ರಿಸಲಾಗಿದೆ. ಶೀಘ್ರದಲ್ಲೇ ಅನುಶ್ರೀ ತಮ್ಮ ಮದುವೆಯ ಶುಭಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಹಲವು ವರ್ಷಗಳಿಂದ ಆಂಕರ್ ಅನುಶ್ರೀ ಮದುವೆ ಬಗ್ಗೆ ಊಹಾಪೋಹ, ಅಂತೆಕಂತೆ ಸುದ್ದಿ ಹರಿದಾಡುತ್ತಲೇ ಇತ್ತು. ಆದರೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನ ಆಂಕರ್ ಅನುಶ್ರೀ ಅವರು ನೀಡಿರಲಿಲ್ಲ. ಇನ್ನೂ 'ವಿದ್ಯಾಪತಿ' ಸಿನಿಮಾ ಬಿಡುಗಡೆ ವೇಳೆ ಇದೇ ಮದುವೆ ಆಗುವುದಾಗಿ ಹೇಳಿದ್ದರು. ಅದನ್ನು ಕೂಡ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಹೇಳಿದಂತೆಯೇ ಮದುವೆಗೆ ರೆಡಿಯಾಗುತ್ತಿದ್ದಾರೆ. ಮದುವೆ ಆಗುವ ಹುಡುಗ ಹೇಗಿರಬೇಕು ಎನ್ನುವ ಪ್ರಶ್ನೆಗೆ "ಹುಡುಗ ಬಹಳ ರೆಸ್ಪಾನ್ಸಿಬಲ್ ಆಗಿರಬೇಕು. ನನ್ನ ಪರವಾಗಿ ಅಲ್ಲ, ಅವನ ಲೈಫ್ ಬಗ್ಗೆ ರೆಸ್ಪಾನ್ಸಿಬಲ್ ಆಗಿದ್ರೆ ಸಾಕು. ಅವನು ಬದುಕಬೇಕು, ನನ್ನನ್ನು ಬದುಕೋಕೆ ಬಿಡಬೇಕು ಎಂದು ಅನುಶ್ರೀ ಅವರು ಹೇಳಿದ್ದರು.












Click it and Unblock the Notifications