Aanchor Anushree: ಅಪ್ಪು ಬಗ್ಗೆ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಆ್ಯಂಕರ್ ಅನುಶ್ರೀ!
ನಟ ದಿ. ಪುನೀತ್ ರಾಜ್ ಕುಮಾರ್ ಅವರು ಕನ್ನಡಿಗರನ್ನು ಅಗಲಿ ಅಕ್ಟೋಬರ್ 29ಕ್ಕೆ ಮೂರು ವರ್ಷಗಳಾಗಿವೆ. ಅಪ್ಪು ಅವರ ಸ್ಮರಣಾರ್ಥವಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಅನ್ನಸಂತರ್ಪಣೆ, ದಾನ ಹಾಗೂ ರಕ್ತದಾನ ಸೇರಿದಂತೆ ಹಲವು ಅಭಿಮಾನಿಗಳು ಅವರ ಸ್ಮರಣೆಯನ್ನು ಮಾಡುತ್ತಿದ್ದಾರೆ. ಅಪ್ಪು ಅವರ ಅಪ್ಪಟ ಅಭಿಮಾನಿ ಆ್ಯಂಕರ್ ಅನುಶ್ರೀ ಅವರು ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಆ್ಯಂಕರ್ ಅನುಶ್ರೀ ಅವರು ಅಪ್ಪು ಅವರ ಅಪ್ಪಟ ಅಭಿಮಾನಿಗಳಲ್ಲಿ ಒಬ್ಬರು. ಅಪ್ಪು ಅವರೊಂದಿಗೆ ಅವರು ಭಾವನಾತ್ಮಕ ಸಂಬಂಧವನ್ನು ಹೊಂದಿದ್ದಾರೆ. ಅಪ್ಪು ಅವರೊಂದಿಗಿನ ಸಂದರ್ಶನ ಹಾಗೂ ಅವರ ಬಗ್ಗೆ ಮಾತನಾಡುವಾಗೆಲ್ಲ ಅನುಶ್ರೀ ಅವರು ಭಾವನಾತ್ಮಕವಾಗಿ ಮಾತನಾಡಿದ್ದಾರೆ.

ಇಂದು (ಅಕ್ಟೋಬರ್ 29) ಪುನೀತ್ ರಾಜ್‌ಕುಮಾರ್ ಅವರು ಪುಣ್ಯಸ್ಮರಣೆ. ಹಲವು ಅಭಿಮಾನಿಗಳು ಇಂದು ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಹಾಗೂ ಅವರೊಂದಿಗಿನ ಒಡನಾಟದ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಅದರಲ್ಲಿ ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿದೆ... ಎನ್ನುವ ಮೂಲಕ ಪ್ರಾರಂಭಿಸಿದ್ದಾರೆ. ಮುಂದುವರಿದು ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ. ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ.
ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ. ನಿಮ್ಮ ನಗುವ ಮೊಗವ ನೋಡಲು ಕೋಟಿ ಕಂಗಳು ಕಾಯುತ್ತಿದೆ. ಮಿಸ್ ಯೂ ಅಪ್ಪು ಸರ್ ಎಂದು ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ. ನೀವಿಲ್ಲದೆ ಅಭಿಮಾನ ಇಲ್ಲ. ನೀವಿಲ್ಲದೆ ಅಭಿಮಾನಕ್ಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ ಎಂದಿದ್ದಾರೆ.

ಪುನೀತ್ ಪುಣ್ಯತಿಥಿ; ಹುಬ್ಬಳ್ಳಿಯಲ್ಲಿ ಮಟನ್ ಊಟ
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ, ಗಂಡು ಮೆಟ್ಟಿನ ನಾಡು ಹುಬ್ಬಳ್ಳಿ ಚನ್ನಮ್ಮ ಸರ್ಕಲ್ ಬಳಿ, ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಅಪ್ಪು ಭಾವಚಿತ್ರದ ಮುಂದೆ ಮಟನ್ ಕಿಮಾ, ಮಟನ್ ಮಸಾಲಾ, ಚಿಕನ್ ಬಿರಿಯಾನಿ ಊಟವನ್ನು ಇರಿಸಿ ಪುಣ್ಯಸ್ಮರಣೆ ಮಾಡಲಾಯಿತು.
ಈ ಪುಣ್ಯತಿಥಿಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಭಾಗಿಯಾಗಿದ್ದು, ಅಪ್ಪು ಅಭಿಮಾನಿಗಳು ಬರೊಬ್ಬರಿ 10 ಕ್ವಿಂಟಲ್ ಚಿಕನ್ ಬಿರಿಯಾನಿ ಮಾಡಿ ಸಾರ್ವಜನಿಕರಿಗೆ ಹಂಚಿದರು. ಪುನೀತ್ ಪುಣ್ಯಸ್ಮರಣೆಯ ಭಾಗವಾಗಿ ಇಲ್ಲಿನ ನೂರಾರು ಜನರಿಗೆ ಉಚಿತವಾಗಿ ಚಿಕನ್ ಬಿರಿಯಾನಿ ಹಂಚಲಾಗಿದೆ.
ಪುನೀತ್ ದೇವಾಲಯದಲ್ಲಿ ವಿಶೇಷ ಪೂಜೆ: ಇನ್ನು ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಇದು ರಾಜ್ಯದಾದ್ಯಂತ ವಿಶೇಷ ಪೂಜೆಗಳನ್ನು ಮಾಡಿದ್ದಾರೆ. ಅಲ್ಲದೇ ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥವಾಗಿ ಉಚಿತವಾಗಿ ಬಾಡೂಟ ಹಂಚಿದ್ದಾರೆ.
ಇನ್ನು ಹಾವೇರಿ ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿರುವ ಅಪ್ಪು ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಮಾಡಲಾಗಿದೆ. ಅಕ್ಕಪಕ್ಕದ ಹಳ್ಳಿಯ ಜನರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಬಂದು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಅವರ ಸ್ಮರಣೆಯನ್ನು ಸಹ ಮಾಡಿದ್ದಾರೆ.












Click it and Unblock the Notifications