ಆಂಧ್ರ ಡಿಸಿಎಂ, ನಟ ಪವನ್ ಕಲ್ಯಾಣ್‌ಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ, ಏನಾಯ್ತು?
ಟಾಲಿವುಡ್ ನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಪವನ್ ಕಲ್ಯಾಣ್ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಅವರ ಜನಸೇನಾ ಪಾರ್ಟಿ ಹಂಚಿಕೊಂಡಿದೆ. ಇದನ್ನು ಕಂಡು ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.
ಪವನ್ ಕಲ್ಯಾಣ್ ಅವರು ಶನಿವಾರ ರಾತ್ರಿಯೇ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ವೈದ್ಯರು ಸ್ಕ್ಯಾನ್ ಸೇರಿದಂತೆ ಕೆಲವು ಪರೀಕ್ಷೆಗಳನ್ನು ನಡೆಸಿದ್ದು ಒಂದೆರಡು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ ಪವನ್ ಕಲ್ಯಾಣ್ ಅವರಿಗೆ ಹೆಚ್ಚುವರಿ ಪರೀಕ್ಷೆಗಳು ಮಾಡುವ ಅಗತ್ಯವಿದ್ದು ಇದಕ್ಕೆ ಕಾಲಾವಕಾಶವನ್ನೂ ಕೇಳಿದ್ದಾರೆ ಎಂದು ವರದಿಯಾಗಿದೆ.

ಆದರೆ ಪವನ್ ಕಲ್ಯಾಣ್ ಅವರು ರೆಗ್ಯುಲರ್ ಚೆಕಪ್‌ಗೆ ಒಳಗಾಗಿಲ್ಲ. ಬಹುಶಃ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿರುವ ನಿಯಮಿತ ತಪಾಸಣೆಯ ಭಾಗವಾಗಿರಲಿಲ್ಲ ಎಂದು ತಿಳಿದುಬಂದಿದೆ.
ಪವನ್ ಕಲ್ಯಾಣ್ ಅವರು ಹಲವಾರು ವರ್ಷಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅವರ ಪರಿಸ್ಥಿತಿ ಹದಗೆಟ್ಟಿದ್ದು, ಅವರ ಆರೋಗ್ಯ ಸರಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಪವನ್ ಕಲ್ಯಾಣ್ ಅವರು ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೂ ಹೋಗಿ ಪವಿತ್ರ ಸ್ನಾನ ಮಾಡಿದ್ದರು.

ಉಪಮುಖ್ಯಮಂತ್ರಿ ಆಗಿರುವ ಕಾರಣ ಅವರ ದಿನವಿಡೀ ಬಿಡುವಿಲ್ಲದ ದಿನಚರಿಯಿಂದಾಗಿ ಅವರ ಆರೋಗ್ಯ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. ಪವನ್ ಅವರು ಆಸ್ಪತ್ರೆಯಲ್ಲಿರುವ ಫೋಟೋಗಳನ್ನು ಕಂಡು ಅವರ ಅಭಿಮಾನಿಗಳು ಕೂಡ ಶಾಕ್‌ಗೆ ಒಳಗಾಗಿದ್ದಾರೆ. ಆದರೆ, ಇದು ಯಾವುದೇ ಆತಂಕಕಾರಿ ಸಮಸ್ಯೆಯಲ್ಲದ ಕಾರಣ ಚಿಂತಿಸಬೇಕಾಗಿಲ್ಲ ಎಂದು ಹೇಳಲಾಗಿದೆ. ಸದ್ಯ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ತಮ್ಮ ದೈನಂದಿನ ಕೆಲಸದಲ್ಲಿ ತೊಡಗಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ (ಟ್ವಿಟರ್) ಅಧಿಕೃತ ಮಾಹಿತಿ ಹಂಚಕೊಂಡಿರುವ ಜನ ಸೇನಾ ಪಾರ್ಟಿ, "ಆಂಧ್ರದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾದರು. ಅವರಿಗೆ ಸ್ಕ್ಯಾನಿಂಗ್ ಮತ್ತು ಇತರೆ ಸಂಬಂಧಿತ ಪರೀಕ್ಷೆಗಳನ್ನು ನಡೆಸಲಾಯಿತು.

ವರದಿಗಳನ್ನು ಪರಿಶೀಲಿಸಿದ ವೈದ್ಯರು ಪವನ್ ಕಲ್ಯಾಣ್ ಅವರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಇನ್ನೂ ಕೆಲವು ವೈದ್ಯಕೀಯ ಪರೀಕ್ಷೆಗಳ ಅಗತ್ಯವಿದ್ದು, ಉಳಿದ ವೈದ್ಯಕೀಯ ಪರೀಕ್ಷೆಗಳನ್ನು ಈ ತಿಂಗಳ ಕೊನೆಯಲ್ಲಿ ಅಥವಾ ಮಾರ್ಚ್ ಮೊದಲ ವಾರದಲ್ಲಿ ಮಾಡುವುದಾಗಿ ತಿಳಿಸಿದ್ದಾರೆ. ಇದರ ನಡುವೆಯೂ ಅವರು ಬಜೆಟ್ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ" ಎಂದು ತಿಳಿಸಿದೆ.
ಪವನ್ ಕಲ್ಯಾಣ್ ಅವರು ಈಗ ರಾಜಕೀಯದಲ್ಲಿ ಬ್ಯುಸಿಯಾಗಿದ್ದರೂ ಸಿನಿಮಾಗಳತ್ತಲೂ ಗಮನ ಹರಿಸಿದ್ದಾರೆ. ಪವನ್ ಕಲ್ಯಾಣ್ ಅವರು ಐತಿಹಾಸಿಕ ಆಕ್ಷನ್ ಚಿತ್ರವಾದ "ಹರಿ ಹರ ವೀರ ಮಲ್ಲು" ಸೇರಿದಂತೆ ಹಲವು ಸಿನಿಮಾಗಳನ್ನು ಕೈಯಲ್ಲಿಟ್ಟುಕೊಂಡಿದ್ದಾರೆ. ಈ ಸಿನಿಮಾ ಶೀಘ್ರದಲ್ಲೇ ಥಿಯೇಟರ್‌ಗಳಿಗೆ ಬರಲು ಸಿದ್ಧವಾಗಿದ್ದು, ಹರೀಶ್ ಶಂಕರ್ ನಿರ್ದೇಶನದ "ಪಿಎಸ್‌ಪಿಕೆ 28" ಕಮರ್ಷಿಯಲ್ ಎಂಟರ್‌ಟೈನರ್ ಸಿನಿಮಾ ಕೂಡ ಸೆಟ್ಟೇರಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications