Actor Darshan: ನಟ ದರ್ಶನ್ ವಿರುದ್ಧ ಮತ್ತೊಂದು ಕೊಲೆ ಬೆದರಿಕೆ ಆರೋಪ
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದರು. ಅಲ್ಲದೆ ಇದೀಗ ಇನ್ನೇನು ಎಲ್ಲಾ ಮುಗಿತು ಅನ್ನೋದರೊಳಗೆ ದರ್ಶನ್ ವಿರುದ್ಧ ಇದೀಗ ಕೊಲೆ ಬೆದರಿಕೆ ಆರೋಪವೊಂದು ಕೇಳಿಬಂದಿದೆ. ಹಾಗಾದರೆ ಆರೋಪ ಮಾಡಿದವರು ಯಾರು ಹಾಗೂ ಯಾಕೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಇತ್ತೀಚೆಗಷ್ಟೇ ಬಿಡುಗಡೆ ಆಗಿದ್ದರು. ಬೆನ್ನು ನೋವು ಹಿನ್ನೆಲೆ ಮನೆಯಲ್ಲೇ ವಿಶ್ರಾಂತಿ ಪಡೆದು ನಿರಾಳರಾಗುವ ವೇಳೆಯೇ ಇದೀಗ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಗನ್ ಪರವಾನಗಿ ರದ್ದು ಒಂದು ಕಡೆಯಾದರೆ, ಮತ್ತೊಂದೆಡೆ ಕೊಲೆ ಬೆದರಿಕೆ ಆದರೋಪ ಎದುರಾಗಿದೆ.

ಕನ್ನಡ ಚಿತ್ರರಂಗದ ಭಗವಾನ್ ಶ್ರೀಕೃಷ್ಣ ಸಿನಿಮಾದ ನಿರ್ಮಾಪಕ ಭರತ್ ಅವರಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣವನ್ನು ಇದೀಗ ಸ್ವತಃ ನಿರ್ಮಾಪಕರೇ ಕೋರ್ಟ್‌ಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಮುನ್ನ ಹಲವು ನಿರ್ದೇಶಕರು, ನಿರ್ಮಾಪಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಕಳೆದ ಎರಡು ವರ್ಷಗಳ ಹಿಂದೆ ಕನ್ನಡ ಚಿತ್ರರಂಗದ ನಿರ್ಮಾಪಕ ಭರತ್ ಅವರು ಹಲ್ಲೆ ಮಾಡಿ, ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆಂದು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಆದರೆ, ಪೊಲೀಸರು ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರಲಿಲ್ಲ. ಕೆವಲ ಎನ್‌ಸಿಆರ್ ಮಾಡಿಕೊಂಡು ಸುಮ್ಮನಾಗಿಬಿಟಿದ್ದರು. ಬಳಿಕ
ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಮಾಡಿದ್ದಾನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್ & ಗ್ಯಾಂಡ್ ಅಪಹರಿಸಿ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿದ್ದರು ಎನ್ನುವುದು ಪೊಲೀಸ್ ದಾಖಲೆಗಳಲ್ಲಿ ಉಲ್ಲೇಖವಾಗಿದೆ.
ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿ ಜೈಲುವಾಸಲ್ಲಿದ್ದರು. ಇದೀಗ ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ. ಆದರೂ ಅವರ ಮೇಲೆ ಆರೋಪಗಳ ಸರಮಾಲೆಯೇ ಕೇಳಿಬರುತ್ತಿದೆ. ನಿರ್ಮಾಪಕ ಭರತ್ ಅವರು ನಟ ದರ್ಶನ್ ವಿರುದ್ಧ ಕೊಲೆ ಬೆದರಿಕೆ ಎಫ್‌ಐಆರ್ ದಾಖಲಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ.
ನಿರ್ಮಾಪಕ ಭರತ್ ಅವರು ಕಳೆದ 3 ದಿನಗಳ ಹಿಂದಯಷ್ಟೇ ನಟ ದರ್ಶನ್ ಹಾಗೂ ಆತನ ಸ್ನೇಹಿತರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ತಾವು ಕಳೆದ ಎರಡು ವರ್ಷಗಳ ಹಿಂದೆ ಕೆಂಗೇರಿ ಪೊಲೀಸ್ ಠಾಣೆಗೆ ಹೋಗಿ ದರ್ಶನ್ ಹಾಗೂ ಆತನ ಸ್ನೇಹಿತರು ತನಗೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ದಾಖಲಿಸಿದ್ದಾರೆ. ಆದರೆ, ಪೊಲೀಸರು ಎಫ್‌ಐಆರ್ ಮಾಡಿಕೊಳ್ಳದೇ ಕೇವಲ ಎನ್‌ಸಿಆರ್ ಮಾಡಿ ಒಂದಷ್ಟು ದರ್ಶನ್‌ಗೆ ತಿಳಿ ಹೇಳುವುದಾಗಿ ಭರತ್ ಅವರನ್ನು ವಾಪಸ್ ಕಳುಹಿಸಿದ್ದಾರೆ. ಆದರೆ, ಇದೀಗ ಭರತ್ ದರ್ಶನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನವರಿ 20ರಂದು ಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿ ವಿಚಾರಣೆ ಫೆಬ್ರವರಿ 23ರಂದು ವಿಚಾರಣೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.












Click it and Unblock the Notifications