ಮುಸ್ಲಿಂ ಧರ್ಮದ ಹುಡುಗನನ್ನು ಮದುವೆ ಆಗುತ್ತಿದ್ದಾರಾ ಅನುಶ್ರೀ: ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್
ಸ್ಯಾಂಡಲ್ವುಡ್ ನಟಿ ಹಾಗೂ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರ ಮದುವೆ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಹಲವು ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ? ಯಾವಾಗ? ಎಂದು ಕೇಳುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಅನುಶ್ರೀ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಸ್ಯಾಂಡಲ್ವುಡ್ ನಟಿ ಹಾಗೂ ನಿರೂಪಕಿ ಅನುಶ್ರೀ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದ್ದು, ಇದೇ ಆಗಸ್ಟ್ 28 ರಂದು ಬೆಂಗಳೂರು ಹೊರವಲಯದ ರೆಸಾರ್ಟ್ ಒಂದರಲ್ಲಿ ಮದುವೆ ನಡೆಯಲಿದೆ.
ಇನ್ನೂ ಅನುಶ್ರೀ ಅವರುಕೊಡಗು ಮೂಲದ ರೋಷನ್ ಜೊತೆ ಆಗಸ್ಟ್ 28 ರಂದು ಸಪ್ತಪದಿ ತುಳಿಯಲಿದ್ದಾರೆ. ರೋಷನ್ ರಾಮಮೂರ್ತಿ ಅವರ ಪುತ್ರನಾಗಿದ್ದಾರೆ. ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಕೈ ಹಿಡಿಯಲಿದ್ದಾರೆ. ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ' ಎಂದು ಅನುಶ್ರೀ ಅವರು ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.

ಇತ್ತ ಅನುಶ್ರೀ ಅವರ ಮದುವೆ ಸುದ್ದಿ ಅಭಿಮಾನಿಗಳಿಗೆ ಭರ್ಜರಿ ಸಂತಸ ತಂದಿದೆ. ಹೀಗಿರುವಾಗ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ವೈರಲ್ ಆಗುತ್ತಿದೆ. ಇದರಲ್ಲಿ ಅನುಶ್ರೀ ಮದುವೆ ಆಗುತ್ತಿರುವ ಹುಡುಗ ಮುಸ್ಲಿಂ ಧರ್ಮದವರು ಎಂದು ಹೇಳಲಾಗುತ್ತಿದೆ. ಫೇಸ್ಬುಕ್ ಬಳಕೆದಾರರೊಬ್ಬರು ಅನುಶ್ರೀ ಹಾಗೂ ಅವರ ಭಾವಿ ಪತಿಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದ ಮೇಲೆ ''ಮುಸ್ಲಿಂ ಧರ್ಮದ ಹುಡುಗನನ್ನು ಮದುವೆ ಆಗುತ್ತಿದ್ದಾರಾ ಅನುಶ್ರೀ'' ಎಂದು ಬರೆದಿದೆ. ಇದಕ್ಕೆ ಈ ನಮ್ಮ ಹಿಂದೂ ಹೆಣ್ಣುಮಕ್ಕಳಿಗೆ ಹಿಂದೂ ಉಡುಗೊರೆ ಸಿಗಲ್ವಾ.. ಯಾಕೆ ಈ ತರ ಲವ್ ಜಿಹಾದ್ಗೆ ಬಲಿ ಹಾಕ್ತಾರೋ ಗೊತ್ತಿಲ್ಲ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಇನ್ನೂ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದಾಗ ಈ ಸುದ್ದಿ ಸುಳ್ಳು ಹೇಳಿಕೆಯೊಂದಿಗೆ ಈ ಪೋಸ್ಟ್ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅನುಶ್ರೀ ಮದುವೆ ಆಗುತ್ತಿರುವ ಹುಡುಗನ ಹೆಸರು ರೋಷನ್ ಎಂದಾಗಿದ್ದು ಅವರು ಹಿಂದೂ ಧರ್ಮದವರಾಗಿದ್ದಾರೆ. ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಆಗಸ್ಟ್ 28ರಂದು ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಬೆಳಗ್ಗೆ 10:56 ರ ಶುಭ ಮೂಹೂರ್ತದಲ್ಲಿ ಮದುವೆ ಕಾರ್ಯಕ್ರಮ ನೆರವೇರಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಹಳದಿ ಶಾಸ್ತ್ರದ ಸಂಭ್ರಮ
ಆಗಸ್ಟ್ 27 ರಂದು ಅನುಶ್ರೀ ಅವರ ಹಳದಿ ಶಾಸ್ತ್ರ ಸಂಭ್ರಮ ಜೋರಾಗಿತ್ತು. ಕೊನೆಗೂ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ನಿರ್ಧರಿಸಿದ್ದಾರೆ. ಆಗಸ್ಟ್ 28 ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುದಿನದ ಗೆಳೆಯನೊಂದಿಗೆ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವಿವಾಹಕ್ಕೂ ಮುನ್ನ ಅನುಶ್ರೀ ವಿವಾಹ ಪೂರ್ವ ನಡೆದ ಹಳದಿ ಶಾಸ್ತ್ರದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಅನುಶ್ರೀ ಬಹಳ ದಿನಗಳಿಂದ ಕೊಡಗು ಮೂಲದ ರಾಮಚಂದ್ರ ಅವರ ಪುತ್ರ ರೋಷನ್ ಎಂಬುವವರನ್ನು ಪ್ರೀತಿ ಮಾಡುತ್ತಿದ್ದರು. ಕಳೆದ ವರ್ಷ ಜೀ ಕನ್ನಡದ ರಿಯಾಲಿಟಿ ಶೋ ಒಂದರಲ್ಲಿ ಆಂಕರ್ ಅನುಶ್ರೀ ಮದುವೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ಅಲ್ಲಿಂದ ಅಭಿಮಾನಿಗಳು ಅವರ ಮದುವೆ ಬಗ್ಗೆನೇ ಚರ್ಚೆ ಮಾಡುವುದಕ್ಕೆ ಶುರು ಮಾಡಿದ್ದರು. ಅನುಶ್ರೀ ಹೇಳಿ-ಕೇಳಿ ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿ. ಹೀಗಾಗಿ ಅವರ ಹುಟ್ಟುಹಬ್ಬದಂದೇ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಡಬಹುದೆಂದು ನಿರೀಕ್ಷೆ ಮಾಡಿದ್ದರು. ಕೊನೆಗೂ ಆಂಕರ್ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.












Click it and Unblock the Notifications