Aparna Death: ಅವಳನ್ನು ನೋಡಲು,ಅವಳಿದ್ದ ಮನೆಗೆ ಬನ್ನಿ: ಕವನದ ಮೂಲಕ ಅಪರ್ಣಾಗೆ ಭಾವುಕ ವಿದಾಯ ಹೇಳಿದ ಪತಿ!

ಬೆಂಗಳೂರು,ಜುಲೈ 12: ನಟಿ, ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಅವರು ಗುರುವಾರ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಅಪರ್ಣಾ ಅವರ ಪತಿ ಭಾವನಾತ್ಮಕ ಪೋಸ್ಟ್ ವಾಗಿ ಕವನದ ಮೂಲಕ ವಿದಾಯ ಹೇಳಿದ್ದಾರೆ.

ನಿರೂಪಕಿ ಅಪರ್ಣಾ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಪರ್ಣಾ ಅವರ ನಿಧನದ ಬಗ್ಗೆ ಪತಿ ನಾಗರಾಜ್ ವಸ್ತಾರೆ ಫೇಸ್‌ಬುಕ್‌ನಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಪತ್ನಿ ಅಪರ್ಣ ನಿಧನದ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಅಪರ್ಣಾ ಅಂತಿಮ ದರ್ಶನ ಪಡೆಯಲು ಬರುವವರು ದಯವಿಟ್ಟು ಹೂವು-ಹಣ್ಣು, ಪ್ಲಾಸ್ಟಿಕ್‌ ವಸ್ತುಗಳನ್ನು ತರಬೇಡಿ ಎಂದು ಪತಿ ನಾಗರಾಜ್‌ ವಸ್ತಾರೆ ಮನವಿ ಮಾಡಿದ್ದು, ಈ ಮೂಲಕ ಪರಿಸರ ಕಾಳಜಿ ತೋರಿದ್ದಾರೆ.

Aparna husband nagaraj vastarey requested people not bring garland

ಅಪರ್ಣ ಅವರ ಪತಿಯ ಮನವಿ ಮಾಡಿದ್ದೇನು?

ಅಪರ್ಣಾ ಅವರ ವಿಡಿಯೊ ಹಾಗೂ ಒಂದು ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ನಾಗರಾಜ್‌, ನಮಸ್ಕಾರ. ʻʻನನ್ನ ವೈಯಕ್ತಿಕ ಬದುಕಿನ ಈ ದುರ್ದೈವದ ಹೊತ್ತಿನಲ್ಲಿ ಅಪರ್ಣೆಯನ್ನು ಸ್ಮರಿಸಿರುವ ಎಲ್ಲರಿಗೂ ಋಣಿ. ಅವಳನ್ನು ಕೊನೆಯ ಸಲ ನೋಡಬಯಸುವವರು ಬೆಳಿಗ್ಗೆ ಏಳರಿಂದ ಹನ್ನೆರಡು ಗಂಟೆಯವರೆಗೆ ಬನಶಂಕರಿ ಎರಡನೇ ಹಂತದ ಸುಚಿತ್ರಾ ಫಿಲ್ಮ್ ಸೊಸೈಟಿಯ ಬಳಿಯಿರುವ ಅವಳಿದ್ದ ಮನೆಗೆ ಬರಬಹುದು. ದಯಮಾಡಿ ಬರಿಗೈಯಲ್ಲಿ ಬಂದರೆ ಹೆಚ್ಚು ಚೆನ್ನು. ಎರಡು ಮೂರು ತಾಸಿರುವ ಹೂವು-ಹಾರ ಬಾಡಿದಲ್ಲಿ ಇಷ್ಟು ಕಾಲ ಅವಳು ಕಾಪಿಟ್ಟ ನನ್ನ ಮನೆಮನಸ್ಸುಗಳ ಸುತ್ತಲಿನ ಕಸ ಹೆಚ್ಚೀತು. ಊರಿನ ಅಂದಗೆಟ್ಟೀತು. ಪ್ಲಾಸ್ಟಿಕ್ ಪಾಲಿಥೀನುಗಳಂತೂ ಸುತಾರಾಂ ಬೇಡ. ಈ ನಿಟ್ಟಿನಲ್ಲಿ ಕಳಕಳಿಯ ಕೋರಿಕೆʼʼ ಎಂದು ನಾಗರಾಜ್‌ ರಾಮಸ್ವಾಮಿ ವಸ್ತಾರೆ ಮನವಿ ಮಾಡಿದ್ದಾರೆ.

ಪತಿ ನಾಗರಾಜ್ ವಸ್ತಾರೆ ಅವರ ಭಾವುಕ ಪೋಸ್ಟ್‌ ಇದು

ಬೆಳಗಿಕೊಂಡಿರೆಂದು
ಕಿಡಿ ತಾಕಿಸಿ ಹೊರಟಿತು
ಹೆಣ್ಣು

ಚಿತ್ತು ತೆಗೆದು
ಬತ್ತಿಯ ನೆತ್ತಿ ಚೆನ್ನಾಗಿಸಿ
ತಿರುಪಿ ತಿದ್ದಿ

ಇರು
ತುಸುವಿರೆಂದು ಕರೆದರೂ
ನಿಲ್ಲದೆಯೇ
ಬೇರಾವುದೋ ಕರೆಗೆ

ತಣ್ಣಗೆ ಓಗೊಟ್ಟ ಮೇರೆ
ಯಲ್ಲಿ
ಒಂದೇ ಒಂದು
ನಿಮಿಷ
ಬಂದೇನೆಂದು ಕಡೆಗಳಿಗೆ
ಯ ಸೆರಗಿನ ಬೆನ್ನಿನಲ್ಲಿ
ಅಂದು.

ಕಾದಿದ್ದೇನೆ
ಈಗ ಬಂದಾಳೆಂದು
ಆಗ ಬಂದಾಳೆಂದು
ಮರಳಿ
ಜೀವ ತಂದಾಳೆಂದು
ಇದು

ಮೂರನೇ ದಿವಸ
ಇಷ್ಟಾಗಿ
ಬೆಳಗಲಿಟ್ಟ ಕಿರಿಸೊಡರ
ಬೆಳಕು ನಾನು
ಉರಿವುದಷ್ಟೇ ಕೆಲಸ
ಇರುವ ತನಕ.

ಇನ್ನೂ ಅಪರ್ಣಾ ಅವರ ನಿಧನದ ಬಗ್ಗೆ ಮಾಧ್ಯಮಗಳೊಂದಿಗೆ ಪತಿ ನಾಗರಾಜ್‌ ಮಾಹಿತಿಯನ್ನು ಹಂಚಿಕೊಂಡಿದ್ದು, ಅವಳು ನನಗೆ ಸಲ್ಲುವುದಕ್ಕೆ ಮೊದಲೇನೆ ಇಡೀ ಕರ್ನಾಟಕಕ್ಕೆ ಸೇರಿದವಳು. ಅವಳ ಒಂದೇ ಒಂದು ಆಸೆ ಇತ್ತು. ಮಾಧ್ಯಮದವರ ಮುಂದೆ ನಿಂತು. ಏನಾಯ್ತು ಅಂತ ಹೇಳು ಅಂತ. ಅಷ್ಟನ್ನು ನಾನು ಎರಡು ಗಂಟೆಗಳ ಹಿಂದೆ ಫೇಸ್ ಬುಕ್ ಪೋಸ್ಟ್‌ನಲ್ಲಿ ಹೇಳಿದ್ದೇನೆ.

ಎರಡು ವರ್ಷದ ಹಿಂದೆ ಇದೇ ಜುಲೈನಲ್ಲಿ ಶ್ವಾಸಕೋಶದ ಕ್ಯಾನ್ಸರ್ ಅಂತ ತಪಾಸಣೆಯಲ್ಲಿ ಗೊತ್ತಾಯ್ತು. ಅದಾಗಲೇ ನಾಲ್ಕನೇಯ ಹಂತದಲ್ಲಿ ಇತ್ತು. ಅದನ್ನು ನೋಡಿದ ವೈದ್ಯರು ಇನ್ನು ಆರು ತಿಂಗಳು ಇದ್ದರೆ ಹೆಚ್ಚು ಅಂತ ಹೇಳಿದ್ರು. ಆದರೆ, ಅವಳು ಛಲಗಾತಿ. ಏನಾದರೂ ಮಾಡಿ ಗೆಲ್ತೀನಿ ಅನ್ನುವಂತಹ ಛಲವಿತ್ತು. ಅದಾದ ಮೇಲೂ ಒಂದೂವರೆ ವರ್ಷ ಅಂತ ಇಟ್ಟುಕೊಳ್ಳೋಣ ಜನವರಿಯವರೆಗೂ ಹೋರಾಡಿದಳು. ಫೆಬ್ರವರಿಯಿಂದ ಸ್ವಲ್ಪ ಸೋತಳು. ಇದು ದೇಹವೇ ದೇಹವನ್ನು ಬಾಧಿಸುವ ಒಂದು ವ್ಯಾದಿ.

ಕ್ಯಾನ್ಸರ್ ಅನ್ನೋದು ನೀನಲ್ಲದ ಇನ್ನೊಂದು ವ್ಯಕ್ತಿತ್ವವನ್ನು ಹೇರುವುದಕ್ಕೆ ಬಯಸುತ್ತೆ. ಅವಳು ಧೀರೆ. ಅವಳು ಇಷ್ಟು ವರ್ಷ ಮಣಿಸಿದಳು. ಆದರೆ ಆಗಲಿಲ್ಲ. ನಾವಿಬ್ಬರೂ ಜಂಟಿಯಾಗಿ ಇದರಲ್ಲಿ ಸೋತಿದ್ದೀವಿ ಅಂತ ನಿಮ್ಮ ಎದುರು ಹೇಳುವುದಕ್ಕೆ ಇಷ್ಟ ಪಡುತ್ತೇನೆ ಎಂದು ಭಾವುಕರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+