Aparna Death: ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣ ನಿಧನ: ರಾಜಕೀಯ ಗಣ್ಯರಿಂದ ಸಂತಾಪ
ಬೆಂಗಳೂರು,ಜುಲೈ 11: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಅವರು ಗುರುವಾರ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.
ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳ ವಿಶ್ರಾಂತಿ ಪಡೆದಿದ್ದರು. ಅಪರ್ಣಾ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ. ಅಪರ್ಣಾ ಸಾವು ಕನ್ನಡಗರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ. ಇನ್ನೂ ಅಪರ್ಣಾ ಅವರ ನಿಧನದ ಸುದ್ದಿ ಸಾಕಷ್ಟು ನೋವುಂಟು ಮಾಡಿದ್ದು, ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪರ್ಣಾ ಅವರ ನಿಧನದ ಕುರಿತು ಸಂತಾಪ ಸೂಚಿಸಿದ್ದು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
— CM of Karnataka (@CMofKarnataka) July 11, 2024
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/VKcta8xr9z
ಈ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ. ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಸಚಿವ ಜಮೀರ್ ಅಹಮದ್ ಖಾನ್ ಸಂತಾಪ
ಖ್ಯಾತ ನಟಿ,ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡದಲ್ಲಿ ಸೊಗಸಾಗಿ ನಿರೂಪಣೆ ಮಾಡಿ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಅಪರ್ಣಾ ಅವರ ಅಗಲಿಕೆ ಕಿರುತೆರೆ ಹಾಗೂ ಚಲನ ಚಿತ್ರ ರಂಗಕ್ಕೆ ಅಪಾರ ನಷ್ಟ ಎಂದು ಸಚಿವರು ತಿಳಿಸಿದ್ದಾರೆ. ಅಪರ್ಣಾ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚನೆ
ಸ್ವಚ್ಛ ಕನ್ನಡದ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ಧಿ ಕೇಳಿ ದಿಗ್ಭ್ರಮೆಯಾಗಿದೆ. ಕನ್ನಡದ ಬೆಳ್ಳಿತೆರೆ, ಕಿರುತೆರೆಯಲ್ಲಿ ನಟಿಸಿದ್ದ ಅಪರ್ಣಾರವರು, ಲಕ್ಷಾಂತರ ಕಾರ್ಯಕ್ರಮಗಳನ್ನು ನಿರೂಪಿಸಿದ್ದರು ಎಂದು ಅಪರ್ಣಾ ಅವರ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ನಾನು ಸಚಿವೆಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಲವು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿದ್ದರು. ಆತ್ಮೀಯ ಗೆಳತಿ ಅಪರ್ಣಾ ಅವರ ಅಗಲಿಕೆ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಸ್ಪಷ್ಟ ಕನ್ನಡದ ನಿರೂಪಣೆ ಮೂಲಕ ಕನ್ನಡನಾಡಿನ ಮನೆಮಾತಾಗಿದ್ದ ನಿರೂಪಕಿ ಹಾಗೂ ಚಿತ್ರನಟಿ ಅಪರ್ಣಾ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸರಕಾರಿ ಕಾರ್ಯಕ್ರಮಗಳು, ದೂರದರ್ಶನದಲ್ಲಿ ನಿರೂಪಕಿಯಾಗಿದ್ದ ಅವರು, ಬೆಂಗಳೂರಿನ ಮೆಟ್ರೊದಲ್ಲಿ ಹಿನ್ನೆಲೆ ಧ್ವನಿ ನೀಡಿ ಖ್ಯಾತಿ ಪಡೆದವರು.
'ಮಸಣದ ಹೂವು' ಸೇರಿ ಹಲವು ಚಲನಚಿತ್ರಗಳು, ಧಾರವಾಹಿಗಳಲ್ಲೂ ಅವರು ನಟಿಸಿದ್ದರು. ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ನಿರೂಪಕಿ ಅಪರ್ಣಾ ಅವರ ನಿಧನಕ್ಕೆ ಡಿಕೆ ಶಿವಕುಮಾರ್ ಸಂತಾಪ
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.












Click it and Unblock the Notifications