Arijit Singh retirement: ಇನ್ಮುಂದೆ ಹಾಡಲ್ಲ ಎಂದು ದಿಢೀರ್ ನಿವೃತ್ತಿ ಘೋಷಿಸಿದ ಗಾಯಕ ಅರ್ಜಿತ್ ಸಿಂಗ್, ಕಾರಣ ಬಹಿರಂಗ
ಬಾಲಿವುಡ್‌ನ ಜನಪ್ರಿಯ ಹಿನ್ನೆಲೆ ಗಾಯಕ ಅರ್ಜಿತ್ ಸಿಂಗ್ (Arijit Singh) ಅವರು ಚಿತ್ರರಂಗದ ಗಾಯನ ಕ್ಷೇತ್ರದಿಂದ ಹಿಂದೆ ಸರಿಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಇದು ಅಭಿಮಾನಿಗಳು ಹಾಗೂ ಸಂಗೀತ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಎರಡೆರಡು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಗಾಯಕನ ಈ ಘೋಷಣೆಯು ದೇಶಾದ್ಯಂತ ಅವರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ಹೊಸ ವರ್ಷದ ಶುಭಾಶಯಗಳೊಂದಿಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡ ಅರ್ಜಿತ್ ಸಿಂಗ್, "ಇಷ್ಟು ವರ್ಷಗಳ ಕಾಲ ನನಗೆ ಅಪಾರ ಪ್ರೀತಿ ನೀಡಿದ ಎಲ್ಲರಿಗೂ ಧನ್ಯವಾದಗಳು. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಅಸೈನ್‌ಮೆಂಟ್‌ಗಳನ್ನು ಸ್ವೀಕರಿಸುವುದಿಲ್ಲ. ಇದನ್ನು ಇಲ್ಲಿಗೆ ಮುಕ್ತಾಯಗೊಳಿಸುತ್ತಿದ್ದೇನೆ. ಇದು ಅದ್ಭುತ ಪ್ರಯಾಣವಾಗಿತ್ತು" ಎಂದು ಬರೆದುಕೊಂಡಿದ್ದಾರೆ.

ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದ ಅರ್ಜಿತ್
ಈ ಘೋಷಣೆಯು ನಟ ಸಲ್ಮಾನ್ ಖಾನ್ ಅಭಿನಯದ 'ಬ್ಯಾಟಲ್ ಆಫ್ ಗಲ್ವಾನ್' ಚಿತ್ರಕ್ಕಾಗಿ ಶ್ರೇಯಾ ಘೋಷಾಲ್ ಜೊತೆಗೂಡಿ ಅವರು ಹಾಡಿರುವ 'ಮಾತೃಭೂಮಿ' ಗೀತೆಯು ಗಣರಾಜ್ಯೋತ್ಸವದ ಹಿನ್ನೆಲೆ ಬಿಡುಗಡೆಯಾದ ಕೆಲವೇ ದಿನಗಳ ಬಳಿಕ ಬಂದಿರುವುದು ವಿಶೇಷವಾಗಿದೆ. ಬಾಲಿವುಡ್‌ನ 'ತುಮ್ ಹಿ ಹೋ', 'ಕೇಸರಿಯಾ', 'ಚನ್ನಾ ಮೇರೆಯಾ' ಸೇರಿದಂತೆ ಅನೇಕ ಸೂಪರ್ ಹಿಟ್ ಹಾಡುಗಳ ಮೂಲಕ ಹಲವು ತಲೆಮಾರಿನ ಮನಗೆದ್ದಿರುವ ಅರ್ಜಿತ್ ಸಿಂಗ್, ಹಿನ್ನೆಲೆ ಗಾಯನದಿಂದ ಮಾತ್ರ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದು, ಸಂಗೀತದಿಂದ ಸಂಪೂರ್ಣವಾಗಿ ದೂರ ಸರಿಯುವುದಿಲ್ಲ ಎಂಬ ಸಂದೇಶವನ್ನೂ ನೀಡಿದ್ದಾರೆ.
ನಿವೃತ್ತಿಗೆ ಕಾರಣವೇನು?
ಈ ಘೋಷಣೆಯ ಬಳಿಕ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ನಿರ್ಧಾರಕ್ಕೆ ಒಂದೇ ಕಾರಣವಿಲ್ಲ. ಇದಕ್ಕೆ ಹಲವಾರು ಕಾರಣಗಳಿವೆ. ನಾನು ಬಹಳ ಸಮಯದಿಂದಲೇ ಈ ನಿರ್ಧಾರ ತೆಗೆದುಕೊಳ್ಳಲು ಯತ್ನಿಸುತ್ತಿದ್ದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ತಿಳಿಸಿದ್ದಾರೆ. ಕೆಲ ಪೋಸ್ಟ್‌ಗಳಲ್ಲಿ "ಬ್ರೇಕ್ ಬೇಕಿತ್ತು" ಎಂಬ ಭಾವನೆ ವ್ಯಕ್ತಪಡಿಸಿದ್ದು, ಸೃಜನಶೀಲತೆ ಮತ್ತು ವೈಯಕ್ತಿಕ ತೃಪ್ತಿಯ ಕಾರಣದಿಂದ ಈ ಹೆಜ್ಜೆ ಇಟ್ಟಿರುವ ಸೂಚನೆ ನೀಡಿದ್ದಾರೆ.

ಅರ್ಜಿತ್ ಸಿಂಗ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು 'ಇದು ಸಂಗೀತ ಯುಗದ ಅಂತ್ಯವೇ?' ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಕೆಲ ಸಂಗೀತಪ್ರೇಮಿಗಳು, ಅವರು ಬೇರೆ ರೂಪದಲ್ಲಿ ಸಂಗೀತ ಲೋಕದಲ್ಲಿ ಮುಂದುವರಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಿನ್ನೆಲೆ ಗಾಯನ ಕ್ಷೇತ್ರದಲ್ಲಿ ಅರ್ಜಿತ್ ಸಿಂಗ್ ಅವರ ನಿರ್ಧಾರ ಬಾಲಿವುಡ್ ಸಂಗೀತ ಲೋಕದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಅವರು ಯಾವ ರೀತಿಯ ಸಂಗೀತ ಪ್ರಯಾಣ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಿದೆ.
ಅರ್ಜಿತ್ ಸಿಂಗ್ ಹಿನ್ನೆಲೆ
ಭಾರತೀಯ ಚಿತ್ರರಂಗದ ಅತ್ಯಂತ ಜನಪ್ರಿಯ ಹಿನ್ನೆಲೆ ಗಾಯಕನಾಗಿ ಗುರುತಿಸಿಕೊಂಡಿರುವ ಅರ್ಜಿತ್ ಸಿಂಗ್ ತಮ್ಮ ವೃತ್ತಿಜೀವನವನ್ನು 2005ರಲ್ಲಿ ಪ್ರಸಾರವಾದ 'ಫೇಮ್ ಗುರುಕುಲ' ರಿಯಾಲಿಟಿ ಶೋ ಮೂಲಕ ಆರಂಭಿಸಿದರು. ಆರಂಭಿಕ ಹಂತದಲ್ಲಿ ಸವಾಲುಗಳನ್ನು ಎದುರಿಸಿದರೂ, ತಮ್ಮ ವಿಶಿಷ್ಟ ಧ್ವನಿ ಹಾಗೂ ಭಾವನಾತ್ಮಕ ಗಾಯನ ಶೈಲಿಯಿಂದ ಅವರು ನಿಧಾನವಾಗಿ ಸಂಗೀತ ಲೋಕದಲ್ಲಿ ಭದ್ರವಾದ ಸ್ಥಾನವನ್ನು ಗಳಿಸಿದರು.
'ಆಶಿಕಿ 2' ಚಿತ್ರದ 'ತುಮ್ ಹಿ ಹೋ' ಹಾಡು ಅರ್ಜಿತ್ ಸಿಂಗ್ ಅವರ ಬದುಕಿನ ದಿಕ್ಕನ್ನೇ ಬದಲಿಸಿತು. ಈ ಹಾಡಿನ ಯಶಸ್ಸಿನ ಬಳಿಕ 'ಚನ್ನಾ ಮೇರೆಯಾ', 'ಕೇಸರಿಯಾ' ಸೇರಿದಂತೆ ನೂರಾರು ಜನಪ್ರಿಯ ಗೀತೆಗಳಿಗೆ ಅವರು ಧ್ವನಿಯಾದರು. ಪ್ರೇಮ, ವಿರಹ ಮತ್ತು ಭಾವನಾತ್ಮಕ ಹಾಡುಗಳಿಗೆ ಅರ್ಜಿತ್ ಅವರ ಧ್ವನಿ ಪ್ರೇಕ್ಷಕರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿದೆ.
ತಮ್ಮ ಸಾಧನೆಗಾಗಿ ಅವರು ಅನೇಕ ಫಿಲ್ಮ್‌ಫೇರ್ ಪ್ರಶಸ್ತಿಗಳು ಹಾಗೂ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಡಿಜಿಟಲ್ ಮ್ಯೂಸಿಕ್ ವೇದಿಕೆಗಳಲ್ಲಿಯೂ ಅವರು ಅಗ್ರಸ್ಥಾನದಲ್ಲಿದ್ದು, 2019ರಿಂದ 2025ರವರೆಗೆ ಸತತ ಏಳು ವರ್ಷಗಳ ಕಾಲ ಸ್ಪಾಟಿಫೈನಲ್ಲಿ ಅತಿ ಹೆಚ್ಚು ಸ್ಟ್ರೀಮ್ ಆದ ಭಾರತೀಯ ಕಲಾವಿದ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ.
ಇಂತಹ ಯಶಸ್ವಿ ಸಂಗೀತ ಪಯಣದ ನಡುವೆ, ಅರ್ಜಿತ್ ಸಿಂಗ್ ಅವರು 38ನೇ ವಯಸ್ಸಿನಲ್ಲಿ ಹಿನ್ನೆಲೆ ಗಾಯನದಿಂದ ನಿವೃತ್ತರಾಗುವುದಾಗಿ ಘೋಷಿಸಿದ್ದಾರೆ. ಆದರೆ, ಅವರು ಸಂಗೀತ ಕ್ಷೇತ್ರದಿಂದ ಸಂಪೂರ್ಣವಾಗಿ ದೂರ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಬೇರೆ ರೂಪಗಳಲ್ಲಿ ಸಂಗೀತಯಾನ ಮುಂದುವರಿಸುವ ಸುಳಿವು ನೀಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications