Chetan Chandra: ನಟ ಚೇತನ್ ಮೇಲೆ ಹಲ್ಲೆ, ಮುಖ ಕಿತ್ತು ಹೋಗುವ ಹಾಗೆ ಹೊಡೆದ ಕಿಡಿಗೇಡಿಗಳು
ಬೆಂಗಳೂರು, ಮೇ 13: ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ತಾಯಂದಿರ ದಿನದ ದಿನವೇ ಜನರ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಮುಖ ಕಿತ್ತು ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ.
ನಿನ್ನೆ (ಮೇ 12) ತಾಯಂದಿರ ದಿನದ ಹಿನ್ನೆಲೆಯಲ್ಲಿ ನಟ ಚೇತನ್ ಚಂದ್ರ ತಾಯಿಯನ್ನು ಹೊರಗಡೆ ಕರೆದುಕೊಂಡು ಹೋಗಿ ಬಳಿಕ ದೇವಾಸ್ಥಾನಕ್ಕೆ ತೆರಳಿ ಮರಳುವ ವೇಳೆ ಕಗ್ಗಲಿಪುರ ಸಮೀಪಲ್ಲಿ ಗಾಡಿ ವಿಚಾರಕ್ಕೆ ಗಲಾಟೆ ತೆಗೆದು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯ ವಿವರವನ್ನು ನಟ ಚೇತನ್ ಚಂದ್ರ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಹಂಚಿಕೊಂಡಿದ್ದಾರೆ.

ಕಗ್ಗಲಿಪುರದ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ ವೇಳೆ ತಾವಿರುವ ಪರಿಸ್ಥಿತಿಯಲ್ಲೇ ವಿಡಿಯೋ ಮಾಡಿರುವ ಚೇತನ್ ಚಂದ್ರ, ಈ ವಿಡಿಯೋವನ್ನು ನನ್ನ ಪತ್ನಿ, ಮಗು, ಹೆತ್ತವರು ನೋಡುತ್ತಿರುತ್ತಾರೆ. ಸದ್ಯ ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ. ವಿಡಿಯೋದಲ್ಲಿ ಚೇತನ್ ಚಂದ್ರ ಅವರ ಮುಖವೆಲ್ಲಾ ರಕ್ತವಾಗಿದ್ದು, ಧರಿಸಿದ್ದ ಬಟ್ಟೆ ಕೂಡ ರಕ್ತವಾಗಿದೆ.
'ಇಂದು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುವಾಗ, ಬೇಕಂತಲೇ ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಸದ್ಯ ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ನ್ಯಾಯ ಬೇಕು' ಎಂದು ನಟ ಚೇತನ್ ಚಂದ್ರ ಆಗ್ರಹಿಸಿದ್ದಾರೆ.
ಘಟನೆಯಲ್ಲಿ ನಟ ಚೇತನ್ ಚಂದ್ರ ಅವರ ಕಾರಿಗೂ ಹಾನಿಯಾಗಿದ್ದು, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಚೇತನ್ ಚಂದ್ರ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದು, ಅವರ ಸ್ಥಿತಿ ನೋಡಿ ಆತಂಕ ಪಡುವಂತಾಗಿದೆ. ವಿಡಿಯೋ ನೋಡಿದ ಹಲವರು 'ನಿಮ್ಮಂತ ಸೆಲೆಬ್ರಿಟಿಗಳಿಗೆ ಈ ರೀತಿ ಆದರೆ ನಮ್ಮಂತ ಜನಗಳಿಗೆ ಇನ್ನು ಯಾವ ತರ. ಏನು ಎಂದು ಪ್ರಶ್ನೆ ಮಾಡಿದರೆ ಈ ತರ ಹಲ್ಲೆ ಮಾಡುತ್ತಾರೆ. ಖಂಡಿತ ಬಿಡಬೇಡಿ. ಕಾನೂನು ಪ್ರಕಾರ ಏನು ಶಿಕ್ಷೆ ಆಗಬೇಕು ಅವರಿಗೆ ಆಗಬೇಕು' ಎಂದು ಒತ್ತಾಯಿಸಿದ್ದಾರೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications