Saptami Gowda Audio Viral:‌ ಯುವ ಮಾತು ಕೇಳಿ ಹಾಗೆ ಮಾಡಿದೆ: ಸಪ್ತಮಿ ಗೌಡ ಆಡಿಯೋ ವೈರಲ್

ಬೆಂಗಳೂರು, ಜೂನ್‌ 23: ಡಾ ರಾಜ್‌ಕುಮಾರ್ ಅವರ ಮೊಮ್ಮಗ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಅವರ ಕಿರಿಯ ಮಗ ಯುವ ರಾಜ್‌ಕುಮಾರ್ (ಗುರು ರಾಜ್‌ಕುಮಾರ್) ವಿಚ್ಛೇದನ ಸುದ್ದಿ ಸಾಕಷ್ಟು ಸದ್ದು ಮಾಡಿದ್ದು, ಕಾಂತರಾ ನಟಿ ಸಪ್ತಮಿ ಗೌಡ ಅವರ ಹೆಸರು ಕೂಡ ಈ ಪ್ರಕರಣದಲ್ಲಿ ಕೇಳಿ ಬಂದಿದೆ.

ಯುವ ರಾಜ್‌ಕುಮಾರ್‌ ಅವರು ಕಳಿಸಿದ್ದ ವಿಚ್ಛೇದನ ನೋಟಿಸ್‌ಗೆ ಲಾಯರ್ ಮೂಲಕವೇ 12 ಪುಟಗಳ ಉತ್ತರ ನೀಡಿರುವ ಶ್ರೀದೇವಿ ಭೈರಪ್ಪ ಅವರು ನೇರವಾಗಿ ಸಪ್ತಮಿ ಗೌಡ ಅವರ ಹೆಸರನ್ನೇ ಉಲ್ಲೇಖ ಮಾಡಿದ್ರು. ಅಲ್ಲದೇ ಸಪ್ತಮಿ ಗೌಡ ಹಾಗೂ ಯುವ ರಾಜ್‌ಕುಮಾರ್‌ ಇಬ್ಬರೂ ಹೋಟೆಲ್‌ ರೂಮ್‌ನಲ್ಲಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು ಎಂದು ಆರೋಪಿಸಿದ್ದರು. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.

Audio Viral In That Allegedly Sapthami Gowda Begging For Mercy From Producer

ವೈರಲ್‌ ಆಗುತ್ತಿರುವ ಆಡಿಯೋದಲ್ಲಿ ಮಹಿಳೆಯೊಬ್ಬರು ಅಳುತ್ತಾ ರೆಕಾರ್ಡ್ ಮಾಡಿದ ಆಡಿಯೋ ಆಗಿದೆ. ಈ ಆಡಿಯೋ ಪ್ತಮಿ ಗೌಡ ಅವರ ಧ್ವನಿಯನ್ನು ಹೋಲುತ್ತಿದೆ. ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು (ಯುವ ಮೂಲ ಹೆಸರು) ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್ ಎಂದು ಹೇಳಿರುವುದು ಆಡಿಯೋದಲ್ಲಿದೆ. ಈ ಆಡಿಯೋವನ್ನು ಸಪ್ತಮಿ ಗೌಡ ಅವರು ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.

ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್​ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ, ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಗೌಡ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ ಎಂದು ಹೇಳಿರುವ ಮಾತು ಆಡಿಯೋದಲ್ಲಿದೆ.

ಇನ್ನೂ ನಾನು ನನ್ನ ಅಮ್ಮನ ಮೇಲೆ ಹಣೆ ಮಾಡಿ ಹೇಳುತ್ತೇನೆ. ನಾನು ಬಿಟ್ಟು ಬಾ ಅಂತ ಹೇಳಿಲ್ಲ. ನಾನು ಮೊದಲಿನಿಂದಲೂ ಹೇಳುತ್ತಲೇ ಇದ್ದೆ, ಇದೆಲ್ಲ ವರ್ಕೌಟ್ ಆಗಲ್ಲ. ಅಲ್ಲದೆ ನಾನು ಎಂದಿಗೂ ಸಹ ಫ್ಯಾಮಿಲಿ ಬಿಟ್ಟು ಬಾ, ಪತ್ನಿ ಜೊತೆ ಬ್ರೇಕ್ ಅಪ್ ಮಾಡಿಕೊ ಎಂದು ಹೇಳಿಲ್ಲ ಸರ್ ನನ್ನನ್ನು ನಂಬಿ ಎಂದು ಬೇಡಿಕೊಂಡಿದ್ದಾರೆ. ಬೇಕಾದರೆ ನನ್ನನ್ನು ಬೈಯ್ಯಿರಿ, ಗುರು (ಯುವ)ಗೆ ಅದು ಮೊದಲ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ನನಗೆ ಗೊತ್ತಿದೆ. ಯಾರಿಗೂ ತೊಂದರೆ ಆಗಬಾರದು ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ಯಿರಿ ಎಂದು ಸಪ್ತಮಿ ಗೌಡ ಅವರ ಧ್ವನಿಯದ್ದು ಎನ್ನಲಾದ ಆಡಿಯೋನಲ್ಲಿ ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+