Actor Darshan: ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಗುಡ್ ನ್ಯೂಸ್
Actor Darshan: ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಗುಡ್ ನ್ಯೂಸ್ ನೀಡಿದೆ. ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಕರ್ನಾಟಕದ ಹೈಕೋರ್ಟ್ ನೀಡಿರುವ ಜಾಮೀನಿಗೆ ತಕ್ಷಣವೇ ತಡೆಯಾಜ್ಞೆ ನೀಡಲು ಮತ್ತು ಈ ದೇಶಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶ ಮಾಡಲು ಸುಪ್ರೀಂ ಶುಕ್ರವಾರ (ಜನವರಿ 24) ನಿರಾಕರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಪವಿತ್ರಾ ಗೌಡ ಸೇರಿದಂತೆ 5 ಜನರಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಿಸಿದೆ. ಆದರೆ ಜಾಮೀನು ಪ್ರಶ್ನಿಸಿ ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಮೇಲ್ಮವಿಯನ್ನು ಪರಿಶೀಲನೆ ಮಾಡಲು ಸಮ್ಮತಿ ಸೂಚಿಸಿದೆ ಎಂದು ತಿಳಿದುಬಂದಿದೆ.

ಇದೇ ವೇಳೆ ಕರ್ನಾಟಕ ಹೈಕೋರ್ಟ್‌ನ ಜಾಮೀನು ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು ದರ್ಶನ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ರಾಜ್ಯ ಸರ್ಕಾರವು ಆರೋಪಿಗಳಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿಕೊಂಡಿರುವುದರಿಂದ ಆದೇಶದ ಕಾರ್ಯಾಚರಣೆಗೆ ತಡೆ ನೀಡುವುದು ಸೂಕ್ತವಲ್ಲ. ಏಕೆಂದರೆ ಅದು ಜಾಮೀನು ರದ್ದತಿಗೆ ಸಮನಾಗಿರುತ್ತದೆ.
ಆದರೆ, ಪ್ರಾಸಿಕ್ಯೂಷನ್‌ನ ಹಿತಾಸಕ್ತಿ ರಕ್ಷಣೆಗೆ ಸಹ ಆರೋಪಿಗಳು ಜಾಮೀನಿನ ಮೇಲೆ ಅರ್ಜಿ ಸಲ್ಲಿಸಿದರೆ, ಸಂಬಂಧಪಟ್ಟ ನ್ಯಾಯಾಲಯವು ನಮ್ಮ ಮುಂದೆ ಪ್ರಶ್ನಿಸಲಾದ ಆದೇಶವನ್ನು ಅವಲಂಬಿಸಬಾರದು. ಸಲ್ಲಿಸಿದ ಯಾವುದೇ ಜಾಮೀನು ಅರ್ಜಿಯನ್ನು ಅದರ ಅರ್ಹತೆ ಮೇಲೆಯೇ ನಿರ್ಧರ ಮಾಡಲಾಗುತ್ತದೆ ಎಂದು ಪೀಠ ಹೇಳಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ವರ್ಷ ಅಂದರೆ 2024ರ ಜೂನ್ 11ರಂದು ಬಂಧಿತರಾಗಿದ್ದ ನಟ ದರ್ಶನ್ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ 2024ರ ಡಿಸೆಂಬರ್ 13ರಂದು ಜಾಮೀನು ನೀಡಿ ಅದೇಶ ಹೊರಡಿಸಿತ್ತು. ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನ ಕಳುಹಿಸಿದ್ದಾನೆ ಎಂಬ ಕಾಕರಣದಲ್ಲಿ ಕಳೆದ ವರ್ಷ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನ ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಲೆ ಮಾಡಿದ್ದರು ಎಂದು ಪೊಲೀಸ್ ದಾಖಲೆಗಳಲ್ಲಿ ಉಲ್ಲೇಖವಾಗಿದೆ.
ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿತ್ತು. 33 ವರ್ಷದ ರೇಣುಕಸ್ವಾಮಿ ಮೃತದೇಹ ಕಳೆದ ವರ್ಷ ಜೂನ್ 9ರಂದು ಬೆಂಗಳೂರಿನ ಮೋರಿಯೊಂದರಲ್ಲಿ ಪತ್ತೆ ಆಗಿತ್ತು. ಜಾಮೀನು ಮಂಜೂರು ಮಾಡುವ ಮೊದಲು, ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಅಲ್ಲಿ ಜೈಲಿನ ನಿಯಮ ಮೀರಿ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆದ ಬಳಿಕ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು.
ದರ್ಶನ್ ಸೇರಿ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವುದರ ವಿರುದ್ಧ ರಾಜ್ಯ ಸರ್ಕಾರ ಜನವರಿ 6ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇನ್ನು ಸಾಮಾಜಿಕ ಜಾಲತಾಣದಲ್ಲಿ ಪವಿತ್ರಾ ಗೌಡ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನ ಪೋಸ್ಟ್ ಮಾಡಿದ್ದಕ್ಕಾಗಿ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂಬುದು ಆರೋಪವಾಗಿದೆ. ರೇಣುಕಾಸ್ವಾಮಿ ಮೇಲೆ ದರ್ಶನ್ ಕೂಡ ಹಲ್ಲೆ ನಡೆಸಿರುವ ಆರೋಪ ಇದೆ.
ಹೈಕೋರ್ಟ್ 2024ರ ಅಕ್ಟೋಬರ್ 30ರಂದು ದರ್ಶನ್‌ಗೆ ಬೆನ್ನುನೋವು ಹಿನ್ನೆಲೆ ವೈದ್ಯಕೀಯ ಆಧಾರದ ಮೇಲೆ 6 ವಾರಗಳ ಮಧ್ಯಂತರ ಜಾಮೀನು ನೀಡಿತು. ಬಳಿಕ ಡಿಸೆಂಬರ್‌ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.












Click it and Unblock the Notifications