Bigg Boss: ಜೈಲಿಗೆ ಹೋಗಿ ಬಂದವರಿಗೆ ಅವಕಾಶ ನೀಡೋದ್ಯಾಕೆ?
ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ 71ನೇ ದಿನ ಮುಕ್ತಾಯವಾಗಿದ್ದು ಕಾರ್ಯಕ್ರಮ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದು ಬಿಗ್‌ಬಾಸ್‌ನ 11ನೇ ಆವೃತ್ತಿಯಾಗಿದ್ದು, ಬಿಗ್ ಬಾಸ್ ಮನೆಯಲ್ಲಿ ಮನರಂಜನೆ ಜೊತೆಗೆ ವಿವಾದ ಕೂಡ ಇದ್ದೇ ಇರುತ್ತದೆ. ಈ ಬಾರಿ ಬಿಗ್‌ಬಾಸ್ ಕಾರ್ಯಕ್ರಮದಲ್ಲಿ ಕೂಡ ಹಲವು ವಿವಾದಗಳಿವೆ.
ಲಾಯರ್ ಜಗದೀಶ್‌ರನ್ನು ಹೊರ ಕಳಿಸಿದ ರೀತಿ ವಿವಾದಕ್ಕೆ ಕಾರಣವಾಗಿತ್ತು. ಮತ್ತೊಂದು ಕಡೆ ಹಲವು ಆರೋಪಗಳನ್ನು ಹೊತ್ತಿರುವವರನ್ನು ಬಿಗ್ ಬಾಸ್ ಮನೆಗೆ ಕಳಿಸಿದ್ದಕ್ಕೆ ಆಕ್ಷೇಪ ಕೂಡ ವ್ಯಕ್ತವಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಉದ್ಯಮಿಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುತ್ತೇನೆ ಎಂದು 5 ಕೋಟಿ ರೂಪಾಯಿ ವಂಚಿಸಿರುವ ಆರೋಪ ಚೈತ್ರಾ ಕುಂದಾಪುರ ಮೇಲಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದ ಚೈತ್ರಾ ಕುಂದಾಪುರ ಸದ್ಯ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದ್ದು ಇತ್ತೀಚೆಗೆ ಬಿಗ್ ಬಾಸ್ ಮನೆಯಿಂದಲೇ ಕೋರ್ಟ್‌ಗೆ ಬಂದು ವಿಚಾರಣೆ ಎದುರಿಸಿದ್ದರು.
ಇದೀಗ ಮತ್ತೊಬ್ಬ ಸ್ಪರ್ಧಿ ಮೋಕ್ಷಿತಾ ಪೈ ಕೂಡ ಜೈಲಿಗೆ ಹೋಗಿ ಬಂದವರು ಎನ್ನುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಮೋಕ್ಷಿತಾ ಮೇಲೆ ಬಾಲಕಿಯೊಬ್ಬಳನ್ನು ಅಪಹರಿಸಿದ ಆರೋಪವಿದೆ. ಆಕೆಯ ಸ್ನೇಹಿತನ ಜೊತೆ ಬಾಲಕಿಯೊಬ್ಬಳನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನುವ ಆರೋಪದಡಿ ಮೋಕ್ಷಿತ ಅಲಿಯಾಸ್ ಐಶ್ವರ್ಯ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದರು. 2014ರಲ್ಲಿ ಈ ಘಟನೆ ನಡೆದಿದ್ದು, ಮತ್ತೆ ಮುನ್ನಲೆಗೆ ಬಂದಿದೆ.
ಚೈತ್ರಾ ಕುಂದಾಪುರ, ಮೋಕ್ಷಿತಾ ಅಪರಾಧ ಹಿನ್ನಲೆಯುಳ್ಳವರಾಗಿದ್ದು ಇಂತಹವರನ್ನು ಬಿಗ್ ಬಾಸ್ ಮನೆಯಲ್ಲಿ ಆಡಲು ಅವಕಾಶ ಕೊಟ್ಟು ಸಮಾಜಕ್ಕೆ ಏನು ಸಂದೇಶ ಕೊಡುತ್ತಿದ್ದೀರಾ ಎಂದು ಪ್ರೇಕ್ಷಕರು ಪ್ರಶ್ನೆ ಮಾಡಿದ್ದಾರೆ. ಕಳೆದ ಸೀಸನ್‌ನಲ್ಲಿ ಕೂಡ ವಂಚನೆಯ ಆರೋಪ ಎದುರಿಸುತ್ತಿದ್ದ ಡ್ರೋನ್ ಪ್ರತಾಪ್‌ರನ್ನು ಬಿಗ್ ಬಾಸ್ ಮನೆಗೆ ಕಳಿಸಲಾಗಿತ್ತು.
ವಂಚನೆ, ಅಪಹರಣ ಆರೋಪಗಳನ್ನು ಎದುರಿಸುತ್ತಿರುವವರನ್ನು ಬಿಗ್ ಬಾಸ್ ಮನೆಗೆ ಕಳಿಸಿದ್ದು ತಪ್ಪು ಎಂದು ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ಮಂದಿ ಅದು ಆರೋಪ ಅಷ್ಟೇ ನ್ಯಾಯಾಲಯದಲ್ಲಿ ಅವರು ಮಾಡಿದ್ದು ತಪ್ಪೆಂದು ಸಾಬೀತಾದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ ಅದಕ್ಕೂ ಮೊದಲೇ ನಾವೇ ಅವರನ್ನು ಅಪರಾಧಿಗಳು ಎಂದು ನಿರ್ಧರಿಸುವುದು ತಪ್ಪಾಗುತ್ತದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.












Click it and Unblock the Notifications