Drone Prathap: ಸಿನಿಮಾ ಹೀರೋ ಆಗಬೇಕಿದ್ದ ಡ್ರೋನ್ ಪ್ರತಾಪ್‌ಗೆ ಕೋರ್ಟ್‌ ಬಿಗ್‌ ಶಾಕ್‌

ಬಿಗ್ ಬಾಸ್ ಕನ್ನಡ ಸೀಜನ್‌ 10ರ ಸ್ಪರ್ಧಿ ಡ್ರೋನ್‌ ಪ್ರತಾಪ್‌ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಆ್ಯಕ್ಟಿವ್‌ ಆಗಿದ್ದು, ತಮ್ಮ ಫೋಟೋ, ವಿಡಿಯೋ, ಹೊಸ ಪ್ರಾಜೆಕ್ಟ್‌ಗಳ ಬಗ್ಗೆ, ಪ್ರಯೋಗಗಳ ಬಗ್ಗೆ ಅಪ್ಲೋಡ್‌ ಮಾಡುತ್ತಲೇ ಇರುತ್ತಾರೆ. ಇದೇ ಈಗ ಡ್ರೋನ್‌ ಪ್ರತಾಪ್‌ಗೆ ಕಂಟಕವಾಗಿದೆ.

ಇತ್ತೀಚಿಗಷ್ಟೆ ಹೊಸ ಚಿತ್ರವೊಂದಕ್ಕೆ ನಾಯಕ ನಟನಾಗಿ ನಟಿಸಲು ಒಪ್ಪಿಕೊಂಡಿರುವ ಡ್ರೋನ್‌ ಪ್ರತಾಪ್‌ ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಸ್ಫೋಟಕ ವಸ್ತುವನ್ನು ನೀರಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಕನ್ನಡ ಸೀಜನ್‌ 10ರ ಸ್ಪರ್ಧಿ ಡ್ರೋನ್‌ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಮಿಡಿಗೇಶಿ ಪೊಲೀಸರು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್‌ ಪ್ರತಾಪ್‌ನನ್ನು ಬಂಧಿಸಿದ್ದಾರೆ.

Bigg Boss Kannada contestant Drone Prathap Arrested In Connection To Explosive Device Incident

ಸ್ಫೋಟಕ ವಸ್ತುವನ್ನು ನೀರಿಗೆ ಎಸೆದ ವಿಡಿಯೋ ಆಧಾರಿಸಿ ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಡಿಸೆಂಬರ್‌ 14, ಗುರುವಾರದಂದು ಡ್ರೋನ್‌ ಪ್ರತಾಪ್‌ನನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ವಿಚಾರಣೆ ಹಿನ್ನೆಲೆಯಲ್ಲಿ ಮತ್ತೆ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪೊಲೀಸರ ಮನವಿಗೆ ಒಪ್ಪಿದ ಕೋರ್ಟ್‌ ಡ್ರೋನ್​ ಪ್ರತಾಪ್​ನನ್ನು ಮೂರು ದಿನ ಪೊಲೀಸರ ಕಸ್ಟಡಿಗೆ ನೀಡಿದೆ.

ಸದ್ಯ ಡ್ರೋನ್‌ ಪ್ರತಾಪ್‌ ಪೊಲೀಸರ ಬಂಧನದಲ್ಲಿದ್ದು, ಬ್ಲಾಸ್ಟ್​ಗೆ ಬಳಸಿದ್ದ ವಸ್ತುಗಳನ್ನು, ಘಟನಾ ಸ್ಥಳಕ್ಕೆ ತೆರಳಲು ಬಳಸಿದ್ದ ಕಾರು, ಅಲ್ಲಿ ಬಳಸಿದ್ದ ಲ್ಯಾಪ್​ಟಾಪ್, ಮೊಬೈಲ್ ಸೇರಿ ಎಲ್ಲಾ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ಫೋಟಕ ವಸ್ತುವನ್ನು ನೀರಿಗೆ ಎಸೆಯುವುದು ಸೇರಿದಂತೆ ಸ್ಥಳೀಯ ಮಟ್ಟದಲ್ಲಿ ಮಾಡುವ ಯಾವುದೇ ಪ್ರಯೋಗಗಳಿಗೆ ಅನುಮತಿ ಕಡ್ಡಾಯವಾಗಿದೆ. ಸ್ಥಳೀಯ ಪೊಲೀಸರು, ಸಂಬಂಧಿಸಿದ ಇಲಾಖೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಸ್ಥಳೀಯ ಇಲಾಖೆಗಳ ಅನುಮತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+