Bigg Boss Kannada: ಬಿಗ್ ಬಾಸ್‌ಗೆ ಕೋರ್ಟ್ ನೋಟಿಸ್: ಶೀಘ್ರದಲ್ಲೇ ಶೋ ಅಂತ್ಯ..?
ಹತ್ತು ಸೀಜನ್‌ಗಳನ್ನು ಯಶಸ್ವಿಯಾಗಿ ಮುಗಿಸಿದ್ದ ಕನ್ನಡ ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಈ ಬಾರಿ ಶೋ ಆರಂಭಿಸುತ್ತಿದ್ದಂತೆ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದೆ. ಬಿಗ್ ಬಾಸ್ ಕನ್ನಡ ಸೀಜನ್ 11ಕ್ಕೆ ಒಂದಾದ ಮೇಲೆ ಒಂದು ವಿಘ್ನಗಳು ಎದುರಾಗುತ್ತಿದೆ.
ಒಂದೆಡೆ ಸ್ಪರ್ಧಿಗಳ ಮಿತಿ ಮೀರಿದ ವರ್ತನೆ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣವಾದರೆ ಮತ್ತೊಂದೆಡೆ ಬಿಗ್ ಬಾಸ್ ಸ್ಪರ್ಧಿ ಆಯ್ಕೆ ಮತ್ತು ಆಯೋಜನೆ ವಿಚಾರವಾಗಿ ಕನ್ನಡ ಬಿಗ್ ಬಾಸ್ ತಂಡಕ್ಕೆ ಪದೇ ಪದೇ ಕಾನೂನಿನ ಸಂಕಷ್ಟ ಎದುರಾಗುತ್ತಿದೆ.

ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಮಹಿಳಾ ಆಯೋಗಕ್ಕೆ ಪತ್ರದ ಮೂಲಕ ದೂರು ನೀಡಲಾಗಿತ್ತು. ಜೊತೆಗೆ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಕೂಡ ದೂರು ಸಲ್ಲಿಸಲಾಗಿತ್ತು. ಈ ದೂರುಗಳ ಮೇಲೆ ಈ ಬಾರಿ ವಿಶೇಷ ಎನ್ನುವಂತೆ ಮಾಡಿದ್ದ ಸ್ವರ್ಗ-ನರಕ ಕಲ್ಪನೆಗೆ ಅಂತ್ಯ ಹಾಡಲಾಗಿತ್ತು. ಇದೀಗ ಮತ್ತೊಂದು ಕಾನೂನು ಸಂಕಷ್ಟ ಎದುರಿಸುವಂತಾಗಿದೆ.
ಬಿಗ್ ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಸಿವಿಲ್ ಕಾರ್ಯವಿಧಾನದ ಕೋಡ್ ಕಾಯ್ದೆ ಅಡಿ ನೋಟಿಸ್ ಜಾರಿ ಮಾಡಿದ್ದು, ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರು ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದೆ ಎನ್ನಲಾಗಿದೆ. ಇನ್ನು ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದ್ದು ಈ ಕೋರ್ಟ್ ವಿಚಾರಣೆಗೆ ವಾಹಿನಿಯವರು ಹಾಜರಾಗಬೇಕಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.
-
ಬೆಂಗಳೂರಿನಲ್ಲಿ ಒಂದು ದಿನದ ಖರ್ಚಿಗೆ ಕೇವಲ 300 ರೂಪಾಯಿ ಇದ್ರೆ ಸಾಕು: ಉಳಿತಾಯದ ಪಾಠ ಹೇಳಿಕೊಟ್ಟ ಯುವತಿ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications