Sonu Srinivas Gowda: ಬಿಗ್ ಬಾಸ್ ಒಟಿಟಿ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್, ಕಾರಣ ಇಲ್ಲಿದೆ
ಬೆಂಗಳೂರು, ಮಾರ್ಚ್ 22: ಸೋಶಿಯಲ್ ಮಿಡಿಯಾ ಸ್ಟಾರ್ ಆಗಿರುವ ಸೋನು ಶ್ರೀನಿವಾಸ್ ಗೌಡ, ಬಿಗ್ ಬಾಸ್ ಅಂಗಳಕ್ಕೂ ತಲುಪಿದ್ದರು. ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಮೂಲಕ ಮತ್ತಷ್ಟು ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ.
ಹೌದು... ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಕಾರಣ ಕೇಳಿದ್ರೆ ಮಾತ್ರ ಒಂದು ಕ್ಷಣ ಶಾಕ್ ಆಗೋದಂತು ನಿಜ. ಸೋನು ಗೌಡ 'ಸೇವಂತಿ' ಎನ್ನುವ 8 ವರ್ಷದ ಬಡ ಬಾಲಕಿಯನ್ನು ದತ್ತು ತೆಗೆದುಕೊಂಡಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಸೋಶಿಯಲ್ ಮಿಡಿಯಾದಲ್ಲಿ ಈ ಬಗ್ಗೆ ಅವರೇ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಇದೆ ಅವರಿಗೆ ಮುಳ್ಳಾಗಿ ಪರಿಣಮಿಸಿದೆ.

ದತ್ತು ತೆಗೆದುಕೊಂಡು ಕಂಬಿ ಹಿಂದೆ ಹೋದ ಸೋನು!
ಸೋನು ಶ್ರೀನಿವಾಸ್ ಗೌಡ ಉತ್ತರ ಕರ್ನಾಟಕ ಭಾಗದ 8 ವರ್ಷದ ಮಗು ಸೇವಂತಿಯನ್ನು ದತ್ತು ತೆಗೆದುಕೊಂಡಿದ್ದಾರೆ. ಆದರೆ, ಅವರು ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ ಎಂದು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಜೆ.ಜೆ.ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ. ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.
ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧಿಸಿದ್ದಾರೆ. ಮಗು ದತ್ತು ಪಡೆದಿರುವುದಾಗಿ, ಮಗುವಿನ ಫೋಟೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಎಂಟು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು.
ದತ್ತು ಪಡೆದಿರುವ ಹೆಣ್ಣು ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿರುವ ಆರೋಪ ಸೋನು ಮೇಲಿದೆ. ಸಾರ್ವಜನಿಕವಾಗಿ ಮಗುವಿನ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಇನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸಹ ಸರಿಯಾಗಿ ಮಾಡಿಲ್ಲ ಎಂಬ ಆರೋಪ ಸಹ ಇದೆ. ಸದ್ಯ ಪೊಲೀಸರು ಆಕೆಯನ್ನು ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications