Bigg Boss Kannada: ಬಿಗ್‌ಬಾಸ್ ಸೀಸನ್-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಸೆಲೆಬ್ರಿಟಿಗಳು ಇದ್ದಾರೆ?
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್-12 ಇನ್ನೇನು ಕೆಲವೇ ತಿಂಗಳಲ್ಲಿ ಶುರುವಾಗಲಿದೆ. ಈ ಬಾರಿಯೂ ಕಿಚ್ಚ ಸುದೀಪ್ ಅವರೇ ಬಿಗ್‌ಬಾಸ್ ಮನೆಯ ಪಂಚಾಯಿತಿ ನಡೆಸಿಕೊಡಲಿದ್ದಾರೆ. ಹಾಗಾಗಿ ವೀಕ್ಷಕರಿಗೆ ಇದ್ದ ಎಲ್ಲ ಗೊಂದಲಗಳು ದೂರಾಗಿವೆ. ಇನ್ನು ಈಗ ಎಲ್ಲರ ಚಿತ್ತ ಈ ಸೀಸನ್‌ನಲ್ಲಿ ಕಾಣಿಸಿಕೊಳ್ಳಲಿರುವ ಸ್ಪರ್ಧಿಗಳತ್ತ ಇದೆ. ಸೋಷಿಯಲ್ ಮೀಡಿಯಾಗಳಲ್ಲೂ ಈ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದ್ದು, ಕೆಲವ ಸೆಲೆಬ್ರಿಟಿಗಳ ಹೆಸರುಗಳು ಓಡಾಡುತ್ತಿವೆ. ಸದ್ಯ ಹಲವು ಸೆಲೆಬ್ರಿಟಿಗಳ ಹೆಸರು ಕೇಳಿಬರುತ್ತಿದ್ದು, ಅವರು ಯಾರು? ಎಂಬ ಮಾಹಿತಿ ಇಲ್ಲಿದೆ.
ಕನ್ನಡದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡ ಸೀಸನ್-12ರ ನಿರೂಪಕರಾಗಿ ಮತ್ತೆ ಮುಂದುವರಿಯುತ್ತಿರುವುದು ಖಚಿತವಾಗಿದೆ. ಈ ಸೀಸನ್ ಕಾರ್ಯಕ್ರಮದ ನಿರೂಪಕ ಯಾರು ಎಂಬ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆಯೂ ಬಿದ್ದಿದೆ. ಹೀಗಾಗಿ ಕಲರ್ಸ್ ಕನ್ನಡ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗುವ ಈ ಜನಪ್ರಿಯ ರಿಯಾಲಿಟಿ ಶೋನ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಸ್ಪರ್ಧಿಗಳ ಅಂತಿಮ ಪಟ್ಟಿ ಇನ್ನೂ ರಹಸ್ಯವಾಗಿ ಉಳಿದಿದೆ. ಮೂಲಗಳ ಪ್ರಕಾರ ಕಿರುತೆರೆ, ಸಿನಿಮಾ, ಡಿಜಿಟಲ್ ಮಾಧ್ಯಮ ಮತ್ತು ಸಂಗೀತ ಕ್ಷೇತ್ರಗಳ ಸ್ಪರ್ಧಿಗಳು ಈ ಬಾರಿ ಬಿಗ್‌ಬಾಸ್ ಮನೆಯಲ್ಲಿ ಇರಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹೆಸರುಗಳು ಹರಿದಾಡುತ್ತಿವೆ. ಈ ಪೈಕಿ ಕೆಲವರ ಹೆಸರು ಹಾಗೂ ವಿವರ ಈ ರೀತಿ ಇದೆ..
ಡಾಕ್ಟರ್ ಬ್ರೋ: ಕನ್ನಡದ ಖ್ಯಾತ ಯೂಟ್ಯೂಬರ್ "ಡಾಕ್ಟರ್ ಬ್ರೋ" ಎಂದು ಕರೆಯಲ್ಪಡುವ ಗಗನ್ ಶ್ರೀನಿವಾಸ್ ಅವರು ಈ ಬಾರಿ ಬಿಗ್‌ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ರಾಜ್ಯ, ದೇಶ, ವಿದೇಶಗಳನ್ನು ಸುತ್ತಿ ಅದರ ವಿಡಿಯೋಗಳನ್ನು ಹಂಚಿಕೊಂಡಿರುವ ಗಗನ್ ಅವರಿಗೆ ದೊಡ್ಡ ಅಭಿಮಾನಿ ಬಳಗವೂ ಇದೆ.
ವಿಜಯ್ ಸೂರ್ಯ: ಅಗ್ನಿಸಾಕ್ಷಿ, ದೃಷ್ಟಿ ಬೊಟ್ಟು ಧಾರಾವಾಹಿಗಳಿಗೆ ಹೆಸರುವಾಸಿಯಾಗಿರುವ ಕಿರುತೆರೆ ನಟ ವಿಜಯ್ ಸೂರ್ಯ ಅವರಿಗೂ ಫ್ಯಾನ್ಸ್ ಹೆಚ್ಚಾಗಿದ್ದಾರೆ. ಹಾಗಾಗಿ ಇವರ ಹೆಸರೂ ಚಾಲ್ತಿಯಲ್ಲಿದೆ.
ಶ್ವೇತಾ ಪ್ರಸಾದ್: ರಾಧಾರಮಣ ಹಾಗು ಶ್ರೀರಸ್ತು ಶುಭಮಸ್ತು ಧಾರಾವಾಹಿ ಖ್ಯಾತಿಯ ಶ್ವೇತಾ ಪ್ರಸಾದ್ ಅವರು ಕೂಡ ಈ ಬಾರಿ ಬಿಗ್‌ಬಾಸ್‌ನಲ್ಲಿರಲಿದ್ದಾರೆ ಎನ್ನಲಾಗಿದೆ.
ಗಗನಾ: ಮಹಾನಟಿ ರಿಯಾಲಿಟಿ ಶೋನಲ್ಲಿ ಗಮನ ಸೆಳೆದಿರುವ ಗಗನಾ ಹೆಸರು ಕೂಡ ಈ ಬಿಗ್‌ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿದೆ.
ಬಾಳು ಬೆಳಗುಂದಿ: ಕನ್ನಡದ ಜಾನಪದ ಗಾಯಕ ಹಾಗೂ ಸರಿಗಮಪ ಖ್ಯಾತಿಯ ಬಾಳು ಬೆಳಗುಂದಿ ಕೂಡ ಬಿಗ್‌ಬಾಸ್ ಸ್ಪರ್ಧಿಯಾಗುವ ಸಾಧ್ಯತೆ ಇದೆ.
ದಿವ್ಯಾ ವಸಂತ್: ಕನ್ನಡ ವಾಹಿನಿ ಸುದ್ದಿ ನಿರೂಪಕಿ ಹಾಗೂ ವಿವಾದಗಳಿಂದ ಖ್ಯಾತಿ ಗಳಿಸಿರುವ ದಿವ್ಯಾ ವಸಂತಾ ಅವರು ಹೆಸರು ಕೂಡ ಚಾಲ್ತಿಯಲ್ಲಿದೆ.
ಎಂಡಿ ಸಮೀರ್: ಖ್ಯಾತ ಯುಟ್ಯೂಬರ್ ಹಾಗೂ ಇತ್ತೀಚೆಗೆ ತಮ್ಮ ವಿಡಿಯೋಗಳ ಮೂಲಕ ಸಂಚಲನ ಸೃಷ್ಟಿಸಿದ್ದ ಸಮೀರ್ ಅವರು ಬಿಗ್‌ಬಾಸ್ ಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಜನಾ ಬುರ್ಲಿ: ಪುಟ್ಟಕ್ಕನ ಮಕ್ಕಳು ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿರುವ ಕಿರುತೆರೆ ನಟಿ ಸಂಜನಾ ಹೆಸರು ಕೂಡ ಬಿಗ್‌ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ.
ಸಾಗರ್ ಬಿಳಿಗೌಡ: ಜನಪ್ರಿಯ ಧಾರಾವಾಹಿ ಸತ್ಯದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ಸಾಗರ್ ಬಿಳಿಗೌಡ ಅವರು ಕನ್ನಡ ಕಿರುತೆರೆಯಲ್ಲಿ ಛಾಪು ಮೂಡಿಸಿದ್ದಾರೆ. ಸಂಭಾವ್ಯರ ಪಟ್ಟಿಯಲ್ಲಿ ಇವರ ಹೆಸರೂ ಇದೆ.
ಸ್ವಾತಿ: ಹಿರಿಯ ಕಿರುತೆರೆ ನಟಿ ಸ್ವಾತಿ ಕನ್ನಡ ಧಾರಾವಾಹಿಗಳಾದ ಗಟ್ಟಿಮೇಳ, ಬ್ರಹ್ಮಗಂಟು ಮೂಲಕ ಜನಪ್ರಿಯರಾಗಿದ್ದಾರೆ. ಹಿರಿಯರ ಪೈಕಿ ಇವರು ಕೂಡ ಬಿಗ್‌ಬಾಸ್‌ನಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸುನಿಲ್: ಸರಿಗಮಪ ಮೂಲಕ ಖ್ಯಾತಿ ಗಳಿಸಿರುವ ಗಾಯಕ ಸುನಿಲ್ ಅವರು ತಮ್ಮ ಸಂಗೀತದ ಪ್ರತಿಭೆಯಿಂದ ಮನೆಮಾತಾಗಿದ್ದಾರೆ. ಹಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿರುವ ಸುನಿಲ್ ಅವರು ಕೂಡ ಬಿಗ್‌ಬಾಸ್‌ನ ಪ್ರಬಲ ಸ್ಪರ್ಧಿ ಎನ್ನುತ್ತಿದ್ದಾರೆ.
ದಯವಿಟ್ಟು ಗಮನಿಸಿ: ಈ ಪಟ್ಟಿಯನ್ನು ಅಧಿಕೃತವಾಗಿ ಕಲರ್ಸ್ ಕನ್ನಡ ಅಥವಾ ಬಿಗ್‌ಬಾಸ್ ಘೋಷಿಸಿಲ್ಲ. ಇದು ಸೋಷಿಯಲ್ ಮೀಡಿಯಾ ಆಧಾರಿತ ಸುದ್ದಿ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications