Bigg Boss Winner Lover: ಲವರ್ ಫೋಟೋ ರಿವೀಲ್ ಮಾಡಿದ ಬಿಗ್ ಬಾಸ್ ವಿನ್ನರ್: ಭಾರೀ ವೈರಲ್
Bigg Boss Winner: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ರಿಯಾಲಿಟಿ ಶೋಗಳಲ್ಲಿ ಅತ್ಯಂತ ದೊಡ್ಡ ಶೋ ಆಗಿದೆ. ಇತ್ತೀಚೆಗಷ್ಟೇ ಬಿಗ್ ಕನ್ನಡ 11 ಸೀಸನ್ ಮುಗಿದಿದ್ದು, ಕುರಿಗಾಹಿ ಹನುಮಂತು ಅವರು ಫೈನ್‌ಲ್‌ನಲ್ಲಿ ಗೆದ್ದು ಕಪ್ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ತ್ರಿವಿಕ್ರಂ ರನ್ನರ್ ಅಪ್ ಆಗಿದ್ದಾರೆ. ಈ ನಡುವೆಯೇ ಹಲವು ಭಾಷೆಗಳ ಬಿಗ್ ಬಾಸ್ ಸ್ಪರ್ಧಿಗಳ ಪ್ರೇಮ ಕಹಾನಿಗಳು ಹೊರಬೋಳುತ್ತಲೇ ಇವೆ.
ಕನ್ನಡ ಬಿಗ್ ಬಾಸ್ ಶೋನಲ್ಲಿ ಶಿಶಿರ್ ಮತ್ತ ಐಶ್ವರ್ಯ ನಡುವೆ ಪ್ರೇಮ್ ಕಹಾನಿ ನಡೆಯುತ್ತಿವೆ ಎನ್ನುವ ಸುದ್ದಿ ಹಬ್ಬಿತ್ತು. ಬಳಿಕ ಧರ್ಮ ಕೀರ್ತಿ ರಾಜ್ ಹಾಗೂ ಅನುಷಾ ರೈ, ಭವ್ಯಾ ಗೌಡ & ತ್ರಿವಿಕ್ರಂ ನಡುವೆ ಪ್ರೇಮ ಕಹಾನಿ ನಡೆಯುತ್ತಿದೆ ಎನ್ನುವ ವಿಚಾರ ಎಲ್ಲೆಡೆ ಹರಿದಾಡಿತ್ತು. ಈಗಲೂ ಈ ಮೂರು ಜೋಡಿಗಳ ನಡುವೆ ಪ್ರೀತಿ-ಪ್ರೇಮ ಇದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಈ ನಡುವೆಯೇ ಹಲವು ಭಾಷೆಗಳ ಬಿಗ್ ಬಾಸ್ ಸ್ಪರ್ಧಿಗಳ ಲವ್ ವಿಚಾರ ಒಂದೊಂದೇ ಬೆಳಕಿಗೆ ಬರುತ್ತಿವೆ. ಅಲ್ಲದೆ ಬಿಗ್ ಬಾಸ್ ಮುಗಿದ ಬಂತರ ತುಂಬಾ ಜನ ವಿವಾಹಕ್ಕೆ ಸಜ್ಜಾಗುತ್ತಿದ್ದಾರೆ. ಹಾಗೆಯೇ ಕಳೆದ ಕೆಲವು ದಿನಗಳಲ್ಲಿ ಮರಾಠಿ ಕಲಾ ಜಗತ್ತಿನ ಅನೇಕ ಕಲಾವಿದರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದ್ದರಿಂದ ಕೆಲ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪ್ರೀತಿಯನ್ನು ಸಾರ್ವಜನಿಕವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಅಲ್ಲದೆ, ಆ ಬಗ್ಗೆ ಸಾಮಾಜಿಕ ಜಾಲತಾಣಗಳ ತಮ್ಮ ಖಾತೆಗಳಲ್ಲಿ ಬರೆದುಕೊಳ್ಳುತ್ತಿದ್ದಾರೆ.
ಬಿಗ್ ಬಾಸ್ ಮರಾಠಿಯ 4ನೇ ಸೀಸನ್‌ನ ವಿಜೇತ ಅಕ್ಷಯ್ ಕೇಳ್ಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಅವರ 10 ವರ್ಷಗಳ ಸಂಬಂಧದ ಬಗ್ಗೆ ಬಹಿರಂಗಪಡಿಸಿದ್ದಾರೆ. ಅಕ್ಷಯ್ ಕೇಳ್ಕರ್ ಅವರು ಬಿಗ್ ಬಾಸ್ ಮನೆಯಲ್ಲಿ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದಾರೆ ಎಂದು ಬಹಿರಂಗಪಡಿಸಿದ್ದರು. ಆದರೆ, ಮನೆಯಲ್ಲಿ ಅವರು ತನ್ನ ಗೆಳತಿಯನ್ನು ರಾಮಾ ಎಂದು ಕರೆಯುತ್ತಿದ್ದರು. ತಮ್ಮ ಸಂಬಂಧವನ್ನು 10 ವರ್ಷಗಳ ಕಾಲ ರಹಸ್ಯವಾಗಿಟ್ಟಿದ್ದರು.
ಅಕ್ಷಯ್ ಹಲವು ನಟಿಯರೊಂದಿಗೆ ಸಂಪರ್ಕ ಹೊಂದಿದ್ದರು, ವಿಶೇಷವಾಗಿ ಸಮೃದ್ಧಿ ಕೇಳ್ಕರ್ ಅವರೊಂದಿಗೆ. ಆದ್ದರಿಂದ ಅಕ್ಷಯ್ ಮತ್ತು ಸಮೃದ್ಧಿ ನಡುವೆ ಏನೋ ನಡೆಯುತ್ತಿದೆ ಎಂದು ಅವರ ಅಭಿಮಾನಿಗಳು ತಿಳಿದುಕೊಂಡಿದ್ದರು. ಆದರೆ, ಅಕ್ಷಯ್ ಅವರು ಪ್ರೀತಿ ಮಾಡುತ್ತಿರುವುದು ಸಾಧನಾ ಕಾಕತ್ಕರ್ ಅವರನ್ನು. ಅವರು ಜನಪ್ರಿಯ ಗಾಯಕಿಯಾಗಿದ್ದಾರೆ. ಸಾಧನಾ ಅವರು ಅಕ್ಷಯ್ ಅವರ ಮೆತಾರಾ, ಆನಂದಾಚೆ ಗಾಂವ್ ಮತ್ತು ನಖವಾ ಸೇರಿದಂತೆ ಹಲವು ಹಾಡುಗಳಿಗೆ ಧ್ವನಿ ನೀಡಿದ್ದಾರೆ.
ಅಕ್ಷಯ್ ಕೇಳ್ಕರ್‌ಗಾಗಿ ಗೆಳತಿಯ ಪೋಸ್ಟ್ ಅಕ್ಷಯ್ ಅವರಂತೆಯೇ, ಸಾಧನ್ ಸಹ ಸಾಮಾಜಿಕ ಮಾಧ್ಯಮದಲ್ಲಿ ಅವರಿಬ್ಬರು ಜೊತೆಗಿರುವ ಮೊದಲ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. "ನಮ್ಮ ಪ್ರೇಮಕಥೆಯನ್ನು ತುಂಬಾ ಸುಂದರಗೊಳಿಸಿದ್ದಕ್ಕಾಗಿ ಧನ್ಯವಾದಗಳು... ಈಗ ನಮ್ಮ ಸಂಬಂಧವು ಜಗತ್ತಿಗೆ ತಿಳಿದಿದೆ! ನಾವು ಈ ದಿನಕ್ಕಾಗಿ ಕಾತುರದಿಂದ ಕಾಯುತ್ತಿದ್ದೆವು ಎಂದು ಬರೆದುಕೊಂಡಿದ್ದಾರೆ".
ಅಕ್ಷಯ್ ಕೇಳ್ಕರ್ ಮತ್ತು ಸಾಧನಾ ಅವರ ಫೋಟೋಗಳಿಗೆ ಪ್ರಶಂಸೆಗಳ ಸುರಿಮಳೆಯೇ ಹರಿದುಬರುತ್ತಿದೆ. ಹಲವು ಕಲಾವಿದರು ಕೂಡ ಈ ಜೊಡಿಗೆ ವಿಶ್ ಮಾಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡ ಅಕ್ಷಯ್ ಕೇಳ್ಕರ್ "ನಮ್ಮ ಪ್ರೀತಿಗೆ ಇಂದು 10 ವರ್ಷ. ಜೀವನದಲ್ಲಿ ಏನೇ ಆಗಲಿ, ನಾನು ನಿನ್ನನ್ನು ಪ್ರೀತಿಸುತ್ತೇನೆ, ನಾನು ಮಾತ್ರ ನಿನ್ನವನೇ" ಎಂದು ಬರೆದುಕೊಂಡಿದ್ದಾರೆ. ಇದು ಭಾರೀ ವೈರಲ್ ಆಗುತ್ತಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications