Gauri Spratt: ಅಮೀರ್ ಖಾನ್ ಮೆಚ್ಚಿದ ಬೆಂಗಳೂರು ಬೆಡಗಿ ಗೌರಿ ಅವರ ಹಿನ್ನೆಲೆ ಏನು?
ಬಾಲಿವುಡ್ ನಟ ಅಮೀರ್ ಖಾನ್ ಅವರು ಮತ್ತೆ ಪ್ರೀತಿಯಲ್ಲಿ ಮುಳುಗಿದ್ದಾರೆ. ಬೆಂಗಳೂರಿನ ಬೆಡಗಿ ಜೊತೆ ಅವರು ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಈ ಬಗ್ಗೆ ಎಲ್ಲಿಯೂ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಎರಡು ಮದುವೆಗಳಲ್ಲಿ ವಿಚ್ಛೇದನದ ಬಳಿಕ ಅಮೀರ್ ಖಾನ್ ಅವರು ಮೂರನೇ ಮದುವೆಗೆ ಸಜ್ಜಾಗಿರುವುದು ಕುತೂಹಲ ಮೂಡಿಸಿತ್ತು. ಆದರೆ ಕೊನೆಗೂ ತಮ್ಮ 60ನೇ ಹುಟ್ಟುಹಬ್ಬದ ದಿನವಾದ ಇಂದು ತಮ್ಮ ಪ್ರೇಯಸಿ ಗೌರಿ ಸ್ಪ್ರಾಟ್ ಅವರನ್ನು ಅನೌಪಚಾರಿಕವಾಗಿ ಪರಿಚಯಿಸಿದ್ದಾರೆ. ಬೆಂಗಳೂರಿನವರಾದ ಗೌರಿ ಅವರ ಸಂಪೂರ್ಣ ಹಿನ್ನೆಲೆ ಏನು ಎಂಬುದು ಕೂಡ ಗೊತ್ತಾಗಿದೆ.
ಕಳೆದ ಒಂದು ತಿಂಗಳಿನಿಂದ ಅಮೀರ್ ಖಾನ್ ಮತ್ತೆ ಪ್ರೀತಿಯಲ್ಲಿ ಬೀಳುತ್ತಿದ್ದಾರೆ ಎಂಬ ವದಂತಿ ಮಾಧ್ಯಮಗಳಲ್ಲಿ ಹರಿದಾಡುತ್ತಲೇ ಇದ್ದವು. ಅವರ ಹೊಸ ಗೆಳತಿಯ ಕುಟುಂಬವನ್ನು ಕೂಡ ಭೇಟಿಯಾಗಿದ್ದರು ಎಂದು ಹೇಳಲಾಗಿತ್ತು. ಇಂದು ಈ ಬಗ್ಗೆ ರಿವೀಲ್ ಆಗಿದ್ದು, ಆಕೆಯ ಹೆಸರು ಗೌರಿ ಎಂಬುದು ಬಹಿರಂಗಗೊಂಡಿದೆ. ಗೌರಿ ಸ್ಪ್ರಾಟ್ ಅವರು ಸದ್ಯ ಮುಂಬೈನಲ್ಲಿದ್ದಾರೆ. ಇದಕ್ಕೂ ಮುನ್ನ ಅವರು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮತ್ತೊಂದು ವಿಶೇಷವೆಂದರೆ ಗೌರಿ ಅವರು ಭಾಗಶಃ ತಮಿಳು ಮತ್ತು ಭಾಗಶಃ ಐರಿಶ್. ಗೌರಿ ಅವರ ಕುಟುಂಬದ ಹಿನ್ನೆಲೆ ಕೂಡ ಅಚ್ಚರಿ ಮೂಡಿಸುವಂತಿದೆ. ಅವರ ಅಜ್ಜ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಹಾಗೂ ಅವರ ತಾಯಿ ರೀಟಾ ಸ್ಪ್ರಾಟ್ ಒಮ್ಮೆ ಬೆಂಗಳೂರಿನಲ್ಲಿ ಸಲೂನ್ ನಡೆಸುತ್ತಿದ್ದರು ಎನ್ನಲಾಗಿದೆ. ತಮ್ಮ ತಾಯಿಯ ವೃತ್ತಿಯನ್ನೇ ಮುಂದುವರಿಸಿರುವ ಗೌರಿ ಅವರು ಈಗ ಮುಂಬೈನಲ್ಲಿ ಯಶಸ್ವಿ ಬಿಬ್ಲಂಟ್ ಸಲೂನ್ ಅನ್ನು ನಡೆಸುತ್ತಿದ್ದಾರೆ.
ಗೌರಿ ಅವರ ಶೈಕ್ಷಣಿಕ ಜೀವನವು ಬ್ಲೂ ಮೌಂಟೇನ್ ಶಾಲೆಯಲ್ಲಿ ಪ್ರಾರಂಭವಾಯಿತು. ನಂತರ ಅವರು ಲಂಡನ್‌ನ ಕಲಾ ವಿಶ್ವವಿದ್ಯಾಲಯದಲ್ಲಿ ಫ್ಯಾಷನ್ ಸ್ಟೈಲಿಂಗ್ ಮತ್ತು ಫೋಟೋಗ್ರಫಿಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಸೃಜನಶೀಲತೆಯ ಮೇಲಿನ ಅವರ ಅಪಾರವಾದ ಉತ್ಸಾಹವು ಅವರನ್ನು ಇಂದು ಸೌಂದರ್ಯ ಉದ್ಯಮದಲ್ಲಿ ಯಶಸ್ವಿ ವೃತ್ತಿಜೀವನಕ್ಕೆ ಕರೆದೊಯ್ದಿದೆ. ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ ಗೌರಿ ಅವರು 2007 ರಿಂದ ಬಿ ಬ್ಲಂಟ್‌ನಲ್ಲಿ ಪಾಲುದಾರರು ಹಾಗೂ ಮತ್ತು ನಿರ್ದೇಶಕಿಯೂ ಆಗಿದ್ದಾರೆ.

ಅಮೀರ್ ಖಾನ್ ಹಾಗೂ ಗೌರಿ ಇಬ್ಬರೂ 25 ವರ್ಷಗಳ ಹಿಂದೆ ಭೇಟಿಯಾಗಿದ್ದರು. ಆದರೆ, ಕಾಲಾನಂತರದಲ್ಲಿ ಸಂಪರ್ಕ ಕಡಿದು ಹೋಗಿತ್ತು. ಕೆಲವು ವರ್ಷಗಳ ಹಿಂದೆ ಇವರು ಮತ್ತೆ ಮೀಟ್ ಆಗಿದ್ದರು. ಕಳೆದ 18 ತಿಂಗಳುಗಳಿಂದ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಗೌರಿ ಅವರಿಗೂ ಈಗಾಗಲೇ ಮದುವೆಯಾಗಿದ್ದು, 6 ವರ್ಷದ ಮಗ ಕೂಡ ಇದ್ದಾನೆ. ಅವರು ತಮ್ಮ ಕೌಟುಂಬಿಕ ಜೀವನ ಹಾಗೂ ವೃತ್ತಿಜೀವನವನ್ನು ಸಮತೋಲನದಿಂದ ನಡೆಸುತ್ತಿದ್ದಾರೆ. ಇದೀಗ ಮನರಂಜನೆ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಅಮೀರ್ ಖಾನ್ ಅವರೊಂದಿಗೆ ಹೊಸ ಅಧ್ಯಾಯ ಶುರು ಮಾಡುತ್ತಿದ್ದಾರೆ.
-
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
Monalisa: ಕುಂಭಮೇಳ ವೈರಲ್ ಸುಂದರಿ ಮೊನಾಲಿಸಾ ದಂಪತಿಗೆ ಬಿಗ್ ರಿಲೀಫ್: ಬಂಧನಕ್ಕೆ ತಡೆ ನೀಡಿದ ಕೇರಳ ಹೈಕೋರ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications