Pavithra Gowda: ಪವಿತ್ರಾ ಗೌಡ ಜೊತೆ ಈಗ ರೊಮ್ಯಾನ್ಸ್‌ ಮಾಡೋಕೆ ಆಗೋದಿಲ್ಲ: ಹಿಂಗ್ ಅಂದಿದ್ದು ಯಾರು?

Pavithra Gowda: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಹೊರಬಂದಿದ್ದರು. ಇನ್ನು ಇದೀಗ ಪವಿತ್ರಾ ಗೌಡ ಮಾಜಿ ಪತಿ ಸಂಜಯ್‌ ಸಿಂಗ್ ಮಾಧ್ಯಮದವರು ಬಳಿ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಹಾಗಾದರೆ ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ಕೆಲವು ದಿನಗಳ ಹಿಂದೆಯಷ್ಟೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರಾಗಿ ಬಿಡುಗಡೆಯಾಗಿದ್ದರು. ಈ ಬೆನ್ನಲ್ಲೇ ನಟ ದರ್ಶನ್‌ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಮತ್ತೊಂದೆಡೆ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಅವರ ಮಗಳು ಕೂಡ ಸಂತಸ ವ್ಯಕ್ತಪಡಿಸಿದ್ದರು. ಅಲ್ಲದೆ, ಮಾಜಿ ಪತಿ ಸಂಜಯ್ ಕೂಡ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದರು. ಇದೀಗ ಮತ್ತೆ ಸಂಜಯ್‌ ಸಿಂಗ್‌ ಶಾಕಿಂಗ್‌ ಹೇಳಿ ನೀಡಿ ಸುದ್ದಿಯಲ್ಲಿದ್ದಾರೆ.

Can t Romance With Pavithra Gowda Sanjay Singh

ಪೆನ್ಸಿಲ್‌ ಅಲ್ಲಿ ಬರೆದದ್ದನ್ನು ಮತ್ತೆ ಅದನ್ನು ಅಳಸಿಕೊಳ್ಳುದಕ್ಕೆ ಸಮಯ ಬರುತ್ತದೆ ಎಂದು ನೀವೆ ಹೇಳಿದ್ದೀರಿ ಇದಕ್ಕೆ ಏನು ಹೇಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ. "ಪವಿತ್ರಾ ಗೌಡ ಮತ್ತೆ ವಾಪಸ್‌ ಬಂದರೆ, ನಾನು ಖಂಡಿತಾ ಸ್ವೀಕಾರ ಮಾಡುತ್ತೇನೆ. ಅಪ್ಪನಿಗಿಂತ ಹೆಚ್ಚಾಗಿ ಪ್ರೀತಿಯಿಂದ ನೋಡಿಕೊಳ್ಳುತ್ತೇನೆ. ಆದರೆ, ಪವಿತ್ರಾ ಗೌಡ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಅವರಿಗೆ ಮುಂದೆ ಹೋಗೋಗು ಗೊತ್ತೆ ಹೊರತು ಹಿಂದೆ ಬರುವುದಿಲ್ಲ. ಆದ್ದರಿಂದ ಮತ್ತೆ ನನ್ನ ಬಳಿ ವಾಪಸ್‌ ಬರುತ್ತಾರೋ ಇಲ್ವೋ ಗೊತ್ತಿಲ್ಲ," ಎಂದು ಹೆಳಿದ್ದಾರೆ.

"ಈಗ ನನಗೆ ವಯಸ್ಸಿನ ದೃಷ್ಟಿಯಲ್ಲಿ ನೋಡಿದರೆ, ನನ್ನ ಕೈಯಲ್ಲಿ ರೊಮ್ಯಾನ್ಸ್‌ ಮಾಡೋಕೆ ಸಾಧ್ಯವಿಲ್ಲ. ಆದರೆ ಪವಿತ್ರಾ ಗೌಡ ನನ್ನ ಬಳಿ ಬಂದರೆ, ನಾನು ಯಾವಾಗಲೂ ಅವರನ್ನು ಸ್ವೀಕರಿಸಲು ಸಿದ್ಧನಿದ್ದೇನೆ," ಎಂದು ಹೇಳಿ ಗಮನ ಸೆಳೆದಿದ್ದಾರೆ. ಇದು ಜೈಲಿನಿಂದ ಬಿಡುಗಡೆಯಾಗುವುದಕ್ಕೂ ಇದು ಕೆಲವು ದಿನಗಳ ಹಿಂದೆಯಷ್ಟೇ ಹೇಳಿದ್ದ ಮಾತನಾಗಿದ್ದು, ಇದೀಗ ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪವಿತ್ರಾ ಗೌಡ ಅವರು ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದಿದ್ದಾರೆ. ಇನ್ನು ಪವಿತ್ರಾ ಗೌಡ ಬಿಡುಗಡೆ ಬೆನ್ನಲ್ಲೇ ಮಾಜಿ ಪತಿ ಸಂಜಯ್ ಸಿಂಗ್ ಅವರು ಕೂಡ ಬೆಂಗಳೂರಿಗೆ ಬಂದಿದ್ದು, ಕೆಲವು ವಿಷಯಗಳ ಬಗ್ಗೆ ಮಾತನಾಡಿದ್ದರು. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿದ್ದಕ್ಕೇ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದೇ ವೇಳೆ ಮಾಜಿ ಪತ್ನಿಗಾಗಿ ಹರಕೆ ಹೊತ್ತಿರುವುದಾಗಿಯೂ ತಿಳಿಸಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದಿದ್ದಾರೆ. ಇನ್ನು ಪವಿತ್ರಾ ಗೌಡ ಬಿಡುಗಡೆ ಬೆನ್ನಲ್ಲೇ ಮಾಜಿ ಪತಿ ಸಂಜಯ್ ಸಿಂಗ್ ಅವರು ಕೂಡ ಬೆಂಗಳೂರಿಗೆ ಬಂದಿದ್ದು, ಕೆಲವು ವಿಷಯಗಳ ಬಗ್ಗೆ ಮಾತನಾಡಿದ್ದರು. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿದ್ದಕ್ಕೇ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದೇ ವೇಳೆ ಮಾಜಿ ಪತ್ನಿಗಾಗಿ ಹರಕೆ ಹೊತ್ತಿರುವುದಾಗಿಯೂ ತಿಳಿಸಿದ್ದರು.

ನಾನು ಬೆಂಗಳೂರಿಗೆ ಬಂದಿದ್ದು ಬೇರೆ ಕೆಲಸದ ಮೇಲೆ. ಆದರೆ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಪವಿತ್ರಾ ಗೌಡಗೆ ಜಾಮೀನು ಸಿಕ್ಕಿರುವುದು ಗೊತ್ತಾಯ್ತು. ಆ ದೇವರೇ ನನ್ನನ್ನು ಈ ವೇಳೆ ಇಲ್ಲಿಗೆ ಕಳಿಸಿದ್ದಾನೆ ಎಂದು ಸಂಜಯ್ ಸಿಂಗ್ ಹೇಳಿದ್ದರು. ಅಲ್ಲದೆ, ಪವಿತ್ರಾ ಗೌಡಗೆ ಜಾಮೀನು ಸಿಕ್ಕಿದ್ದಕ್ಕೆ ಸಂತೋಷವಾಗಿದೆ. ಅವರು ಹೊರಗಡೆ ಬರಲಿ ಎಂದು ನಾನು ಪ್ರತಿ ದಿನ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದೆ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+