Breaking: ಡ್ರಗ್ ಕೇಸ್‌ನಲ್ಲಿ ರಾಗಿಣಿ ಹಾಗೂ ಸಂಜನಾಗೆ ಸಿಸಿಬಿ ಬಿಗ್ ಶಾಕ್
ಸ್ಯಾಂಡಲ್‌ವುಡ್ ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು ಸಿನಿಮಾ ರಂಗವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೆ ಡ್ರಗ್ ಕೇಸ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಈ ಇಬ್ಬರು ನಟಿಯರಿಗೆ ಸಿಸಿಬಿ ಬಿಗ್ ಶಾಕ್ ಕೊಟ್ಟಿದೆ.
ಹೌದು... ಡ್ರಗ್ ಕೇಸ್‌ನಲ್ಲಿ ಜಾಮೀನು ಪಡೆದು ಹೊರಬಂದಿರುವ ರಾಗಿಣಿ ಹಾಗೂ ಸಂಜನಾ ಅವರ ಕೇಸ್ ಮತ್ತೆ ಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ. ಈ ಇಬ್ಬರು ನಟಿಯರಿಗೆ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಡ್ರಗ್ ಕೇಸ್‌ನಲ್ಲಿ ಎಫ್‌ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ನಟಿಯರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಹೈಕೋರ್ಟ್ ಎಫ್‌ಐಆರ್ ರದ್ದು ಮಾಡಿತ್ತು.

ಇದೀಗ ಸಿಸಿಬಿ ಹೈಕೋರ್ಟ್ ಎಫ್‌ಐಆರ್ ರದ್ದು ಮಾಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಹೈಕೋರ್ಟ್ ಆದೇಶವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಸಿಸಿಬಿ. ಒಂದು ವೇಳೆ ಸಿಸಿಬಿ ಮನವಿಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದ್ದೇ ಆದರೆ ಸ್ಯಾಂಡಲ್‌ವುಡ್ ನಟಿಯರಾದ ಸಂಜನಾ ಹಾಗೂ ರಾಗಿಣಿಗೆ ಮತ್ತೆ ಸಂಕಷ್ಟ ಶುರುವಾಗಲಿದೆ.
ಜುಂ ಜುಂ ಮಾಯಾ ಹುಡುಗಿಗೆ ಮತ್ತೆ ಸಂಕಷ್ಟ!
ಸ್ಯಾಂಡಲ್‌ವುಡ್‌ನಲ್ಲಿ ತುಪ್ಪದ ಹುಡುಗಿ ಎಂದೇ ಹೆಸರಾದ ರಾಗಿಣಿ ಒಂದು ಕಾಲದಲ್ಲಿ ಸುದೀಪ್ ಸೇರಿದಂತೆ ಇತರ ನಟರೊಂದಿಗೆ ದೊಡ್ಡ ಪರದೆಯ ಮೇಲೆ ಕಾಣಿಸಿಕೊಂಡವರು. ಜುಂ ಜುಂ ಮಾಯಾ ಅಂತ ಕಿಚ್ಚ ಸುದೀಪ್ ಜೊತೆಗೆ ಸ್ಟೆಪ್ಸ್ ಹಾಕಿದ್ದ ರಾಗಿಣಿ ಡ್ರಗ್ ಕೇಸ್‌ನಲ್ಲಿ ತಗಲಾಕಿಕೊಂಡಿದ್ದಾರೆ.
2020ರಲ್ಲಿ ರಾಗಿಣಿ ಬಂಧನವಾಗಿತ್ತು. ಡ್ರಗ್ಸ್ ಸುಳಿಯಲ್ಲಿ ಸಿಲುಕಿದ್ದ ರಾಗಿಣಿ ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇತ್ತೀಚೆಗಷ್ಟೆ ಈ ಪ್ರಕರಣ ಇತ್ಯಾರ್ಥವಾಗಿ ರಾಗಿಣಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಸಿಗದ ಬೆನ್ನಲ್ಲೆ ಈ ಪ್ರಕರಣದಲ್ಲಿ ರಾಗಿಣಿ ನಿರಪರಾಧಿ ಎಂದು ತೀರ್ಪು ಬಂದಿತ್ತು. ಇದರಿಂದ ರಾಗಿಣಿ ಬಿಗ್ ರಿಲೀಫ್ ಸಿಕ್ಕಂತಾಗಿತ್ತು. ಆದರೀಗ ಈ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ತುಪ್ಪದ ಹುಡುಗಿ ನಿದ್ದೆಗೆಡುವಂತಾಗಿದೆ.
ಸಂಜನಾಗೆ ಸಿಸಿಬಿ ಶಾಕ್!
ಇನ್ನೂ ಇದೇ ಡ್ರಗ್ಸ್ ಪ್ರಕರಣದಲ್ಲಿ 2020 ಸೆಪ್ಟೆಂಬರ್ 8ರಂದು ನಟಿ ಸಂಜನಾ ಗಲ್ರಾನಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಬಳಿಕ ಸಂಜನಾ ಅವರನ್ನು ಬಂಧಿಸಲಾಗಿತ್ತು. ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಸಂಜನಾ ಡ್ರಗ್ಸ್ ಗೆ ಅವಕಾಶ ಮಾಡಿಕೊಂಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಸುಮಾರು ನಾಲ್ಕು ತಿಂಗಳು ಜೈಲುವಾಸ ಅನುಭವಿಸಿದ್ದರು. ಬಳಿಕ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಬಳಿಕ ಸಂಜನಾ ತಮ್ಮ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಸಂಜನಾ ಮೇಲಿರುವ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು.
ಡ್ರಗ್ ಕೇಸ್‌ನಲ್ಲಿ ಸಂಜನಾ-ರಾಗಿಣಿ ಪಾತ್ರವೇನು?
ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿ ಡ್ರಗ್ ಕೇಸ್ ಕೂಡ ಭಾರೀ ಸದ್ದು ಮಾಡಿತ್ತು. ಡ್ರಗ್ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವ್ಯಕ್ತೊಯೋರ್ವನನ್ನು ಪೊಲೀಸರು ಬಂಧಿಸಿದಾಗ ಸ್ಯಾಂಡಲ್‌ವುಡ್ ನಟಿಯರ ಹೆಸರು ಕೇಳಿಬಂದಿತ್ತು. ನಟಿ ಸಂಜನಾ ಹಾಗೂ ರಾಗಿಣಿ ಹೆಸರು ಡ್ರಗ್ ಪ್ರಕರಣದಲ್ಲಿ ಕೇಳಿ ಬಂದ ಬೆನ್ನಲ್ಲೆ ಸಿಸಿಬಿ ಪೊಲೀಸರು ನಟಿಯರನ್ನು ಬಂಧಿಸಿದ್ದರು. ಈ ನಟಿಯರು ಭಾಗಿಯಾಗಿದ್ದ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಡ್ರಗ್ ದಂಧೆ ನಡೆದಿತ್ತು, ಅಲ್ಲದೆ ಅದಕ್ಕೆ ಇವರು ಅವಕಾಶ ಮಾಡಿಕೊಟ್ಟಿದ್ದರು ಎನ್ನುವ ಆರೋಪ ಇತ್ತು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications