CCL 2025: ಶನಿವಾರ ಕರ್ನಾಟಕ ಬುಲ್ಡೋಜರ್ಸ್ vs ತೆಲುಗು ವಾರಿಯರ್ಸ್ ಮುಖಾಮುಖಿ

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025ರ ಆವೃತ್ತಿಯ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಶನಿವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಾವಳಿಗೆ ಅದ್ದೂರಿ ಚಾಲನೆ ಸಿಗಲಿದ್ದು, ಮೊದಲ ದಿನವೇ ಕಿಚ್ಚ ಸುದೀಪ್ ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ಅಬ್ಬರಿಸಲು ಸಜ್ಜಾಗಿದೆ.

ಶನಿವಾರ ಮಧ್ಯಾಹ್ನವೇ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಮೊದಲ ಪಂದ್ಯ ನಡೆಯಲಿದೆ. ಚೆನ್ನೈ ರ್‍ಹಿನೋಸ್ ಮತ್ತು ಬೆಂಗಾಲ್ ಟೈಗರ್ಸ್ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ವಿರುದ್ಧ ಸೆಣೆಸಲಿದೆ.

ccl 2025 Karnataka bulldozers vs telugu warriors match timings venue live streaming details

ಸಿಸಿಎಲ್‌ನಲ್ಲಿ ಅತಿ ಹೆಚ್ಚು ಅಂದರೆ 4 ಬಾರಿ ಚಾಂಪಿಯನ್ ಆಗಿರುವ ತೆಲುಗು ವಾರಿಯರ್ಸ್ ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಕರ್ನಾಟಕ ಕೂಡ ಎರಡು ಬಾರಿ ಕಪ್ ಗೆದ್ದಿದ್ದು 2024ರ ಆವೃತ್ತಿಯಲ್ಲಿ ಫೈನಲ್ ತಲುಪಿದ್ದರೂ ಕೊನೆಯ ಕ್ಷಣದಲ್ಲಿ ಸೋಲುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಗೆಲುವಿನ ಶುಭಾರಂಭ ಮಾಡುತ್ತಾ ಸುದೀಪ್ ಪಡೆ

ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಬಲಿಷ್ಠ ತೆಲುಗು ವಾರಿಯರ್ಸ್ ತಂಡವನ್ನು ಎದುರಿಸಲಿದ್ದು, ಮೊದಲ ಪಂದ್ಯದಲ್ಲೇ ಗೆದ್ದು ಪಂದ್ಯಾವಳಿಯಲ್ಲಿ ಶುಭಾರಂಭ ಮಾಡುವ ಉತ್ಸಾಹದಲ್ಲಿದೆ. ಬಿಗ್ ಬಾಸ್ ರನ್ನರ್ ಅಪ್ ತ್ರಿವಿಕ್ರಮ್ ಕೂಡ ಕೊನೆಯ ಕ್ಷಣದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ರಾಜೀವ್ ಹನು, ಡಾರ್ಲಿಂಗ್ ಕೃಷ್ಣ, ಮಂಜುನಾಥ್ ಗೌಡ, ಕಾರ್ತಿಕ್ ಜಯರಾಮ್ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.

ಶನಿವಾರ (ಫೆಬ್ರವರಿ, 8) ಸಂಜೆ 6 ಗಂಟೆಗೆ ಪಂದ್ಯ ಆರಂಭವಾಗಲಿದೆ. ಈಗಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಲ್ಲಾ ಟಿಕೆಟ್‌ಗಳು ಸೋಲ್ಡ್‌ ಔಟ್ ಆಗಿದ್ದು ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಬೆಂಬಲಿಸಲು ಮೈದಾನಕ್ಕೆ ಬರಲಿದ್ದಾರೆ.

ಸೋನಿ ಸ್ಪೋರ್ಟ್ಸ್‌ ವಾಹಿನಿಯಲ್ಲಿ ಪಂದ್ಯವನ್ನು ನೇರಪ್ರಸಾರದಲ್ಲಿ ವೀಕ್ಷಿಸಬಹುದು. ಒಟಿಟಿಯಲ್ಲಿ ಡಿಸ್ನಿ ಹಾಟ್‌ಸ್ಟಾರ್ ಪಂದ್ಯದ ಪ್ರಸಾರ ಮಾಡಲಿದೆ.

ಕರ್ನಾಟಕ ಬುಲ್ಡೋಜರ್ಸ್ ತಂಡ

ಕಿಚ್ಚ ಸುದೀಪ್ (ನಾಯಕ), ಗೋಲ್ಡನ್ ಸ್ಟಾರ್ ಗಣೇಶ್, ಕಾರ್ತಿಕ್ ಜಯರಾಮ್, ಡಾರ್ಲಿಂಗ್ ಕೃಷ್ಣ, ರಾಜೀವ್ ಹನು, ಚಂದನ್ ಕುಮಾರ್, ಪ್ರತಾಪ್ ನಾರಾಯಣ್, ನಿರೂಪ್ ಭಂಡಾರಿ, ಅನೂಪ್ ಭಂಡಾರಿ, ಕರಣ್ ಆರ್ಯನ್, ಮಂಜುನಾಥ್ ಗೌಡ, ಸಾಗರ್ ಗೌಡ, ಅಲಕನಂದ, ತ್ರಿವಿಕ್ರಮ್.

ತೆಲುಗು ವಾರಿಯರ್ಸ್ ತಂಡ

ಅಖಿಲ್ ಅಕ್ಕಿನೇನಿ (ನಾಯಕ), ಸಚಿನ್ ಜೋಶಿ, ಅಶ್ವಿನ್ ಬಾಬು, ಧರಂ, ಆದರ್ಶ್, ನಿಖಿಲ್, ರಘು, ರೋ‍ಶನ್, ವಿಶ್ವ, ಪ್ರಿನ್ಸ್, ಸುಶಾಂತ್, ಸುಧೀರ್, ಹರೀಶ್, ನಂದ ಕಿಶೋರ್, ತಮನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+