CCL 2025: ಸಿಸಿಎಲ್ 2025 ಪಾಯಿಂಟ್ಸ್ ಟೇಬಲ್; ಕರ್ನಾಟಕ ಬುಲ್ಡೋಜರ್ಸ್ ಟಾಪರ್ಸ್!

ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) 2025ರ ಆವೃತ್ತಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ಗೆಲುವಿನ ಓಟ ಮುಂದುವರೆದಿದೆ. ಶನಿವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಹೀರೋಸ್ ವಿರುದ್ಧ 85 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ತಲುಪುವ ನೆಚ್ಚಿನ ತಂಡವಾಗಿದೆ.

ಕರ್ನಾಟಕ ಬುಲ್ಡೋಜರ್ಸ್ ಮೂರು ಪಂದ್ಯಗಳನ್ನಾಡಿದ್ದು ಮೂರರಲ್ಲೂ ಭರ್ಜರಿ ಗೆಲುವು ಸಾಧಿಸಿದೆ. ಫೆಬ್ರವರಿ 8 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತೆಲುಗು ವಾರಿಯರ್ಸ್ ವಿರುದ್ಧ 46 ರನ್‌ಗಳಿಂದ ಗೆದ್ದಿದ್ದ ಕರ್ನಾಟಕ ಬುಲ್ಡೋಜರ್ಸ್ ತವರಿನ ಅಭಿಮಾನಿಗಳನ್ನು ರಂಜಿಸಿತ್ತು.

ccl 2025 points table karnataka bulldozers on top

ಫೆಬ್ರವರಿ 14 ರಂದು ಶುಕ್ರವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ರ್‍ಹಿನೋಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಫೆಬ್ರವರಿ 15 ರಂದು ಮುಂಬೈ ಹೀರೋಸ್ ವಿರುದ್ಧ 85 ರನ್‌ಗಳ ಬೃಹತ್ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ.

ಕಳೆದ ಆವೃತ್ತಿಯಲ್ಲಿ 8 ತಂಡಗಳು ಆಡುತ್ತಿದ್ದವು, ಆದರೆ ಕೇರಳ ಬ್ಲಾಸ್ಟರ್ಸ್ ಈ ಬಾರಿ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದು 7 ತಂಡಗಳು ಮಾತ್ರ ಸಿಸಿಎಲ್‌ 2025ರ ಆವೃತ್ತಿಯಲ್ಲಿ ಭಾಗವಹಿಸಿವೆ.

ಸಿಸಿಎಲ್ ಅಂಕಪಟ್ಟಿ

ಆಡಿರುವ ಮೂರು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಬುಲ್ಡೋಜರ್ಸ್ 6 ಪಾಯಿಂಟ್ ಮತ್ತು 2.573 ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಬೆಂಗಾಲ್ ಟೈಗರ್ಸ್ ಆಡಿರುವ 2 ಪಂದ್ಯಗಳನ್ನು ಗೆದ್ದಿದ್ದು 4 ಅಂಕಗಳು ಮತ್ತು 1.672 ರನ್‌ರೇಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಭೋಜ್‌ಪುರಿ ದಬಾಂಗ್ಸ್ 2 ಪಂದ್ಯಗಳಲ್ಲಿ 1 ರಲ್ಲಿ ಗೆದ್ದು 1 ಸೋತಿದ್ದು 2 ಅಂಕಗಳು ಮತ್ತು 1.299 ರನ್‌ರೇಟ್‌ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಚೆನ್ನೈ ರ್‍ಹಿನೋಸ್, ತೆಲುಗು ವಾರಿಯರ್ಸ್ ಆಡಿರುವ ಎರಡು ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದಿದ್ದು ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ಪಂಜಾಬ್ ಡಿ ಶೇರ್ ಒಂದು ಪಂದ್ಯ ಆಡಿದ್ದು ಸೋಲುವ ಮೂಲಕ 6ನೇ ಸ್ಥಾನದಲ್ಲಿದ್ದರೆ, ಆಡಿರುವ 2 ಪಂದ್ಯಗಳನ್ನು ಸೋತಿರುವ ಮುಂಬೈ ಹೀರೋಸ್ 7ನೇ ಸ್ಥಾನದಲ್ಲಿದೆ.

ಕರ್ನಾಟಕ ಬುಲ್ಡೋಜರ್ಸ್ ಮುಂದಿನ ಪಂದ್ಯದನ್ನು ಪಂಜಾಬ್ ಡಿ ಶೇರ್ ವಿರುದ್ಧ ಸೆಣೆಸಲಿದೆ. ಫೆಬ್ರವರಿ 22ರಂದು ಶನಿವಾರ ಈ ಪಂದ್ಯ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ಈ ಪಂದ್ಯ ಗೆದ್ದರೆ ಬಹುತೇಕ ಸೆಮಿಫೈನಲ್ ಸ್ಥಾನ ಖಚಿತವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+