CCL 2024: ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ದಿನಗಣನೆ; ಬಿಗ್ ಅಪ್‌ಡೇಟ್ ಕೊಟ್ಟ ಕರ್ನಾಟಕ ಬುಲ್ಡೋಜರ್ಸ್
ಬೆಂಗಳೂರು, ಫೆಬ್ರವರಿ.21: ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್‌ವುಡ್ ಇಂದ ಬಾಲಿವುಡ್ ತನಕ ಎಲ್ಲಾ ನಟರು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 10 ಸೀಸನ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಸೆಲೆಬ್ರಿಟಿ ಕ್ರಿಕೆಟ್ ಲೀಗ್‌ಗೆ ಇತ್ತೀಚೆಗೆಷ್ಟೇ ದುಬೈನಲ್ಲಿ ಅದ್ಧೂರಿಯಾಗಿ ಚಾಲನೆ ನೀಡಲಗಿತ್ತು. ಇದೀಗ ತಂಡಗಳು ಕ್ರಿಕೆಟ್ ಅಭ್ಯಾಸಕ್ಕಿಳಿದಿವೆ. ಅದರಂತೆ ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲೇ ಕರ್ನಾಟಕ ಬುಲ್ಡೋಜರ್ಸ್ ತಂಡ ಒಂದಷ್ಟು ಅಪ್‌ಡೇಟ್ಸ್ ಹಂಚಿಕೊಂಡಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡದ ಮಾಲೀಕ ಅಶೋಕ್ ಖೇಣಿ, ಸಿಸಿಎಲ್ ಸಂಸ್ಥಾಪಕ ವಿಷ್ಣು ಇಂದೋರಿ ಹಾಗೂ ಕ್ಯಾಪ್ಟನ್ ಪ್ರದೀಪ್ ಸೇರಿದಂತೆ ಇತರರು ಮಾರ್ಧಯಮ ಸಂವಾದ ನಡೆಸಿದ್ದಾರೆ.

ಅನಾರೋಗ್ಯ: ನಟ ಸುದೀಪ್ ಗೈರು
ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ಬುಲ್ಡೋಜರ್ಸ್ ಕ್ಯಾಪ್ಟನ್ ಪ್ರದೀಪ್, "12 ವರ್ಷದ ಸಿಸಿಎಲ್ ಜರ್ನಿ ನೋಡಿದ ಮೇಲೆ, ತುಂಬಾ ಎಮೋಷನಲ್ ಮೂಮೆಂಟ್ ತರ ಇದೆ. ವರ್ಷಕ್ಕೆ 2 ತಿಂಗಳು ಇಟ್ಟುಕೊಂಡರೇ 24 ತಿಂಗಳಾಯ್ತು. ಅಂದ್ರೆ 2 ವರ್ಷದ ಜೀವನವನ್ನು ಸಿಸಿಎಲ್‌ಗೆ ಕೊಟ್ಟಿದ್ದೇವೆ. ಅಷ್ಟು ವರ್ಷದ ಎಫರ್ಟ್ ಇವತ್ತು ಬುರ್ಜ್ ಖಾಲೀಫಾ ಮೇಲೆ ಬರ್ತಿದೆ. ಸಿಸಿಎಲ್ ಮತ್ತಷ್ಟು ದೊಡ್ಡದಾಗುತ್ತಿದೆ. ಇವಿಷ್ಟಕ್ಕೂ ನಾನು ವಿಷ್ಣು ಸರ್ ಧನ್ಯವಾದ ಹೇಳುತ್ತೇನೆ. ಕರ್ನಾಟಕ ಬುಲ್ಡೋಸರ್ಸ್ ಸ್ಟಾಟ್ ಆಗುವುದೇ ಕೆ ಅಕ್ಷರದಿಂದ ಅಂದ್ರೆ ಸುದೀಪಣ್ಣ ಅವರನ್ನು ಬಿಟ್ಟು ಮಾತನಾಡಲು ಸಾಧ್ಯವಿಲ್ಲ. ಅವರಿಗೆ ಹುಷಾರಿಲ್ಲ. ಹೀಗಾಗಿ ಅವರು ಬಂದಿಲ್ಲ" ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಬೋಲ್ಡರ್ ತಂಡದ ಮಾಲೀಕ ಅಶೋಕ್ ಖೇಣಿ ಮಾತನಾಡಿ, "10 ವರ್ಷದ ಹಿಂದೆ ಕನ್ನಡ ಸಿನಿಮಾ ಇಂಡಸ್ಟ್ರೀ ಚಿಕ್ಕ ಇಂಡಸ್ಟ್ರೀಯಾಗಿತ್ತು. ಡಸ್ಟ್ರೀಯ ಒಟ್ಟಾರೆ ಗಳಿಗೆ 50 ಕೋಟಿಯಾಗಿತ್ತು. ಇದು 10 ವರ್ಷದ ಹಿಂದಿನ ಕಥೆ. ಕೆಜಿಎಫ್ ಬಂದ್ಮೇಲೆ ಇಂಡಸ್ಟ್ರೀ ತುಂಬಾ ಬದಲಾಗಿದೆ. ದರ್ಶನ್ ಇಂಡಸ್ಟ್ರೀಗೆ ಬಂದು 25 ವರ್ಷವಾಯ್ತು. ಅವರಿಗೆ 47 ವಯಸ್ಸು. ಇಂದಿಗೂ. ಹೀರೋ ಆಗಿಯೂ ನಟಿಸ್ತಿದ್ದಾರೆ. ವರ್ಷಕ್ಕೆ 2 ಸಿನಿಮಾ ಮಾಡ್ತಿದ್ದಾರೆ. ನನ್ನ ಅದೃಷ್ಟ ಸಿಸಿಎಲ್‌ನಲ್ಲಿ ಇಂತಹ ತಂಡ ಪಡೆದಿರುವುದು. ಸುದೀಪ್ ಅವರಿಗೆ ಕ್ರಿಕೆಟ್ ಅಂದ್ರೆ ಹುಚ್ಚು. ಕ್ರಿಕೆಟ್ ಅನ್ನು ಪ್ರೀತಿಸ್ತಾರೆ. ಒಮ್ಮೆ ಸಿಸಿಎಲ್ ನಲ್ಲಿ ಪೆಟ್ಟು ಮಾಡಿಕೊಂಡಿದ್ದರು. ಆದ್ರೆ ಅದನ್ನು ಲೆಕ್ಕಿಸದೇ ಮತ್ತೆ ಆಟವಾಡಿದ್ದರು. ಕ್ರಿಕೆಟ್ ಸಿನಿಮಾ ಇಂಡಸ್ಟ್ರೀಯ ಭಾಗ. ಅದೇ ರೀತಿ ಸಿನಿಮಾ ಕ್ರಿಕೆಟ್‌ನ ಒಂದು ಭಾಗ" ಎಂದಿದ್ದಾರೆ.

ಫೆಬ್ರವರಿ 23 ರಿಂದ ಸಿಸಿಎಲ್ 10ನೇ ಸೀಸನ್
ಸಿಸಿಎಲ್ 10ನೇ ಸೀಸನ್ ಫೆಬ್ರವರಿ 23 ರಿಂದ ಶುರುವಾಗಿ ಮಾರ್ಚ್ 17 ರವರೆಗೆ ನಡೆಯಲ್ಲಿದೆ. ಭಾರತದ ಎಂಟು ಚಲನಚಿತ್ರೋದ್ಯಮಗಳ ನಟರು ಇರುವ ಒಟ್ಟು ಎಂಟು ತಂಡಗಳು ಯುಎಇ ಸೇರಿದಂತೆ ಭಾರತದ ಐದು ಸ್ಥಳಗಳಲ್ಲಿ 24 ದಿನಗಳ ಕಾಲ ಕ್ರಿಕೆಟ್ ಪಂದ್ಯಗಳಲ್ಲಿ ಭಾಗಿಯಾಗಲಿದ್ದಾರೆ.
ಯುಎಇಯ ಶಾರ್ಜಾದಲ್ಲಿ ಲೀಗ್ನ ಮೂರು ಪಂದ್ಯಗಳು ನಡೆಯಲ್ಲಿದ್ದು, ಆ ನಂತರ ಲೀಗ್ ಭಾರತಕ್ಕೆ ಕಾಲಿಡಲಿದೆ. ಭಾರತದ ಐದು ನಗರಗಳಾದ ಹೈದರಾಬಾದ್, ಬೆಂಗಳೂರು, ಚಂಡೀಗಢ, ತಿರುವನಂತಪುರ ಮತ್ತು ವೈಜಾಗ್ನಲ್ಲಿ ಉಳಿದ ಪಂದ್ಯಗಳು ನಡೆಯಲ್ಲಿವೆ. ವಾರಾಂತ್ಯದಲ್ಲಿ ಅಂದರೆ ಶನಿವಾರ ಹಾಗೂ ಭಾನುವಾರ ಡಬಲ್ ಹೆಡರ್ ಪಂದ್ಯಗಳಿರಲಿವೆ.
ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹೀರೋಸ್ ಮತ್ತು ಕೇರಳ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕರ್ನಾಟಕ ಬುಲ್ಡೋಜರ್ಸ್ ಮೊದಲ ಪಂದ್ಯಾವಳಿ ಇದೇ 25ರಂದು ನಡೆಯುತ್ತಿದ್ದು, ಮುಂಬೈ ಹೀರೋಸ್ ಎದುರು ಸೆಣಸಾಡಲಿದೆ. ಈ ಬಾರಿ ಕ್ರಿಕೆಟ್ ಪ್ರೇಮಿಗಳು ಮತ್ತು ಸಿನಿಮಾ ಪ್ರೇಮಿಗಳು ಮೈದಾನದಲ್ಲಿ ಮಾತ್ರವಲ್ಲ ದೂರದರ್ಶನ, ಸೋನಿ, ಜಿಯೋ ಸಿನಿಮಾದಲ್ಲಿ ಲೈವ್ ನೋಡಬಹುದು.
ತಂಡಗಳು ಯಾವುವು?
• ಮುಂಬೈ ಹೀರೋಸ್
• ಕೇರಳ ಸ್ಟ್ರೈಕರ್ಸ್
• ತೆಲುಗು ವಾರಿಯರ್ಸ್
• ಭೋಜ್ಪುರಿ ದಬಾಂಗ್ಸ್
• ಕರ್ನಾಟಕ ಬುಲ್ಡೋಜರ್ಸ್
• ಬೆಂಗಾಲ್ ಟೈಗರ್ಸ್
• ಚೆನ್ನೈ ರೈನೋಸ್
• ಪಂಜಾಬ್ ದಿ ಶೇರ್
'ಮುಂಬೈ ಹೀರೋಸ್' ತಂಡಕ್ಕೆ ನಟ ಸಲ್ಮಾನ್ ಖಾನ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ರಿತೇಶ್ ದೇಶಮುಖ್ ಕ್ಯಾಪ್ಟನ್ ಆಗಿದ್ದಾರೆ. ಸೋಹೈಲ್ ಖಾನ್ ಅವರು ಈ ತಂಡದ ಮಾಲೀಕ. 'ತೆಲುಗು ವಾರಿಯರ್ಸ್' ಟೀಮ್‌ಗೆ ವೆಂಕಟೇಶ್ ಅವರು ಬ್ರ್ಯಾಂಡ್ ಅಂಬಾಸಿಡರ್. ಆ ತಂಡಕ್ಕೆ ಅಖಿಲ್ ಅಕ್ಕಿನೇನಿ ನಾಯಕನಾಗಿದ್ದಾರೆ.
'ಕರ್ನಾಟಕ ಬುಲ್ಡೋಜರ್ಸ್' ತಂಡಕ್ಕೆ ಪ್ರದೀಪ್ ಕ್ಯಾಪ್ಟನ್ ಆಗಿದ್ದಾರೆ. ಮೋಹನ್ ಲಾಲ್ ಸಹ-ಮಾಲೀಕರಾಗಿರುವ 'ಕೇರಳ ಸ್ಟ್ರೈಕರ್ಸ್' ತಂಡವನ್ನು ಕ್ಯಾಪ್ಟನ್ ಇಂದ್ರಜಿತ್ ಮುನ್ನಡೆಸಲಿದ್ದಾರೆ. 'ಭೋಜಪುರಿ ದಬಾಂಗ್ಸ್' ತಂಡಕ್ಕೆ ಮನೋಜ್ ತಿವಾರಿ ನಾಯಕ. ಸೋನು ಸೂದ್ ಅವರು 'ಪಂಜಾಬ್ ದೆ ಶೇರ್' ತಂಡಕ್ಕೆ ನಾಯಕರಾಗಿದ್ದಾರೆ. ಬೋನಿ ಕಪೂರ್ ಒಡೆತನದ 'ಬೆಂಗಾಲ್ ಟೈಗರ್ಸ್' ತಂಡಕ್ಕೆ ಜಿಸ್ಸು ಸೇನ್ಗುಪ್ತ ಕ್ಯಾಪ್ಟನ್ ಆಗಿದ್ದಾರೆ.












Click it and Unblock the Notifications