ಕಿಯಾರಾ ಫ್ಯಾನ್ಸ್‌ಗೆ ಭಾರೀ ನಿರಾಸೆ: ವಾರ್-2 ಸಿನಿಮಾದ ಈ ಪ್ರಮುಖ ದೃಶ್ಯಗಳಿಗೆ ಕತ್ತರಿ!
ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿಗೆ (Kiara Advani) ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ, ಟಾಲಿವುಡ್‌ನಲ್ಲೂ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಸಿನಿಮಾ ಮೂಲಕ ಕನ್ನಡಕ್ಕೂ ಕಾಲಿಡುತ್ತಿದ್ದಾರೆ. ಇದಕ್ಕೂ ಮುನ್ನ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ಜೊತೆ ಕಿಯಾರ ನಟಿಸಿರುವ ವಾರ್ 2 ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ಕಿಯಾರ ಅವರ ಹಾಟ್ ದೃಶ್ಯಗಳಿವೆ ಎಂದು ಹೇಳಲಾಗಿತ್ತು. ಇದರ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾವನ್ನೇ ಶೇಕ್ ಮಾಡಿದ್ದವು. ಆದರೆ ಕಿಯಾರ ಅಭಿಮಾನಿಗಳಿಗೆ ಬೇಸರದ ಸುದ್ದಿ ಹೊರಬಿದ್ದಿದೆ.
ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಅವರ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮೂಡಿಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಿಲೀಸ್ ಆಗುತ್ತಿರುವ ಹೊತ್ತಲ್ಲೇ ಈ ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ಶಾಕ್ ಕೊಟ್ಟಿದೆ. ಬಿಡುಗಡೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು, ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಈ ಚಿತ್ರತಂಡಕ್ಕೆ ಕೆಲವು ಬದಲಾವಣೆಗಳನ್ನು ಮಾಡುವಂತೆ ಸೂಚಿಸಿದೆ.

ಯಾವುದು ಆ ದೃಶ್ಯಗಳು?
ವಾರ್ 2 ಸಿನಿಮಾದಲ್ಲಿ ನಟಿ ಕಿಯಾರಾ ಅಡ್ವಾಣಿ ಅವರು ಪಡ್ಡೆಹುಡುಗರ ನಿದ್ದೆಗೆಡಿಸುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಇದರ ಫೋಟೋ ಹಾಗೂ ವಿಡಿಯೋಗಳು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರಲ್ಲಿ ನಟಿ ಕಿಯಾರ ಅವರು ತುಂಡುಡುಗೆ ತೊಟ್ಟು, ಸ್ವಿಮ್ಮಿಂಗ್ ಪೂಲ್ ಬಳಿ ಬೋಲ್ಡ್ ಪೋಸ್‌ಗಳನ್ನು ನೀಡಿದ್ದರು. ಹಳದಿ ಬಣ್ಣದ ಬಿಕಿನಿ ತೊಟ್ಟು ಕಿಯಾರಾ ತನ್ನ ಅಂದ ಪ್ರದರ್ಶಿಸಿದ್ದರು. ಈ ಸೀನ್‌ಗಳಿಂದಲೇ ಹಲವರಿಗೆ ವಾರ್ 2 ಸಿನಿಮಾ ಮೇಲೆ ಆಸಕ್ತಿ ಹೆಚ್ಚಾಗಿತ್ತು. ಆದರೆ ಈಗ ಆ ದೃಶ್ಯಗಳನ್ನು ತೆಗೆದು ಹಾಕುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಖಡಕ್ ಆಗಿ ಹೇಳಿದೆ.
ಈ ಸಿನಿಮಾದಲ್ಲಿರುವ ಕೆಲ ದೃಶ್ಯಗಳನ್ನು ಶೇ 50ರಷ್ಟು ಕಡಿಮೆ ಮಾಡಲು ಸಿಬಿಎಫ್‌ಸಿ ಕೇಳಿಕೊಂಡಿದೆ. ಅವುಗಳಲ್ಲಿ ಒಂದು ಈಜುಡುಗೆಯಲ್ಲಿ ಕಿಯಾರಾ ಅಡ್ವಾಣಿಯವರ ದೃಶ್ಯಗಳಿಗೆ ಸಂಬಂಧಿಸಿದ್ದು ಎನ್ನಲಾಗಿದೆ. ಇದಲ್ಲದೆ ಇತರ ಕೆಲವು ಅನುಚಿತ ಕಂಟೆಂಟ್ ಹಾಗೂ ಹೇಳಿಕೆಗಳನ್ನು ಮ್ಯೂಟ್ ಮಾಡುವಂತೆ ಕೇಳಲಾಗಿದೆ.
ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಅಯನ್ ಮುಖರ್ಜಿ ಅವರ ವಾರ್ 2 ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್‌ಟಿಆರ್ ಜೊತೆ ನಟಿಸಿರುವ ಕಿಯಾರಾ ಅಡ್ವಾಣಿ ಅವರ ಬಿಕಿನಿ ಫೋಟೋಗಳನ್ನು ತೆಗೆದುಹಾಕಿದೆ ಎಂದು ವರದಿಯಾಗಿದೆ. ಆಡಿಯೋ ಮತ್ತು ದೃಶ್ಯ ವಿಭಾಗಗಳಲ್ಲಿ ಆರು ಕಡೆ ಅನುಚಿತ ಉಲ್ಲೇಖಗಳನ್ನು ಮ್ಯೂಟ್ ಮಾಡಲು ನಿರ್ಮಾಪಕರಿಗೆ ಸೂಚಿಸಲಾಗಿದೆ. ಅಶ್ಲೀಲ ಸಂಭಾಷಣೆಯನ್ನು ಕೂಡ ಬದಲಾಯಿಸಲಾಯಿತು. ಸೆನ್ಸಾರ್ ಮಂಡಳಿಯು ಪ್ರಮುಖವಾಗಿ 9 ಸೆಕೆಂಡುಗಳ ದೃಶ್ಯಗಳನ್ನು ತೆಗೆದುಹಾಕುವಂತೆ ನಿರ್ಮಾಪಕರಿಗೆ ನಿರ್ದೇಶನ ನೀಡಿದೆ. ಇದರಿಂದ ಕಿಯಾರಾ ಅವರ ಫ್ಯಾನ್ಸ್‌ಗೆ ಭಾರೀ ನಿರಾಸೆಯಾಗಿದೆ.
-
Dhurandhar-2: 1,000 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಬಾಲಿವುಡ್ ಸಿನಿಮಾ: ಇತಿಹಾಸ ನಿರ್ಮಿಸಿದ 'ಧುರಂಧರ್ 2' -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ











Click it and Unblock the Notifications