Darshan : ಏಳಿಗೆ ಸಹಿಸದ ಆತ್ಮೀಯರಿಗೆ ಹೇಳುವುದು ಒಂದೇ ಮಾತು...! ವಿರೋಧಿಗಳಿಗೆ ದರ್ಶನ್ ಹೇಳಿದ್ದೇನು?
ಕಾಟೇರ ಸಿನಿಮಾ ಯಶಸ್ಸಿನ ಅಲೆಯಲ್ಲಿರುವ ನಟ ದರ್ಶನ್ ತೂಗುದೀಪ ಅಭಿಮಾನಿಗಳಿಗೆ ಧನ್ಯವಾದ ಹೇಳುವ ಜೊತೆಗೆ ವಿರೋಧಿಗಳಿಗೆ ಮಾತಿನ ಏಟು ನೀಡಿದ್ದಾರೆ. ಕರ್ನಾಟಕದಲ್ಲಿ ಭರ್ಜರಿ ಗೆಲುವು ಕಂಡಿರುವ ಕಾಟೇರ ಈಗ ವಿದೇಶಗಳಲ್ಲಿ ಕೂಡ ಸದ್ದು ಮಾಡುತ್ತಿದೆ. ದುಬೈನಲ್ಲಿ ನಡೆದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಕೂಡ ಭಾಗವಹಿಸಿ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ್ದಾರೆ.
ಅಮೆರಿಕ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ದುಬೈ, ಒಮನ್ ಸೇರಿದಂತೆ ಹಲವು ದೇಶಗಳಲ್ಲಿ ಕಾಟೇರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲೂ ಕೂಡ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡಕ್ಕೆ ಸಖತ್ ಖುಷಿ ಕೊಟ್ಟಿದೆ. ಸಿನಿಮಾಗೆ ಸಿಕ್ಕ ಭರ್ಜರಿ ಗೆಲುವಿನ ಬಗ್ಗೆ ಈ ಮೊದಲು ಟ್ವೀಟ್ ಮಾಡಿ ದರ್ಶನ್ ಅಭಿಮಾನಿಗಳಿಗೆ ವಂದನೆ ಸಲ್ಲಿಸಿದ್ದರು. ವಿದೇಶದಲ್ಲಿ ಸಿಕ್ಕ ಪ್ರೀತಿ ನೋಡಿ ಮತ್ತೆ ಸೆಲೆಬ್ರಿಟಿಸ್‌ಗೆ ಅಭಿನಂದನೆ ಸಲ್ಲಿಸಿದ್ದು, ವಿರೋಧಿಗಳನ್ನು ಕೂಡ ನೆನಪಿಸಿಕೊಂಡಿದ್ದಾರೆ.

ದರ್ಶನ್ ಟ್ವೀಟ್‌ನಲ್ಲಿ ಏನಿದೆ?
"ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ" ಎಂದು ಟ್ವೀಟ್ ಮಾಡಿದ್ದು ಕುತೂಹಲ ಕೆರಳಿಸಿದೆ.
ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ… pic.twitter.com/23PvJxxea0
— Darshan Thoogudeepa (@dasadarshan) January 9, 2024
ದರ್ಶನ್ ಹಿಂಗೆ ಹೇಳಲು ಕಾರಣವೇನು?
ಕಾಟೇರ ಸಿನಿಮಾ ದರ್ಶನ್ ಸಿನಿಜೀವನದ ದೊಡ್ಡ ಗೆಲುವು ಎಂದೇ ಪರಿಗಣಿಸಲಾಗಿದೆ. ಆದರೂ ಕೆಲವರು ಸಿನಿಮಾ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಲು ಪ್ರಯತ್ನಿಸಿದ್ದರು. ಕೆಲವರು ಪೈರಸಿ ಕೂಡ ಮಾಡಿದ್ದರು. ಪೈರಸಿ ಮಾಡುವವರಿಗೆ ಬಹಿರಂಗವಾಗಿಯೇ ದರ್ಶನ್ ಎಚ್ಚರಿಕೆ ಕೊಟ್ಟಿದ್ದರು. ಈಗ ಅಂತಹವರಿಗೆ ಈ ಟ್ವೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದೆಲ್ಲದರ ನಡುವೆಯೂ ಸಿನಿಮಾ ಜನಮನ ಗೆದ್ದಿದೆ, ಹಳ್ಳಿಗಾಡಿನ ಜನ ಕೂಡ ಟ್ರಾಕ್ಟರ್ ಗಳಲ್ಲಿ ಬಂದು ಸಿನಿಮಾ ನೋಡುತ್ತಿದ್ದಾರೆ. ವಿಮರ್ಶಕರು, ಪ್ರೇಕ್ಷಕರು ಸಿನಿಮಾ ಮೆಚ್ಚಿದ್ದಾಗಿದೆ. ಎರಡನೇ ವಾರ ಕೂಡ ಕಾಟೇರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಗಳಿಕೆಯಲ್ಲೂ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ.
ಕಾಟೇರ ಸಿನಿಮಾ ಬಳಿಕ ದರ್ಶನ್ ಡೆವಿಲ್ ಎನ್ನುವ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಾದ ಬಳಿಕ ಪ್ರೇಮ್ ಜೊತೆಗಿನ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಕರಿಯ ಬಳಿಕ ಈ ಜೋಡಿ ಒಂದಾಗುತ್ತಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಲಿದೆ.












Click it and Unblock the Notifications