Darshan: ಆನಿವರ್ಸರಿ ಫೋಟೋ ಹಂಚಿಕೊಂಡ ದರ್ಶನ್ ಪತ್ನಿ: ಕರ್ಮ ರಿಟರ್ನ್ಸ್ ಸ್ಟೇಟಸ್ ಹಾಕಿದ ಪವಿತ್ರಾ ಗೌಡ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ಪವಿತ್ರಾ ಗೌಡ ನಡುವಿನ ಕೋಲ್ಡ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರ. ಇತ್ತೀಚಿಗಷ್ಟೆ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿಯೇ ಇಬ್ಬರ ನಡುವೆ ಜಟಾಪಟಿ ನಡೆದಿತ್ತು. ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರಾ ಗೌಡಗೆ ವಿಜಯಲಕ್ಷ್ಮಿ ನೇರವಾಗಿ ಎಚ್ಚರಿಕೆ ನೀಡಿ ಅವರ ವೈಯಕ್ತಿಕ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು.
ವಿಜಯಲಕ್ಷ್ಮಿ ಎಚ್ಚರಿಕೆಗೂ ಪವಿತ್ರಾ ಗೌಡ ತಿರುಗೇಟು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಇಬ್ಬರ ನಡುವೆ ಜಟಾಪಟಿ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಬಳಿಕ ಇಬ್ಬರು ಕೂಡ ತಣ್ಣಗಾಗಿದ್ದರು. ಆದರೆ ಇಬ್ಬರ ನಡುವಿನ ಕೋಲ್ಡ್ ವಾರ್ ಮುಂದುವರಿದಿದ್ದು, ಇದೀಗ ಮತ್ತೆ ವಿಜಯಲಕ್ಷ್ಮಿ ಫೋಸ್ಟ್‌ಗೆ ಪವಿತ್ರಾ ಗೌಡ ತಿರುಗೇಟು ನೀಡಿದ್ದಾರೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವದ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಪವಿತ್ರಾ ಗೌಡ ಕರ್ಮದ ಬಗ್ಗೆ ದರ್ಶನ್ ಮಾತನಾಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ದರ್ಶನ್ ಮತ್ತು ವಿಜಯಲಕ್ಷ್ಮಿ ಈಗೀಗ ಎಲ್ಲಾ ಕಡೆಗಳಲ್ಲಿಯೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತದಾನದ ವೇಳೆ ಮಗ ವಿನೀಷ್ ಕೂಡ ಮತಗಟ್ಟೆಗೆ ಬಂದ ವಿಡಿಯೋ ಎಲ್ಲಡೆ ವೈರಲ್ ಆಗಿತ್ತು. ಈ ವೇಳೆ ದರ್ಶನ್ ಮತ್ತು ವಿಜಯಲಕ್ಷ್ಮಿ ಕೂಡ ಜೊತೆಯಾಗಿ ಮತದಾನ ಮಾಡಲು ಬಂದಿದ್ದರು.
ಇದೀಗ ಜೊತೆಯಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ನಟ ದರ್ಶನ್ ತಮ್ಮ ಬಿಡುವಿಲ್ಲದ ಸಿನಿಮಾ ಕೆಲಸದ ನಡುವೆಯೂ ಸಮಯ ಮಾಡಿಕೊಂಡು ದುಬೈಗೆ ತೆರಳಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಅವರ ಜೊತೆ ವಿವಾಹ ವಾರ್ಷಿಕೋತ್ಸವನ್ನು ಅದ್ಧೂರಿಯಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ದುಬೈನಲ್ಲಿರುವ ದರ್ಶನ್ ಅಭಿಮಾನಿಗಳು ವಿವಾಹ ವಾರ್ಷಿಕೋತ್ಸವ ಸೆಲೆಬ್ರೇಷನ್ ಮಾಡಿದ್ದು, ನಟ ದರ್ಶನ್ ಪತ್ನಿ ಜೊತೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ದುಬೈನಲ್ಲಿ ನಡೆದ ವಿವಾಹ ವಾರ್ಷಿಕೋತ್ಸವದ ಫೋಟೋಗಳು ಹಾಗೂ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ. ವಿಜಯಲಕ್ಷ್ಮಿ ಕೂಡ ನಿರ್ಮಾಪಕಿ ಶೈಲಜಾ ನಾಗ್ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯ ಕೋರಿ ಹಾಕಿರುವ ಫೋಟೋದ ಸ್ಕ್ರೀನ್‌ಶಾಟ್ ಅನ್ನು ತಮ್ಮ ಸ್ಟೇಟಸ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಸೆಲೆಬ್ರಿಟಿಗಳು, ಅಭಿಮಾನಿಗಳು ಮತ್ತು ಆಪ್ತರು ಶುಭಾಶಯ ತಿಳಿಸಿದ್ದಾರೆ.
ಇನ್ನು ವಿಜಯಲಕ್ಷ್ಮೀ ಆ ಫೋಟೋ ಹಂಚಿಕೊಂಡ ಎರಡು ಗಂಟೆಯ ಅಂತದಲ್ಲಿ ಪವಿತ್ರಾ ಗೌಡ ಕರ್ಮದ ಬಗ್ಗೆ ದರ್ಶನ್ ಮಾತನಾಡಿರುವ ವಿಡಿಯೋದ ಸ್ಟೇಟಸ್ ಹಾಕಿದ್ದಾರೆ. ಶೈಲಜಾ ನಾಗ್ ನಿರ್ಮಾಣದ ಕ್ರಾಂತಿ ಸಿನಿಮಾ ಪ್ರಮೋಷನ್ ಸಮಯದಲ್ಲಿಯೇ ಕೊಟ್ಟಿದ್ದ ದರ್ಶನ್ ಸಂದರ್ಶನದ ವಿಡಿಯೋವನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದಾರೆ. ಪವಿತ್ರ ಗೌಡ ಈ ನಡೆಗೆ ದರ್ಶನ್ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications