Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್
Chandrika Dixit: 'ವಡಾ ಪಾವ್ ಗರ್ಲ್' ಎಂದೇ ಖ್ಯಾತಿ ಪಡೆದಿರುವ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್, ಬಿಗ್ ಬಾಸ್ ಸ್ಪರ್ಧಿ ಚಂದ್ರಿಕಾ ದೀಕ್ಷಿತ್ ಅವರು ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಅವರ ಮತ್ತು ಅವರ ಪತಿ ಯುಗಮ್ ನಡುವಿನ ಜಗಳ ಬೀದಿಗೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ದೀಕ್ಷಿತ್ ಮತ್ತೊಂದು ಆಘಾತಕಾರಿ ವಿಷಯವನ್ನು ಹೊರಹಾಕಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.
ಕೆಲವು ದಿನಗಳ ಹಿಂದೆ ಚಂದ್ರಿಕಾ ಅವರು ತಮ್ಮ ಪತಿ ಯುಗಮ್ ತಮಗೆ ವಂಚನೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪತಿ ಯುಗಮ್, ಚಂದ್ರಿಕಾ ಅವರ ಬಗ್ಗೆ ಕೆಲವು ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದರು. ಇಬ್ಬರಲ್ಲಿ ಯಾರು ಸತ್ಯ ಹೇಳುತ್ತಿದ್ದಾರೆ ಎಂಬುದು ಇನ್ನೂ ನಿಗೂಢವಾಗಿದೆ.

ಹೊಸ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಂದ್ರಿಕಾ ದೀಕ್ಷಿತ್
ಈಗ ಚಂದ್ರಿಕಾ ದೀಕ್ಷಿತ್ ಅವರು ಮತ್ತೊಂದು ಆಘಾತಕಾರಿ ವಿಷಯವನ್ನು ಹೊರಹಾಕಿದ್ದಾರೆ. ಆದರೆ, ಈ ಬಾರಿ ಅವರು ಪತಿಯ ಮೇಲೆ ಯಾವುದೇ ಆರೋಪ ಮಾಡಿಲ್ಲ, ಬದಲಾಗಿ ಖ್ಯಾತ ಉದ್ಯಮಿಯ ಅಸಲಿಯತ್ತನ್ನು ಬಯಲು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಖ್ಯಾತ ಉದ್ಯಮಿಯೊಬ್ಬರು ತನಗೆ ಭಾರಿ ದೊಡ್ಡ ಮೊತ್ತದ ಹಣದ ಆಮಿಷವೊಡ್ಡಿ ತನ್ನ ಜೊತೆ ಒಂದು ರಾತ್ರಿ ಕಳೆಯುವಂತೆ ಪ್ರಸ್ತಾಪ ಇಟ್ಟಿದ್ದರು ಎಂದು ಪಾಡ್‌ಕಾಸ್ಟ್‌ವೊಂದರಲ್ಲಿ ಹೇಳಿಕೊಂಡಿದ್ದಾರೆ.
ಉದ್ಯಮಿಯಿಂದ 50 ಲಕ್ಷ ರೂಪಾಯಿಯ ಆಫರ್
ಇತ್ತೀಚೆಗೆ ಸಿದ್ಧಾರ್ಥ್ ಕಣ್ಣನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಚಂದ್ರಿಕಾ ಅವರು, ಶ್ರೀಮಂತ ಉದ್ಯಮಿಯೊಬ್ಬ ತನಗೆ ನೀಡಿದ್ದ ಅಸಭ್ಯದ ಪ್ರಸ್ತಾಪದ ಬಗ್ಗೆ ವಿವರಿಸಿದ್ದಾರೆ. "ನನಗೆ ಇ-ಮೇಲ್ ಮೂಲಕ ಆಫರ್ ಬಂದಿತ್ತು. ಆತ ದೊಡ್ಡ ಉದ್ಯಮಿಯಾಗಿದ್ದು, ಅವರು ತನ್ನೊಂದಿಗೆ ಒಂದು ರಾತ್ರಿ ರೆಸಾರ್ಟ್‌ನಲ್ಲಿ ಕಳೆಯಲು 50,00,000 ಲಕ್ಷ ರೂಪಾಯಿ ನೀಡುತ್ತೇನೆ. 'ಷರತ್ತು ನಿಮ್ಮದು, ಜಾಗ ನನ್ನದು' ಎಂಬ ಪ್ರಸ್ತಾಪ ಮುಂದಿಟ್ಟಿದ್ದರು. ಇದರ ಸ್ಕ್ರೀನ್‌ಶಾಟ್ ಕೂಡ ನನ್ನ ಬಳಿ ಇದೆ," ಎಂದು ಚಂದ್ರಿಕಾ ಬಹಿರಂಗಪಡಿಸಿದ್ದಾರೆ.
ಕೇವಲ ಉದ್ಯಮಿಗಳಷ್ಟೇ ಅಲ್ಲದೆ, ಚಿತ್ರರಂಗದ ಕೆಲವು ನಿರ್ದೇಶಕರು ಮತ್ತು ನಿರ್ಮಾಪಕರು ಕೂಡ ತನಗೆ ಕರೆ ಮಾಡಿ ಇಂತಹದೇ ಆಫರ್ ನೀಡಿದ್ದರು ಎಂದು ಅವರು ಆರೋಪಿಸಿದ್ದಾರೆ. "ವೃತ್ತಿಜೀವನದಲ್ಲಿ ಬೆಳೆಯಬೇಕಾದರೆ ರಾಜಿ ಮಾಡಿಕೊಳ್ಳಲೇಬೇಕು ಎಂದು ಹಲವರು ಸಲಹೆ ನೀಡಿದ್ದರು. ಈ ಇಂಡಸ್ಟ್ರಿ ಅಷ್ಟರಮಟ್ಟಿಗೆ ಭ್ರಷ್ಟವಾಗಿದೆ," ಎಂದು ಅವರು ಕಿಡಿಕಾರಿದ್ದಾರೆ.
ಕಹಿ ನೆನಪುಗಳ ಮೆಲುಕು ಹಾಕಿದ ಚಂದ್ರಿಕಾ
ಸಂದರ್ಶನದಲ್ಲಿ ತಮ್ಮ ಕಷ್ಟದ ದಿನಗಳನ್ನು ನೆನೆದ ಚಂದ್ರಿಕಾ, ಅತ್ತೆಯ ನಡವಳಿಕೆಯ ಬಗ್ಗೆಯೂ ಮಾತನಾಡಿದ್ದಾರೆ. 15 ದಿನದ ಮಗುವನ್ನು ಶಿಶುವಿಹಾರದಲ್ಲಿ ಬಿಟ್ಟು ಹಲ್ದಿರಾಮ್ಸ್‌ನಲ್ಲಿ ದಿನಕ್ಕೆ 12-13 ಗಂಟೆ ಕೆಲಸ ಮಾಡುತ್ತಿದ್ದೆ. "ನಿನ್ನ ಸ್ವಂತ ಕಾಲ ಮೇಲೆ ನಿಂತು ತೋರಿಸು, ಆಮೇಲೆ ನಿನ್ನನ್ನು ಒಪ್ಪಿಕೊಳ್ಳುತ್ತೇನೆ" ಎಂದು ಅತ್ತೆ ಹೇಳಿದ್ದರು. ಅಂದು ಕಷ್ಟಪಟ್ಟಾಗ ಯಾರೂ ಬೆನ್ನು ತಟ್ಟಲಿಲ್ಲ, ಆದರೆ, ಇಂದು ನನ್ನ ಕೆಲಸ ಮತ್ತು ಚಾರಿತ್ರ್ಯವನ್ನು ಎಲ್ಲರೂ ಪ್ರಶ್ನಿಸುತ್ತಿದ್ದಾರೆ," ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಚಂದ್ರಿಕಾ ದೀಕ್ಷಿತ್ ಯಾರು?
ದೆಹಲಿಯ ರಸ್ತೆಯ ಬದಿಯಲ್ಲಿ ವಡಾ ಪಾವ್ ಮಾರಾಟ ಮಾಡುತ್ತಾ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಮೂಲಕ ಚಂದ್ರಿಕಾ ಗುರುತಿಸಿಕೊಂಡಿದ್ದರು. ನಂತರ ಅವರು ಹಿಂದಿಯ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಒಟಿಟಿ'ನಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಸದ್ಯ 50 ಲಕ್ಷದ ಆಫರ್ ವಿಚಾರದ ಜೊತೆಗೆ, ಮಕ್ಕಳ ಭವಿಷ್ಯಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ಧ ಎಂಬ ಅವರ ಇತ್ತೀಚಿನ ಹೇಳಿಕೆಗಳು ಕೂಡ ಭಾರೀ ಚರ್ಚೆಗೆ ಕಾರಣವಾಗಿವೆ.
ಒಟ್ಟಿನಲ್ಲಿ ಹೇಳುವುದಾದರೆ, ಸದಾ ವಿವಾದಗಳ ಕೇಂದ್ರಬಿಂದುವಾಗಿರುವ ಚಂದ್ರಿಕಾ ಅವರ ಈ ಹೇಳಿಕೆ ಈಗ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹಲವರು ಅವರ ಧೈರ್ಯವನ್ನು ಮೆಚ್ಚಿದ್ದರೆ, ಇನ್ನು ಕೆಲವರು ಇದು ಕೇವಲ ಪ್ರಚಾರಕ್ಕಾಗಿ ಮಾಡುತ್ತಿರುವ ಗಿಮಿಕ್ ಎಂದು ಟೀಕಿಸುತ್ತಿದ್ದಾರೆ.
-
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು












Click it and Unblock the Notifications