Kangana Ranaut: ಚಂಡೀಗಢ ಏರ್‌ಪೋರ್ಟ್‌ನಲ್ಲಿ ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ!
ಚಂಡೀಗಢ, ಜೂನ್. 06: ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಅಧಿಕಾರಿಯೊಬ್ಬರು ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಸುದ್ದಿ ಬಂದಿದೆ. ಬಾಲಿವುಡ್ ನಟಿ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿರುವ ಕಂಗನಾ ರನೌತ್ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.
ಕಂಗನಾ ರನೌತ್ ಪ್ರಕಾರ, ಯುಕೆ 707 ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲು ವಿಮಾನ ನಿಲ್ದಾಣದಲ್ಲಿ ಬೋರ್ಡಿಂಗ್ ಪಾಯಿಂಟ್‌ಗೆ ತೆರಳುತ್ತಿದ್ದಾಗ, ಸಿಐಎಸ್‌ಎಫ್ ಅಧಿಕಾರಿ ಕುಲ್ವಿಂದರ್ ಕೌರ್ ಅವರೊಂದಿಗೆ ಜಗಳವಾಡಿದ್ದಾರೆ. ಜೊತೆಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ದೂರಿದ್ದಾರೆ.

ಅಲ್ಲಿಂದ ದೆಹಲಿಗೆ ಆಗಮಿಸಿದ ನಂತರ, ಕಂಗನಾ ರನೌತ್ ಅವರು ಸಿಐಎಸ್ಎಫ್ ಮಹಾನಿರ್ದೇಶಕ ನೀನಾ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ, ಘಟನೆಯನ್ನು ಅವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ. ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗಾಗಿ ಸಿಐಎಸ್‌ಎಫ್ ಕಮಾಂಡೆಂಟ್ ಕಚೇರಿಗೆ ಕರೆದೊಯ್ಯಲಾಗಿದೆ.
This is Kulwinder Kaur, the CISF officer posted at Chandigarh airport who slapped actor and BJP MP #KanganaRanaut today. pic.twitter.com/fTiQzwrf3x
— هارون خان (@iamharunkhan) June 6, 2024
ಈ ವಿಡಿಯೋ ಸಾಮಾಜಿಕ ಜಾಲತಾಗಳಲ್ಲಿ ಸಕತ್ ವೈರಲ್ ಆಗಿದೆ. ಕರಾಳ ಕೃಷಿ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿದ್ದ ವೇಳೆ ರೈತರನ್ನು ಖಲಿಸ್ತಾನಿ ಎಂದು ಕರೆದಿದ್ದಕ್ಕಾಗಿ ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಮಹಿಳೆ ಕುಲ್ವಿಂದರ್ ಕೌರ್ ಅವರು ನೂತನ ಸಂಸದರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಹಲವು ಮಂದಿ ಹೇಳಿದ್ದಾರೆ.
ಘಟನೆ ಬಗ್ಗೆ ನಟಿ ಕಂಗನಾ ಪ್ರತಿಕ್ರಿಯೆ ಏನು?
ಘಟನೆ ಬಳಿಕ ವಿಡಿಯೋ ಮಾಡಿದ್ದ ನಟಿ ಕಂಗನಾ ರನೌತ್, "ನನಗೆ ಮಾಧ್ಯಮಗಳು ಮತ್ತು ನನ್ನ ಹಿತೈಷಿಗಳಿಂದ ಸಾಕಷ್ಟು ಫೋನ್ ಕರೆಗಳು ಬರುತ್ತಿವೆ. ಮೊದಲನೆಯದಾಗಿ, ನಾನು ಸುರಕ್ಷಿತವಾಗಿದ್ದೇನೆ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಈ ಘಟನೆ ನಡೆದಿದೆ. ಸೆಕ್ಯುರಿಟಿ ಚೆಕ್ ಮುಗಿಸಿ ನಾನು ಹೊರಗೆ ಬಂದ ಕ್ಷಣದಲ್ಲಿ ಮತ್ತೊಂದು ಕ್ಯಾಬಿನ್‌ನಲ್ಲಿದ್ದ ಭದ್ರತಾ ಸಿಬ್ಬಂದಿ ನನ್ನ ಕಡೆ ಬಂದು ನನ್ನ ಕೆನ್ನೆಗೆ ಹೊಡೆದು ನಿಂದಿಸಲು ಪ್ರಾರಂಭಿಸಿದರು" ಎಂದಿದ್ದಾರೆ.
"ನಾನು ಅವರನ್ನು (ಸಿಐಎಸ್ಎಫ್ ಜವಾನ್) ಏಕೆ ಹೀಗೆ ಮಾಡಿದೆ ಎಂದು ಕೇಳಿದಾಗ, ಅವರು ರೈತರ ಪ್ರತಿಭಟನೆಯನ್ನು ಬೆಂಬಲಿಸುವುದಾಗಿ ಹೇಳಿದರು. ನಾನು ಸುರಕ್ಷಿತವಾಗಿದ್ದೇನೆ. ಆದರೆ, ನನ್ನ ಕಳವಳ ಏನೆಂದರೆ ಪಂಜಾಬ್‌ನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಮತ್ತು ಉಗ್ರವಾದವನ್ನು ನಾವು ಅದನ್ನು ಹೇಗೆ ನಿಭಾಯಿಸುತ್ತೇವೆ..? ಎಂಬುದು" ಎಂದು ಹೇಳಿದ್ದಾರೆ.
ಕೆಲವೇ ನಿಮಿಷಗಳಲ್ಲಿ, ಮತ್ತೊಂದು ವೀಡಿಯೊ ವೈರಲ್ ಆಯಿತು. ಅದರಲ್ಲಿ ಕಂಗನಾ ಕೆನ್ನೆಗೆ ಹೊಡೆದ ಸಿಐಎಸ್ಎಫ್ ಸಿಬ್ಬಂದಿ, "ಇವರು ಪ್ರತಿಭಟನೆ ಮಾಡುತ್ತಿರುವ ಮಹಿಳಾ ರೈತರು ತಲಾ 100 ರೂ.ಗಾಗಿ ರೈತರ ಪ್ರತಿಭಟನೆಗೆ ಕುಳಿತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅಲ್ಲಿ ಇದ್ದ ರೈತ ಮಹಿಳೆಯರಲ್ಲಿನನ್ನ ತಾಯಿ ಕೂಡ ಕುಳಿತಿದ್ದರು. ನನ್ನ ತಾಯಿಗೆ ಆದ ಅವಮಾನವನ್ನು ಸಹಿಸಲಾಗಲಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು, ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ 74,755 ಮತಗಳ ಅಂತರದಿಂದ ರಾಂಪುರ ರಾಜ್ಯದ ವಂಶಸ್ಥರು ಮತ್ತು ಪ್ರಸ್ತುತ ರಾಜ್ಯ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರನ್ನು ಸೋಲಿಸಿದ್ದಾರೆ. ಕಂಗನಾ ರನೌತ್ ಹಿಮಾಚಲ ಪ್ರದೇಶದಿಂದ ಲೋಕಸಭೆಗೆ ಚುನಾಯಿತರಾದ ನಾಲ್ಕನೇ ಮಹಿಳೆ ಮತ್ತು ರಾಜಮನೆತನ ಬಿಟ್ಟು ಆಯ್ಕೆಯಾದ ಮೊದಲ ಮಹಿಳೆಯಾಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications