‘ಕಪ್ಪೆರಾಗ’ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!
ಕರ್ನಾಟಕ ಬಂದ್ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಷಯ ಒಂದನ್ನ ಇಂದು ಕನ್ನಡಿಗರಿಗೆ ತಿಳಿಸಿದ್ದಾರೆ. ಅದರಲ್ಲೂ ಕನ್ನಡ ನಾಡಿಗೆ ಸಂಬಂಧಿಸಿದ ವಿಚಾರದಲ್ಲಿ ಶ್ರಮವಹಿಸಿ, ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕನ್ನಡಿಗರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಸಿಎಂ ಸಿದ್ದರಾಮಯ್ಯ. ಹಾಗಾದರೆ ಸಿಎಂ ವಿಶ್ ಮಾಡಿದ್ದು ಯಾವ ವಿಚಾರಕ್ಕೆ? ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಅಷ್ಟಕ್ಕೂ ಕರ್ನಾಟಕ ಮೂಲದ ತಂಡ ಒಂದು ವಿಶಿಷ್ಟ ಸಾಧನೆ ಮಾಡಿದೆ. ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ಪಡೆಯುವಲ್ಲಿ ಕನ್ನಡಿಗರು ಈಗ ಯಶಸ್ವಿಯಾಗಿದ್ದಾರೆ. ಈ ವಿಚಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗಾದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು? ಈ ಸಂಭ್ರಮವನ್ನು ಸಿಎಂ ಹೇಗೆ ಹಂಚಿಕೊಂಡರು ಗೊತ್ತಾ? ಕನ್ನಡಿಗರು ಪಡೆದ ಪ್ರಶಸ್ತಿಯ ಸಂಪೂರ್ಣ ವಿವರ ಇಲ್ಲಿದೆ.

ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು..
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸ್ಪೆಷಲ್ ಪೋಸ್ಟ್ ಹಾಕಿದ ಸಿಎಂ ಸಿದ್ದರಾಮಯ್ಯ ವಿಶೇಷ ಸಾಧನೆ ಮಾಡಿದ ಕನ್ನಡಿಗರಿಗೆ ವಿಶ್ ಮಾಡಿದ್ದು, 'ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್‌ಗೆ ಭಾಜನವಾಗಿರುವ ಕನ್ನಡದ ಮೊದಲ 'ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ' ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು. ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ.' ಎಂದಿದ್ದಾರೆ.
ಹಾಗೇ ತಮ್ಮ ಪೋಸ್ಟ್‌ನಲ್ಲಿ ಮಾತು ಮುಂದುವರಿಸಿ, 'ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ.' ಎಂದು ಈ ಸಂಭ್ರಮದ ಸುದ್ದಿಯನ್ನ ಹಂಚಿಕೊಂಡಿದ್ದಾರೆ ಸಿಎಂ ಸಿದ್ದರಾಮಯ್ಯ. ಈ ಮೂಲಕ ಕನ್ನಡ ನಾಡಿಗೆ ಹೆಮ್ಮೆ ತಂದ ಸಾಧಕರನ್ನು ಕರ್ನಾಟಕದ ಸಿಎಂ ಅಭಿನಂದಿಸಿದ್ದಾರೆ.












Click it and Unblock the Notifications