Rakesh Poojary Death: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ' ನಿಧನ
ಬೆಂಗಳೂರು, ಮೇ 12: ಎಲ್ಲಾರನ್ನು ಯಾವಾಗಲೂ ನಕ್ಕು ನಗಿಸುತ್ತಾ ಇದ್ದವರು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾದರು ಎಂದು ವರದಿಯಾಗಿದೆ. ತುಂಬಾ ಕಷ್ಟದ ಜೀವನ ನೋಡಿ, ನಂತರ ಹಾಸ್ಯದ ಮೂಲಕ ಎಲ್ಲರ ಮನ ಗೆದ್ದರು. ತುಂಬಾ ಅವಮಾನಗಳನ್ನು ಮೆಟ್ಟಿ ನಿಂತರು. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನ ಗಳಿಸಿದ್ದರು.
ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇದ್ದರು. ಆದರೆ, 'ಕಾಮಿಡಿ ಕಿಲಾಡಿಗಳು' ವೇದಿಕೆ ಅವರ ಬದುಕನ್ನು ಬದಲಿಸಿತು. 'ಕಾಮಿಡಿ ಕಿಲಾಡಿಗಳು' ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಾಮಿಡಿ ಕಿಲಾಡಿಗಳು ವಿನ್ನರ್ ಆಗ್ಬೇಕು ಎಂಬ ಕನಸು ಕಂಡಿದ್ದ ರಾಕೇಶ್ ಪೂಜಾರಿ ಅವರು ಬಹುದಿನ ಕನಸು ನನಸಾಗಿದೆ ಎಂದು ಬರೆದುಕೊಂಡಿದ್ದರು.

ಕಷ್ಟ ಪಟ್ಟು, ತುಂಬಾ ಅವಮಾನಗಳನ್ನು ಮೆಟ್ಟಿ ನಿಂತು ಉತ್ತಮ ಬದುಕು ಕಟ್ಟಿಕೊಂಡಿದ್ದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ ಹೊಂದಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಈ ಸುದ್ದಿ ನಂಬಲು ಅಸಾಧ್ಯ ಎನಿಸಿದರೂ ಸತ್ಯವೇ. ಆರೋಗ್ಯವಾಗಿದ್ದ ನಟ ರಾಕೇಶ್ ಪೂಜಾರಿ ಅವರು ಬಾಳಿ ಬದುಕ ಬೇಕಿದ್ದ ಅವರು ಕೊನೆಯುಸಿರು ಎಳೆದಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ ಎಂದು ಸದ್ಯ ತಿಳಿದು ಬಂದಿದ್ದು, ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ. ರಾಕೇಶ್ ಪೂಜಾರಿ ಅವರ ಸಾವಿಗೆ ಅಭಿಮಾನಿಗಳು ಹಾಗೂ ಆಪ್ತರು ಕಂಬನಿ ಮಿಡಿಯುತ್ತಿದ್ದಾರೆ.
ರಾಕೇಶ್ ಅವರು ತಮ್ಮ ನಟನಾ ಪಯಣವನ್ನು ಚೈತನ್ಯ ಕಲಾವಿದರು ನಾಟಕ ತಂಡದಿಂದ ಆರಂಭಿಸಿದ್ದು, 20214 ರಲ್ಲಿ ಖಾಸಗಿ ಚಾನೆಲ್ ನಲ್ಲಿ ಕಡ್ಲೆ ಬಜಿಲ್ ಎಂಬ ತುಳು ರಿಯಾಲಿಟಿ ಶೋ ಮೂಲ ಅನೇಕ ಜನರ ಮನ ಗೆದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದ್ದರು. ಸುಮಾರು 150 ಆಡಿಪನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ಕಾಮಿಡಿ ಕಿಲಾಡಿಗಳು ಸೀಸನ್ 2 ಶೋ ಗೆ ರನ್ನರ್ ಆಪ್ ಆಗಿದ್ದು, ಕಾಮಿಕಿ ಕಿಲಾಡಿಗಳು ಸೀಸನ್ 3 ವಿಜೇತರಾಗಿದ್ದರು.
-
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್ -
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications