ರಮೇಶ್ ಅರವಿಂದ್, ಅನುಶ್ರೀ ಸೇರಿ ಹಲವರ ವಿರುದ್ಧ ದೂರು: ಕಾರಣ ಇಲ್ಲಿದೆ!
ಬೆಂಗಳೂರು, ಏಪ್ರಿಲ್ 29: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ರಿಯಾಲಿಟಿ ಶೋವೊಂದರ ವಿರುದ್ಧ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರ ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ಸ್ಪರ್ಧಿ, ನಿರೂಪಕಿ ಅನುಶ್ರೀ ಹಾಗೂ ಇತರರ ವಿರುದ್ಧ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿಗೆ ಆರಂಭವಾದ ಈ ರಿಯಾಲಿಟಿ ಶೋ ತನ್ನ ವಿಶೇಷತೆಗಳಿಂದ ಪ್ರೇಕ್ಷಕರ ಮನಗೆದ್ದಿದ್ದು, ಟಿಆರ್‌ಪಿಯಲ್ಲೂ ಉತ್ತಮ ಸ್ಥಾನ ಪಡೆದುಕೊಂಡು ಮುನ್ನುಗ್ಗುತ್ತಿದೆ. ಪ್ರತಿ ವೀಕೆಂಡ್‌ನಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಈ ಬಾರಿ ಫ್ಯಾಮಿಲಿ ರೌಂಡ್ ಆಯೋಜನೆ ಮಾಡಲಾಗಿತ್ತು. ಸ್ಪರ್ಧಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ನಟಿಸಬೇಕಿತ್ತು. ಈ ವಾರಾಂತ್ಯ ಪ್ರಸಾರವಾದ ಈ ಸಂಚಿಕೆ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಸ್ಪರ್ಧಿಯೊಬ್ಬರು ಬಳಸಿದ ಒಂದು ಪದದಿಂದ ಶ್ರಮಿಕರಿಗೆ ನೋವಾಗಿದೆ.
ಈ ರಿಯಾಲಿಟಿ ಶೋ ಸ್ಪರ್ಧಿಯೊಬ್ಬರು ದೃಶ್ಯವೊಂದರ ನಟನೆಯಲ್ಲಿ 'ಮ್ಯಾಕನಿಕ್‌ನನ್ನು ಮದುವೆಯಾದರೆ ಗ್ರೀಸ್ ತಿಂದುಕೊಂಡು ಬದುಕಲಾಗದು...' ಎಂಬ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ. ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್ ಸಮುದಾಯಕ್ಕೆ ನೋವಾಗಿದೆ. ಮೆಕ್ಯಾನಿಕ್ ಸಮುದಾಯ ಶ್ರಮಪಟ್ಟು ಕೆಲಸ ಮಾಡುತ್ತಾರೆ. ಹಗಲಿರುಳು ಬೆವರು ಸುರಿಸಿ ದುಡಿಯುತ್ತಾರೆ. ಹೀಗಾಗಿ ಶ್ರಮಿಕ ವರ್ಗದ ದುಡಿಮೆಯ ಬಗ್ಗೆ, ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ, ಕುಹಕದ ಮತ್ತು ನಿಂದನಾತ್ಮಕ ಮಾತುಗಳು ಸರಿಯಲ್ಲ.
ಈ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರ ವಾಹನ ವರ್ಕ್ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ರಿಯಾಲಿಟಿ ಶೋನ ಸ್ಪರ್ಧಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡಿದ ನಿರೂಪಕಿ, ನಿರ್ದೇಶಕರು, ನಿರ್ಮಾಪಕರು, ತೀರ್ಪುಗಾರರು ಹಾಗೂ ವಾಹಿನಿಯ ವಿರುದ್ಧ ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದೂರು ದಾಖಲಿಸಿದ್ದಾರೆ. ಶ್ರಮಿಕರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಪಟ್ಟಣದ ಠಾಣೆಯ ಮೂಲಕ ದೂರು ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
-
SSLC: ಹಿಂದಿ ಪರೀಕ್ಷೆಯಲ್ಲಿ ಅಂಕ ಲೆಕ್ಕಕ್ಕೆ ಇಲ್ಲ: ವಿದ್ಯಾರ್ಥಿಗಳ ಹೊರೆ ಇಳಿಕೆ, ಸರ್ಕಾರದ ನಿರ್ಧಾರಕ್ಕೆ ಬೆಂಬಲ ಕೊಟ್ಟ ಕರವೇ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications