ರಾಜಧಾನಿ ಬೆಂಗಳೂರಿನಲ್ಲಿ ‘ಸಂವಿಧಾನ ಜಾಗೃತಿ ಜಾಥ’
ಬೆಂಗಳೂರು: ಗಣರಾಜ್ಯೋತ್ಸವ ಸಂಭ್ರಮಕ್ಕೆ ಇನ್ನೇನು ಒಂದೇ ಒಂದು ದಿನ ಬಾಕಿ ಇದ್ದು, ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಲ್ಲೂ ಕನ್ನಡಿಗರ ರಾಜಧಾನಿ ಬೆಂಗಳೂರು ಇದೀಗ 75ನೇ ಗಣರಾಜ್ಯೋತ್ಸವಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ವೇಳೆ ಹಲವು ಪ್ರಮುಖ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದ್ದು, ಇದೇ ರೀತಿ 'ಸಂವಿಧಾನ ಜಾಗೃತಿ ಜಾಥ'ವೂ ನಡೆಯಲಿದೆ.
ಭಾರತ ಸಂವಿಧಾನ ಅಂಗೀಕರಿಸಿ 75ನೇ ವರ್ಷದ ಆಚರಣೆಯ ಪ್ರಯುಕ್ತ "ಸಂವಿಧಾನ ಜಾಗೃತಿ ಜಾಥ" ಕಾರ್ಯಕ್ರಮ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಸಂವಿಧಾನ ಪೀಠಿಕೆ ಸ್ಥಬ್ಧ ಚಿತ್ರದ ಮೆರವಣಿಗೆ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಜನವರಿ 26 2024 ರಿಂದ ಫೆಬ್ರವರಿ 23 2024 ರವರೆಗೆ ಸಂಚರಿಸಲಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಅಸ್ಪೃಶ್ಯತೆ ನಿವಾರಣೆ ಬಗ್ಗೆ ಅರಿವು
ಮತ್ತೊಂದು ಕಡೆ ಅಸ್ಪೃಶ್ಯತೆ ನಿವಾರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ "ಸಮಾನತೆಯ ಕಡೆಗೆ" ಎಂಬ ಕನ್ನಡ ಚಲನಚಿತ್ರವನ್ನ ಜನವರಿ 26 ರಂದು ಗಣರಾಜ್ಯೋತ್ಸವ ದಿನ ಚಂದನ ವಾಹಿನಿಯಲ್ಲಿ ಮಧ್ಯಾಹ್ನ 2.30 ರಿಂದ 4.30ರ ತನಕ ಪ್ರಸಾರ ಮಾಡಲಾಗುವುದು. ಇದೀಗ ಈ ಬಗ್ಗೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಮತ್ತೊಂದು ಕಡೆ ಬೆಂಗಳೂರಿನಲ್ಲಿ, ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಜನವರಿ 26 ರಂದು ಬೆಳಗ್ಗೆ 8.58 ಕ್ಕೆ ರಾಜ್ಯಪಾಲರು ಮೈದಾನದಕ್ಕೆ ಆಗಮಿಸಲಿದ್ದು, 9 ಗಂಟೆ ವೇಳೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣ ಬಳಿಕ ಮಾನ್ಯ ರಾಜ್ಯಪಾಲರು ತೆರೆದ ಜೀಪಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಾಡಿನ ಜನತೆಗೆ ಗಣರಾಜ್ಯೋತ್ಸವ ಸಂದೇಶವನ್ನ ಆ ನಂತರ ನೀಡಲಿದ್ದಾರೆ. ಪಂಥ ಸಂಚಲನದಲ್ಲಿ ಪೊಲೀಸ್ & ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೇ ವಿವಿಧ ಶಾಲೆಗಳ ಮಕ್ಕಳನ್ನ ಒಳಗೊಂಡಂತೆ ಕವಾಯತು, ಬ್ಯಾಂಡ್‌ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಜನ ಭಾಗವಹಿಸಲಿದ್ದಾರೆ.
ರಾಜಧಾನಿ ಬೆಂಗಳೂರಿಗೆ ಭಾರಿ ಭದ್ರತೆ
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಯಾವುದೆ ರೀತಿ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲ ವಿಭಾಗದಿಂದ 9 ಡಿಸಿಪಿ, 16 ಎಸಿಪಿ, 46 ಪಿಐ, 109 ಪಿಎಸ್ಐ, 77 ಎಎಸ್‌ಐ, 594 ಎಚ್‌ಸಿ/ಪಿಸಿ, 87 ಮಹಿಳಾ ಸಿಬ್ಬಂದಿ ಜೊತೆ 184 ಸಾದಾ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿ, 56 ಕ್ಯಾಮರಾ ಸಿಬ್ಬಂದಿಯ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಸಂಚಾರ ನಿರ್ವಹಣೆಗೆ 04 ಡಿಸಿಪಿ, 06 ಎಸಿಪಿ, 21 ಪಿಐ, 33 ಪಿಎಸ್ ಐ & 97-ಎಎಸ್‌ಐ & 414 ಎಚ್‌ಸಿ/ಪಿಸಿ ಒಟ್ಟಾರೆ 575 ಅಧಿಕಾರಿ ಹಾಗೂ ಸಿಬ್ಬಂದಿ ಬಂದೋಬಸ್ತ್ ಕರ್ತವ್ಯಕ್ಕೋಸ್ಕರ ನಿಯೋಜಿಸಲಾಗಿದೆ. ಮೈದಾನ ಬಂದೋಬಸ್ತ್ ಕರ್ತವ್ಯಕ್ಕಾಗಿ 10 ಕೆಎಸ್‌ಆರ್‌ಪಿ / ಸಿಎಆರ್ ತುಕಡಿ, 2 ಅಗ್ನಿ ಶಾಮಕ ವಾಹನಗಳು, 2 ಅಂಬುಲೆನ್ಸ್, 4- ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ ಸ್ವಾಟ್, 1 ಆರ್‌ಐಪಿ ಭದ್ರತೆಗೆ ನಿಯೋಜಿಸಲಾಗಿದೆ. ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗೆ 100 ಸಿಸಿ ಕ್ಯಾಮೆರಾ ವ್ಯವಸ್ಥೆ ಮತ್ತೆ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ, 40 ಎಚ್‌ಎಚ್‌ಎಂಡಿ ಅಳವಡಿಸಲಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications