ಕಾಪಿರೈಟ್ ಕೇಸ್: ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋದ ಸ್ಪಷ್ಟನೆ ಏನು?
Rakshit Shetty: "ಬ್ಯಾಚುಲರ್ ಪಾರ್ಟಿ" ಸಿನಿಮಾದಲ್ಲಿ 2 ಹಾಡುಗಳನ್ನು ಅನುಮತಿಯಿಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಇದಕ್ಕೆ ಇದೀಗ ರಕ್ಷಿತ್ ಶೆಟ್ಟಿ ಅವರ ಒಡೆತನದ ಪರಂವಃ ಸ್ಟುಡಿಯೋಸ್ ಸಂಸ್ಥೆಯು ಪ್ರತಿಕ್ರಿಯೆ ನೀಡಿದೆ.
ರಕ್ಷಿತ್ ಶೆಟ್ಟಿ ಒಡೆತನದ "ಪರಂವಾ ಸ್ಟುಡಿಯೋಸ್" ನಿರ್ಮಾಣ ಮಾಡಿದ ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ 2 ಹಾಡುಗಳನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಇದೀಗ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯು ಪ್ರಕರಣ ದಾಖಲಿಸಿದೆ. ಇದಕ್ಕೆ ಸಂಬಂಧ ಪರಂವಾ ಸ್ಟುಡಿಯೋಸ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದ್ದು, ಇದನ್ನು ಕೋರ್ಟ್‌ನಲ್ಲೇ ಬಗೆಹರಿಸಿಕೊಳ್ಳು ರಕ್ಷಿತ್ ಶೆಟ್ಟಿ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.

ಪರಂವಾ ಸ್ಟುಡಿಯೋಸ್ ತನ್ನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿವರವಾಗಿ ಸ್ಪಷ್ಟನೆ ಪ್ರಕಟಿಸಿದೆ. ಪ್ರೀತಿಯ ಪ್ರೇಕ್ಷಕರೇ ಹಾಗೂ ಮಾಧ್ಯಮ ಮಿತ್ರರೇ, ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ 2 ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ.
ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆ ಆಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು, ಹಾಗೂ ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರಲು ಎಂದು ಪತ್ರ ಆರಂಭಿಸಲಾಗಿದೆ.
Sincerely, Paramvah Studios🤗#ParamvahStudios pic.twitter.com/kPUoFqAfss
— Paramvah Studios (@ParamvahStudios) July 15, 2024
ಬಳಕೆಯ ವಿವರ
1. ತರಗತಿಯೊಂದಲ್ಲಿ ಶಾಲಾಬಾಲಕಿ 'ಒಮ್ಮೆ ನಿನ್ನನ್ನು..' ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು.
2. ಮನೆಯ ಟಿವಿಯಲ್ಲಿ 'ನ್ಯಾಯ ಎಲ್ಲಿದೆ..' ಹಾಡಿನ ಪ್ರಸಾರಣೆ.
ಈ ಹಿಂದೆ ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮಾ ತೆರೆ ಕಾಣುವುದಕ್ಕೂ ಮುನ್ನ ನಾವು ಎಂಆರ್‌ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಸಂಸ್ಥೆ ಶುಲ್ಕದ ಬಗ್ಗೆ ಮರುಮಾತುಕತೆಗೆ ತಯಾರಿರರಿಲ್ಲ. ಇದೀಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ಐಆರ್ ದಾಖಲಾಗಿದೆ ಎಂದು ಬರೆಯಲಾಗಿದೆ.
ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತೆರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂಆರ್‌ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು? ಇದೊಂದು ಯಕ್ಷ ಪ್ರಶ್ನೆ. ಇದಕ್ಕೆ ಉತ್ತರ ನಾವು ಹುಡುಕಬಯಸುತ್ತೇವೆ ಎಂದಿದೆ ಪರಂವಾ ಸ್ಟುಡಿಯೋಸ್.
ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ ಎಂದು ಪರಂವಾ ಸ್ಟಡಿಯೋಸ್ ಎಂದು ಬಹಿರಂಗ ಪತ್ರದಲ್ಲಿ ತಿಳಿಸಿದೆ.












Click it and Unblock the Notifications