ದರ್ಶನ್ ಬಂಧನ ಪ್ರಕರಣ: ಮಹತ್ವದ ಸಿಸಿಟಿವಿ ದೃಶ್ಯಾವಳಿ ಲಭ್ಯ
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಈಗ ಪೊಲೀಸರ ವಶದಲ್ಲಿದ್ದಾರೆ. ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಕಲೆಹಾಕುತ್ತಿದ್ದಾರೆ.
ಈಗ ಘಟನೆಗೆ ಸಂಬಂಧಪಟ್ಟಂತೆ ಮಹತ್ವದ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿವೆ. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್‌ಗೆ ಥಾರ್ ಜೀಪು ತೆರಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿತ್ತು, ಈಗ ಅದೇ ಶೆಡ್‌ಗೆ ದರ್ಶನ್ ಹೋಗಿದ್ದರು ಎನ್ನುವುದಕ್ಕೆ ಈ ದೃಶ್ಯಗಳು ಸಾಕ್ಷಿ ಒದಗಿಸಿವೆ ಎನ್ನಲಾಗುತ್ತಿದೆ. ಥಾರ್ ಜೀಪಿನ ಜೊತೆ ಮತ್ತೊಂದು ವಾಹನ ಕೂಡ ಹೋಗುವುದನ್ನು ದೃಶ್ಯಾವಳಿಗಳಲ್ಲಿ ನೋಡಬಹುದು.
ದರ್ಶನ್ ಪ್ರಕರಣದಲ್ಲಿ ಮಹತ್ವದ ಸಿಸಿಟಿವಿ ದೃಶ್ಯಾವಳಿಗಳು ಲಭ್ಯ. pic.twitter.com/lhqbsbfd3e
— Naveen Navi (@IamNavinaveen) June 11, 2024
ಜೂನ್ 6ನೇ ತಾರೀಕು ಮುಂಜಾನೆ 3 ಗಂಟೆ 27 ನಿಮಿಷ 11ನೇ ಸೆಕೆಂಡ್‌ನಲ್ಲಿ ದರ್ಶನ್ ಅವರಿಗೆ ಸೇರಿದೆ ಎನ್ನಲಾದ ಜೀಪು ಹೋಗುವುದನ್ನು ನೋಡಬಹುದಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 13 ಜನರನ್ನು ಬಂಧಿಸಲಾಗಿದೆ. ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರನ್ನು ಕೂಡ ಪೊಲೀಸರುವ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಪವಿತ್ರಾ ಗೌಡ ಅವರಿಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಕ್ಕೆ ಕೋಪಗೊಂಡು ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸರು ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದ್ದಾರೆ.












Click it and Unblock the Notifications