Vijayalakshmi Darshan: ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್​ನ ಅನ್​ಫಾಲೋ ಮಾಡಿದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು, ಜೂನ್‌ 12: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಜೈಲು ಸೇರಿದ್ದು, ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ವಿಚಾರವಾಗಿ ದರ್ಶನ್‌ ಪತ್ನಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ದರ್ಶನ ಹಾಗೂ ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಬೇಸಕವಿದ್ದು, ಕೆಲ ತಿಂಗಳ ಹಿಂದೆಯಷ್ಟೇ ವಿಜಯಲಕ್ಷ್ಮೀ ಅವರು ಪವಿತ್ರಗೌಡ ಅವರಿಗೆ ಸಂಬಂಧಿಸಿದ ಫೋಟೋಗಳನ್ನ ತಮ್ಮ ಇನ್‌ ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡುವ ಮೂಲಕ ಎಚ್ಚರಿಕೆ ನೀಡಿದ್ರು. ಇದೀಗ ಪವಿತ್ರಾಗಾಗಿ ದರ್ಶನ್ ಅವರು ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಕಷ್ಟು ಶಾಕಿಂಗ್ ಎನಿಸಿದೆ.

Darshan Arrest Vijayalakshmi Darshan Unfollow Darshan On Instagram

ಪತಿ ದರ್ಶನ್‌ ಮೇಲಿನ ಬೇಸರದಿಂದಾಗಿ ವಿಜಯಲಕ್ಷ್ಮಿ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ದರ್ಶನ್​ನ ಅನ್​ಫಾಲೋ ಮಾಡಿದ್ದಾರೆ. ಇನ್​ಸ್ಟಾಗ್ರಾಮ್ ಪ್ರಾಫೈಲ್‌ ಪಿಕ್ಚರ್‌ ರನ್ನು ಡಿಲೀಟ್‌ ಮಾಡಿದ್ದು, ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ರೇಣುಕಾ ಸ್ವಮಿ ಕೊಲೆ ಕೇಸ್‌ ನಲ್ಲಿ ದರ್ಶನ್ ಜೈಲು ಸೇರಿದ್ದಾರೆ.ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ದರ್ಶನ್‌ ಜೈಲು ಸೇರಿದ ಬಳಿಕ ವಿಜಯ ಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇನ್ನೂ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್​ಸ್ಟಾಗ್ರಾಮ್​ ಪ್ರಾಫೈಲ್​ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನ ಸೇರಿದಂತೆ ಅವರ ಸ್ನೇಹಿತರನ್ನು ಅನ್​ಫಾಲೋ ಮಾಡಿದ್ದಾರೆ.

ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. '10 ವರ್ಷಗಳ ಸಂಬಂಧ' ಎಂದು ಟ್ಯಾಗ್​ಲೈನ್ ನೀಡಿದ್ದರು. ಈ ಪೋಸ್ಟ್‌ ಗೆ ತಿರುಗೇಟು ನೀಡಿದ್ದ ವಿಜಯಲಕ್ಷ್ಮಿ ಅವರು, ಪವಿತ್ರಗೌಡ ಹಾಗೂ ಅವರ ಮಾಜಿ ಗಂಡನ ಜೊತೆಗಿರುವ ಫೋಟೋಗಳನ್ನ ಪೋಸ್ಟ್‌ ಮಾಡಿದ್ದರು. ಈ ವಿಚಾರದಲ್ಲಿಯೇ ಇಬ್ಬರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ ವಾರ್ ನಡೆದಿತ್ತು. ಆ ಬಳಿಕ ಎಲ್ಲವೂ ಸೈಲೆಂಟ್ ಆಗಿತ್ತು. ಇದೀಗ ದರ್ಶನ್ ಅವರು ಪವಿತ್ರಾಗಾಗಿ ಕೊಲೆ ಮಾಡಿದರು ಎನ್ನುವ ಆರೋಪ ಹೊತ್ತಿರೋದು ವಿಜಯಲಕ್ಷ್ಮಿ ಅವರಿಗೆ ಬೇಸರ ಮೂಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+