ದರ್ಶನ್ ನಿಜ ಜೀವನದ ಖಳನಾಯಕ: ಇಂತಹವನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂದ ಚೇತನ್ ಅಹಿಂಸಾ
Darshan Case: ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಮೂಲಗಳ ಪ್ರಕಾರ ಎ2 ಆರೋಪಿಯಾಗಿರುವ ನಟ ದರ್ಶನ್ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಈಗಾಗಲೇ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಆರೋಪಿ ಯಾರೇ ಆಗರಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಅಂತಲೂ ಹೇಳುತ್ತಿದ್ದಾರೆ. ಹಾಗೆಯೇ ಇದೀಗ ಟ್ವೀಟ್ ಮೂಲಕ ನಟ ಚೇತನ್ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರ ಪ್ರತಿಕ್ರಿಯೆ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
"ನಿಜ ಜೀವನದಲ್ಲಿ ನಟ ದರ್ಶನ್‌ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು," ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದ ಭಾಗವಾದ ಟ್ವೀಟ್ ಪೋಸ್ಟ್ ಮಾಡಿರುವಂತಹ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ," ಎಂದು ಬರೆದುಕೊಂಡಿದ್ದಾರೆ.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) June 11, 2024
ಅಲ್ಲದೆ, "ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು," ಎಂಬುದಾಗಿ ತಿಳಿಸಿದ್ದಾರೆ.












Click it and Unblock the Notifications