ಜೈಲಿನಲ್ಲಿದ್ರೂ ಕಡಿಮೆಯಾಗಿಲ್ಲ ದರ್ಶನ್ ಜನಪ್ರಿಯತೆ; ಎಕ್ಸ್‌ನಲ್ಲಿ ಹೊಸ ದಾಖಲೆ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರಿಗೆ ಯಾವಾಗ ಜಾಮೀನು ಸಿಗುತ್ತದೆ ಎನ್ನುವ ವಿಚಾರ ಸದ್ಯಕ್ಕೆ ಗೊತ್ತಿಲ್ಲ, ಆದರೂ ಅವರು ಆದಷ್ಟು ಬೇಗ ಹೊರಗೆ ಬರಲಿ ಎನ್ನುವ ಅಭಿಮಾನಿಗಳಿಗೇನು ಕಡಿಮೆ ಇಲ್ಲ.

ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋದ ಬಳಿಕ ಅವರ ಜನಪ್ರಿಯತೆ ಕಡಿಮೆಯಾಗುತ್ತದೆ, ಸಿನಿ ಕೆರಿಯರ್ ಕೊನೆಯಾಗುತ್ತದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ದರ್ಶನ್ ಅವರ ಜನಪ್ರಿಯತೆಗೆ ಯಾವ ಕುಂದು ಕೂಡ ಬಂದಿಲ್ಲ ಎನ್ನುವುದಕ್ಕೆ ಹಲವು ಘಟನೆಗಳು ಸಾಕ್ಷಿಯಾಗಿವೆ.

Darshan is the Most Talked About Kannada Actor on X in May 2024

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದರ್ಶನ್‌ ಕುರಿತಂತೆ ಸಾಕಷ್ಟು ಚರ್ಚೆ ನಡೆದಿದೆ. ಆದರೆ ಅವರು ಬಂಧನವಾಗುವುದಕ್ಕೆ ಮುನ್ನವೇ ಎಕ್ಸ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಮೇ 2024ರಲ್ಲಿ ದರ್ಶನ್‌ ಬಗ್ಗೆ ಹೆಚ್ಚು ಚರ್ಚೆಯಾಗಿದೆ. ಇದೇ ಕಾರಣಕ್ಕೆ ಕನ್ನಡದಲ್ಲಿ ಅತಿ ಹೆಚ್ಚು ಚರ್ಚೆಯಾದ ಸೆಲೆಬ್ರಿಟಿಯಾಗಿದ್ದಾರೆ.

ಎಕ್ಸ್ ಟ್ರೆಂಡ್ಸ್ ಇಂಡಿಯಾ ಈ ಮಾಹಿತಿಯನ್ನು ಹಂಚಿಕೊಂಡಿದ್ದು. ಮೇ ತಿಂಗಳಿನಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಪಟ್ಟ ಕನ್ನಡ ಚಿತ್ರರಂಗದ ಸೆಲೆಬ್ರಿಟಿ ದರ್ಶನ್‌ ಎಂದು ಹೇಳಿದೆ.

ಹಿಂದಿ ಚಿತ್ರರಂಗಕ್ಕೆ ಬಂದರೆ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ಮೇ ತಿಂಗಳಿನಲ್ಲಿ ಅತಿ ಹೆಚ್ಚು ಚರ್ಚಿಸಲ್ಪಟ್ಟ ಸೆಲೆಬ್ರಿಟಿಯಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ ರಜನಿಕಾಂತ್ ಮತ್ತು ತೆಲುಗು ಚಿತ್ರರಂಗದಲ್ಲಿ ಮಹೇಶ್ ಬಾಬು ಅವರ ಬಗ್ಗೆ ಹೆಚ್ಚು ಚರ್ಚೆ ನಡೆದಿದೆ.

ಅಭಿಮಾನಿಗಳು ಬಿಟ್ಟುಕೊಡ್ತಿಲ್ಲ!

ದರ್ಶನ್ ಕೊಲೆ ಆರೋಪದಡಿ ಜೈಲು ಸೇರಿದ್ದರೂ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ನಟನನ್ನು ಬಿಟ್ಟುಕೊಡಲು ತಯಾರಿಲ್ಲ. ದರ್ಶನ್ ವಿಚಾರಣಾಧೀನ ಖೈದಿ ಸಂಖ್ಯೆ 6106 ಈಗ ಸಖತ್ ಟ್ರೆಂಡಿಂಗ್ ಆಗಿದೆ.

ಅಭಿಮಾನಿಗಳು ಆಟೋ, ಸ್ಕೋಟರ್, ಬೈಕ್, ಲಾರಿ, ಕಾರು ಸೇರಿದಂತೆ ತಮ್ಮ ವಾಹನಗಳ ಮೇಲೆ ಖೈದಿ ನಂಬರ್ 6106 ಆರೋಪಿ ಅಷ್ಟೆ ಅಪರಾಧಿ ಅಲ್ಲ ಎನ್ನುವ ಸ್ಟಿಕ್ಕರ್ ಗಳನ್ನು ಹಾಕಿಸಿಕೊಳ್ಳುತ್ತಿದ್ದು, ನಟನ ಬೆಂಬಲಕ್ಕೆ ನಿಂತಿದ್ದಾರೆ.

ದರ್ಶನ್ ಪ್ರಕರಣ ತಣ್ಣಗಾಗುತ್ತಿದ್ದಂತೆ ಚಿತ್ರರಂಗದ ಇತರೆ ನಟ ನಟಿಯರು ಅವರನ್ನು ನೋಡಲು ಪರಪ್ಪನ ಅಗ್ರಹಾರದ ಕಡೆ ಮುಖ ಮಾಡುತ್ತಿದ್ದಾರೆ. ಇತ್ತೀಚೆಗೆ ನಟಿ ರಕ್ಷಿತಾ, ನಿರ್ದೇಶಕ ಪ್ರೇಮ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿಕೊಂಡು ಬಂದಿದ್ದರು.

ದರ್ಶನ್ ಅವರ ತಾಯಿ ಮೀನಾ ತೂಗುದೀಪ, ತಮ್ಮ ದಿನಕರ್ ತೂಗುದೀಪ ಕೂಡ ಪರಪ್ಪನ ಅಗ್ರಹಾರಕ್ಕೆ ತೆರಳಿ ದರ್ಶನ್‌ರನ್ನು ಭೇಟಿ ಮಾಡಿಕೊಂಡು ಬಂದಿದ್ದಾರೆ. ಪ್ರತಿ ದಿನ ಜೈಲಿನ ಬಳಿ ಅಭಿಮಾನಿಗಳು ಜಮಾಯಿಸುತ್ತಿದ್ದು, ನಟನನ್ನು ತೋರಿಸಿ ಎಂದು ಪೊಲೀಸರಿಗೆ ಮನವಿ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+