Darshan Case: ದರ್ಶನ್ ಆಟಕ್ಕೆ ಬ್ರೇಕ್! ಯಾವುದೇ ಕ್ಷಣದಲ್ಲಿ ಹಿಂಡಲಗಾ ಜೈಲಿಗೆ ಸ್ಥಳಾಂತರ
ಪರಪ್ಪನ ಅಗ್ರಹಾರದಲ್ಲಿ ಶೋಕಿ ಮಾಡಲು ಹೋಗಿ ನಟ ದರ್ಶನ್ಇದೀಗ ಸಂಕಷ್ಟವನ್ನು ತಂದುಕೊಂಡಿದ್ದಾರೆ. ವಿಲ್ಸನ್ ಗಾರ್ಡನ್ ನಾಗನ ಜೊತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸಿಗರೇಟ್ ಸೇದುತ್ತಾ ಮಗ್‌ನಲ್ಲಿ ಕಾಫಿ ಕುಡಿಯುತ್ತಿರುವ ಫೋಟೊ ವೈರಲ್ ಆದ ಬೆನ್ನಲ್ಲೇ, ದರ್ಶನ್‌ರನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದರ್ಶನ್‌ರನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಸೂಚನೆ ಕೊಟ್ಟಿದ್ದಾರೆ.
ಮೂಲಗಳ ಪ್ರಕಾರ ನಟ ದರ್ಶನ್‌ರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರ ಮಾಡುವುದು ಬಹುತೇಕ ಖಚಿತವಾಗಿದೆ. 1923ರಲ್ಲಿ ನಿರ್ಮಾಣವಾದ ಈ ಜೈಲು, ಐತಿಹಾಸಿಕ ಹಿನ್ನಲೆ ಹೊಂದಿದೆ, ಸ್ವಾತಂತ್ರ ಹೋರಾಟಗಾರರನ್ನು ಬಂಧಿಸಲು ಬ್ರಿಟೀಷರು ಈ ಜೈಲನ್ನು ನಿರ್ಮಾಣ ಮಾಡಿದ್ದರು. 100 ಎಕರೆ ವಿಸ್ತೀರ್ಣದಲ್ಲಿ ಹಿಂಡಲಗಾ ಜೈಲು ಹರಡಿಕೊಂಡಿದೆ.

ಜೈಲಿನಲ್ಲಿದ್ದರೂ ತಪ್ಪಲಿಲ್ಲ ವಿವಾದ
ದರ್ಶನ್ ಹೊರಗಡೆ ಇದ್ದಾಗ ಒಂದಿಲ್ಲೊಂದು ವಿವಾದಕ್ಕೆ ಕಾರಣವಾಗುತ್ತಿದ್ದರು. ಇದೀಗ ಜೈಲಿನಲ್ಲಿದ್ದರೂ ಕೂಡ ಅವರು ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ದರ್ಶನ್ ಸೊರಗಿದ್ದಾರೆ, ಮನೆ ಊಟ ಸಿಗದೆ ಅವರು ನಿಶ್ಯಕ್ತಿ ಹೊಂದಿದ್ದಾರೆ ಎಂದು ವರದಿಯಾಗಿತ್ತು, ಆದರೆ ವೈರಲ್ ಆಗಿರುವ ದರ್ಶನ್‌ರ ಫೋಟೊ ನೋಡಿದರೆ ಅದೆಲ್ಲಾ ಸುಳ್ಳು, ದರ್ಶನ್ ಜೈಲಿನಲ್ಲೂ ಆರಾಮಾಗಿದ್ದಾರೆ ಎನ್ನುವುದು ಗೊತ್ತಾಗುತ್ತದೆ.
ದರ್ಶನ್ ಮತ್ತು ಗ್ಯಾಂಗ್‌ನ ಮೂವರು ಸದಸ್ಯರು ಈಗಾಗಲೇ ತುಮಕೂರು ಕಾರಾಗೃಹದಲ್ಲಿದ್ದಾರೆ. ಇವರು ಸಾಕ್ಷಿಗಳಾಗಲು ಒಪ್ಪಿಕೊಂಡಿರುವುದರಿಂದ ಪೊಲೀಸರು ಪ್ರತ್ಯೇಕವಾಗಿ ಇರಿಸಿದ್ದಾರೆ ಎನ್ನಲಾಗಿದೆ. ಇದೀಗ ದರ್ಶನ್ ಕೂಡ ಬೇರೆ ಜೈಲಿಗೆ ಸ್ಥಳಾಂತರವಾಗಲಿದ್ದು, ರೇಣುಕಾಸ್ವಾಮಿ ಕೊಲೆ ಆರೋಪಿಗಳು ಮೂರು ಮೂರು ಜೈಲಿನಲ್ಲಿ ಇರುವಂತಾಗಿದೆ.
ಹಿಂಡಲಗಾದಲ್ಲಿ ಭಾರಿ ಬಂದೋಬಸ್ತ್!
ಪರಪ್ಪನ ಅಗ್ರಹಾರದಲ್ಲಿ ಆದ ಘಟನೆ ಹಿಂಡಲಗಾ ಜೈಲಿನಲ್ಲಿ ಕೂಡ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲು ಸಜ್ಜಾಗಿದ್ದಾರೆ. ದರ್ಶನ್ ಇರುವ ಸೆಲ್‌ಗೆ ಸಿಸಿಟಿವಿ ಅಳವಡಿಸಲು ಯೋಜಿಸಲಾಗಿದೆ. ಜೈಲರ್, ಸಹಾಯಕ ಜೈಲರ್ ಮತ್ತು ಪೇದೆಯನ್ನು ದರ್ಶನ್‌ರ ಸೆಲ್ ನೋಡಿಕೊಳ್ಳಲು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.
ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಈಗಾಗಲೇ ಒಂದು ಹಂತಕ್ಕೆ ಬಂದಿದ್ದು, ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ದರ್ಶನ್ ಪರಪ್ಪನ ಅಗ್ರಹಾರ ಸೇರಿ 60 ಕ್ಕೂ ಹೆಚ್ಚು ದಿನಗಳಾಗಿದೆ. 90 ದಿನಗಳ ಒಳಗಾಗಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆ ಮಾಡಬೇಕಿದ್ದು, ಸೆಪ್ಟಂಬರ್ ಎರಡನೇ ವಾರದಲ್ಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications