ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ರದ್ದು, 287 ದಿನಗಳ ನಂತರ ಬಳ್ಳಾರಿ ಜೈಲಿಗೆ... Darshan Thoogudeepa

ಕನ್ನಡಿಗ & ಚಾಲೆಂಜಿಂಗ್ ಸ್ಟಾರ್ ಅಂತಾ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇಂದು ಭೀಕರ ಆಘಾತ ನೀಡಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಹವಾ ಎಬ್ಬಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಮಂಡ್ಯ & ಇಂಡಿಯಾ ಮಾತ್ರವಲ್ಲ ಇಡೀ ಜಗತ್ತಿನಲ್ಲಿ ಅಬ್ಬರಿಸುತ್ತಿದೆ ಅಂತಿದ್ದರು ಅಭಿಮಾನಿಗಳು. ಇದೇ ಕಾರಣಕ್ಕೆ ಡೆವಿಲ್ ಸಿನಿಮಾ ರಿಲೀಸ್ ದೊಡ್ಡ ಮಟ್ಟದಲ್ಲಿ ಅಬ್ಬರಿಸುವುದು ಗ್ಯಾರಂಟಿ ಅಂತ ಕಾಯುತ್ತಿದ್ದರು ಫ್ಯಾನ್ಸ್. ಇಂತಹ ಸಮಯದಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ರದ್ದು, 287 ದಿನಗಳ ನಂತರ ಬಳ್ಳಾರಿ ಜೈಲಿಗೆ...

ಕನ್ನಡ ಸಿನಿಮಾ ಇಂಡಸ್ಟ್ರಿಗೆ ಒಬ್ಬರೇ ಡಿ-ಬಾಸ್... ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ಇಲ್ಲದೆ ಏನೂ ನಡೆಯಲ್ಲ... ಡಿ-ಬಾಸ್ ದರ್ಶನ್ ತೂಗುದೀಪ್ 10,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಿನಿಮಾ ಮಾಡುತ್ತಾರೆ... ಈ ಮೂಲಕ ಇಡೀ ಜಗತ್ತಿನಲ್ಲಿ ಹೊಸ ಇತಿಹಾಸ ನಿರ್ಮಾಣ ಮಾಡ್ತಾರೆ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಎದೆ ತಟ್ಟಿಕೊಂಡು ಹೇಳ್ತಾ ಡೆವಿಲ್ ಸಿನಿಮಾಗಾಗಿ ಕಾಯುತ್ತಿದ್ದಾರೆ. ಹೀಗಿದ್ಧಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಜಾಮೀನು ರದ್ದು, 287 ದಿನಗಳ ನಂತರ ಬಳ್ಳಾರಿ ಜೈಲಿಗೆ...

Darshan Thoogudeepa And Darshan Thoogudeepa Fans Got This Big News

287 ದಿನಗಳ ನಂತರ ಬಳ್ಳಾರಿ ಜೈಲಿಗೆ...

ಕನ್ನಡ ಸಿನಿಮಾ ರಂಗದಲ್ಲಿ ಕಳೆದ 25 ವರ್ಷಗಳಿಂದ ಸಾಲು ಸಾಲು ಸಿನಿಮಾಗಳ ನೀಡುತ್ತಾ ಬಂದಿರುವ ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್, ಇದೀಗ ಮತ್ತೊಂದು ಭರ್ಜರಿ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಕೊಡಲು ಬರ್ತಿದ್ದಾರೆ ಅಂತಾ ಅಭಿಮಾನಿಗಳು ನಿರೀಕ್ಷೆಯ ಬೆಟ್ಟವನ್ನೇ ಎದೆಯಲ್ಲಿ ಇದೀಗ ಇಟ್ಟುಕೊಂಡು ಕಾಯುತ್ತಿದ್ದರು. ಆದರೆ ಮಾನ್ಯ ಸುಪ್ರೀಂಕೋರ್ಟ್ ಇಂದು ನೀಡಿದ ತೀರ್ಪಿನ ಬಳಿಕ ದೊಡ್ಡ ಹೃದಯಾಘಾತವೇ ಅಭಿಮಾನಿಗಳಿಗೆ ಎದುರಾಗಿದ್ದು, ಸಂಚಲನ ಸೃಷ್ಟಿಯಾಗಿದೆ. ಹಾಗಾದರೆ ಡಿ-ಬಾಸ್ ದರ್ಶನ್ ತೂಗುದೀಪ್ ಇವತ್ತೇ ಅರೆಸ್ಟ್ ಆಗ್ತಾರಾ?

ಅಂದಹಾಗೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕಿಡ್ನಾಪ್ ಮಾಡಿ ಬೆಂಗಳೂರಿಗೆ ಕರೆತರಲಾಗಿತ್ತು ಎಂಬ ಆರೋಪವನ್ನು ಮಾಡಲಾಗಿತ್ತು. ಹೀಗೆ ರೇಣುಕಾಸ್ವಾಮಿ ಬೆಂಗಳೂರಿಗೆ ಬಂದ ನಂತರ, ಪಟ್ಟಣಗೆರೆಯ ಶೆಡ್ ಒಳಗೆ ಭಾರಿ ಹಿಂಸೆ ಮಾಡಿ ಹತ್ಯೆ ಮಾಡಿದ್ದ ಆರೋಪ ಮಾಡಲಾಗಿತ್ತು. ಈ ವಿಚಾರ ಕೆಲವು ದಿನಗಳ ನಂತರ ಹೊರ ಜಗತ್ತಿಗೆ ಗೊತ್ತಾಗಿ ಪೊಲೀಸರು 17 ಆರೋಪಿಗಳನ್ನ ಅರೆಸ್ಟ್ ಮಾಡಿದ್ದರು. ಹೀಗೆ ಹಲವು ವಿಚಾರಣೆ ಬಳಿಕ ಅಂತಿಮವಾಗಿ ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ 17 ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು. ಇದೀಗ ಆರೋಪಿಗಳಿಗೆ ದೊಡ್ಡ ಆಘಾತವೇ ಎದುರಾಗಿದೆ!

ದಿಢೀರ್ ಸೆಂಟ್ರಲ್ ಜೈಲಿಗೆ ಹೋಗುವುದು...

ಹೌದು, ಇದೀಗ ಮಾನ್ಯ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಭಾರಿ ದೊಡ್ಡ ಸಂಚಲನ ಸೃಷ್ಟಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್ ಅಂದ್ರೆ ಜಾಮೀನು ಪಡೆದಿದ್ದ ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಜಾಮೀನು ಆದೇಶವನ್ನು ಪ್ರಶ್ನೆ ಮಾಡಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಮಾನ್ಯ ನ್ಯಾಯಮೂರ್ತಿಗಳು ಇಂದು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ. ನಟ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಜಾಮೀನು ರದ್ದು ಮಾಡಲಾಗಿದ್ದು, ಮತ್ತೆ ಸೆಂಟ್ರಲ್ ಜೈಲಿಗೆ ಹೋಗುವುದು ಗ್ಯಾರಂಟಿ ಆಗುತ್ತಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+