Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ಜಾಮೀನು, ಕುಣಿದು ಕುಪ್ಪಳಿಸಿದ ಅಭಿಮಾನಿಗಳು...
ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಇವತ್ತು ದೀಪಾವಳಿ ಹಬ್ಬ ಮತ್ತೆ ಬಂದಂತೆ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿ ನರಳಾಡಿ, ಇದೀಗ ಬೆನ್ನು ನೋವಿನ ಕಾರಣ ಆಸ್ಪತ್ರೆಗೆ ಸೇರಿ ಸರ್ಜರಿ ಮಾಡಿಸಿಕೊಳ್ಳಲು ಸಜ್ಜಾಗಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಭಾರಿ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಹೈಕೋರ್ಟ್‌ನಿಂದ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಅವರಿಗೆ ಗುಡ್ ನ್ಯೂಸ್....
ಅಭಿಮಾನಿಗಳ ಪಾಲಿನ ದಾಸ & ಕನ್ನಡ ಸಿನಿಮಾ ಇಂಡಸ್ಟ್ರಿ ಡಿ-ಬಾಸ್ ದರ್ಶನ್ ತೂಗುದೀಪ್ ಇದೇ ವರ್ಷ ಅಂದ್ರೆ, 2024ರ ಜೂನ್ ತಿಂಗಳಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಅಗಿದ್ದರು. ಈ ಸುದ್ದಿ ಕೇಳಿ ಇಡೀ ದೇಶವೇ ಒಂದು ಕ್ಷಣ ಬೆಚ್ಚಿ ಬಿದ್ದಿತ್ತು. ಅಲ್ಲದೆ ದರ್ಶನ್ ತೂಗುದೀಪ್ ಅವರ ಪ್ರಕರಣ ಇಡೀ ಭಾರತದಲ್ಲಿ ಸದ್ದು ಮಾಡಿತ್ತು. ಹೀಗಿದ್ದಾಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು, ತಮ್ಮ ನೆಚ್ಚಿನ ನಟ ಎಲ್ಲಾ ಕಂಟಕ ಎದುರಿಸಿ ಪಾರಾಗಿ ಹೊರಗೆ ಬರಲಿ ಅಂತಾ ಪ್ರಾರ್ಥನೆ ಮಾಡುತ್ತಿದ್ದರು....

ದರ್ಶನ್ ತೂಗುದೀಪ್‌ಗೆ ಜಾಮೀನು ಮಂಜೂರು!
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳ ಪ್ರಾರ್ಥನೆ ಇದೀಗ ಫಲಿಸಿದೆ ಅಂತಾ ಕಾಣುತ್ತದೆ. ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆಗೆ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿದ್ದ ಎಲ್ಲಾ ಆರೋಪಿಗಳಿಗೂ ಈಗ ಬೇಲ್ ಅಂದ್ರೆ ಜಾಮೀನು ಮಂಜೂರು ಆಗಿದೆ. ಮಾನ್ಯ ಕರ್ನಾಟಕ ಹೈಕೋರ್ಟ್ ಇದೀಗ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.
ಬೆಂಗಳೂರು ಜೈಲು ಟು ಬಳ್ಳಾರಿ ಜೈಲು!
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮೊದಲಿಗೆ ಸೇರಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲನ್ನು. ಹೀಗೆ ದರ್ಶನ್ ತೂಗುದೀಪ್ ಅವರು, ಪರಪ್ಪನ ಅಗ್ರಹಾರ ಜೈಲಲ್ಲಿ ಆರಾಮವಾಗಿ ಸಿಗರೇಟು ಸೇದುತ್ತಾ, ಬಿರಿಯಾನಿ ತಿನ್ನುತ್ತಾ ಮತ್ತು ಬಿಯರ್ ಕುಡಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅದರಲ್ಲೂ ಇದೇ ವೇಳೆ ನಟೋರಿಯಸ್ ರೌಡಿಗಳ ಜೊತೆಯಲ್ಲಿ ಕೂತು ಬಿಂದಾಸ್ ಆಗಿ ಟೀ ಕುಡಿಯುತ್ತಾ & ಧಮ್ ಹೊಡೆಯುತ್ತಿದ್ದ ದರ್ಶನ್ ತೂಗುದೀಪ್ ಫೋಟೋ ಕೂಡ ವೈರಲ್ ಆಗಿತ್ತು.
ಹೀಗೆ ಆರೋಪಗಳು ಕೇಳಿಬಂದ ತಕ್ಷಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ, ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿಸಲಾಗಿತ್ತು. ಆದರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವು ಸೇರಿದಂತೆ ಹಲವು ರೀತಿ ಸಮಸ್ಯೆ ಎದುರಿಸಿ ವಿಲವಿಲ ಒದ್ದಾಡಿ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಇದೇ ಸಮಯದಲ್ಲಿ, ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡಗೆ ಇದೀಗ ಮಾನ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
'ಡೆವಿಲ್' ಸಿನಿಮಾ ಶೂಟಿಂಗ್ ಶುರು?
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜಾಮೀನು ಪಡೆದು ಹೊರಗೆ ಬರುತ್ತಿದ್ದಂತೆ ಇದೀಗ ಹೊಸ ಸಂಚಲನ ಸೃಷ್ಟಿ ಆಗಿದೆ. ಅದು ಏನಂದ್ರೆ, ಕೋಟಿ ಕೋಟಿ ಅಭಿಮಾನಿಗಳು ಉಸಿರು ಬಿಗಿ ಹಿಡಿದುಕೊಂಡು ಕಾಯುತ್ತಿದ್ದ 'ಡೆವಿಲ್' ಸಿನಿಮಾ ಶೂಟಿಂಗ್ ಮತ್ತೆ ಶುರುವಾಗುವ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ. ಈ ಮೂಲಕ 'ಡೆವಿಲ್' ಸಿನಿಮಾ ಶೂಟಿಂಗ್ ಆದಷ್ಟು ಬೇಗನೇ ಮುಗಿದು, ಇನ್ನೇನು ಕೆಲವೇ ದಿನಗಳಲ್ಲಿ 'ಡೆವಿಲ್' ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎನ್ನುವ ನಿರೀಕ್ಷೆಗಳು ಕೂಡ ಈಗ ಮೂಡಿದೆ. ಹೀಗಾಗಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ? ಅಂತಾ ಅಭಿಮಾನಿಗಳು ಕಾಯುತ್ತಿದ್ದಾರೆ!












Click it and Unblock the Notifications