Actor Darshan: ಬಿಗ್‌ಬಾಸ್ ಕನ್ನಡ ಸೀಸನ್ 12ರ ನಿರೂಪಕ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಕಿಚ್ಚ ಸುದೀಪ್ ಬಿಗ್‌ಬಾಸ್ ಕನ್ನಡ ಸೀಸನ್ 11ರ ನಂತರ ನಿರೂಪಣೆಗೆ ವಿದಾಯ ಹೇಳಿದ್ದಾರೆ. ಕನ್ನಡ ಬಿಗ್‌ಬಾಸ್ ಶೋನಲ್ಲಿ ಇನ್ಮುಂದೆ ಸುದೀಪ್ ಕಾಣಿಸಿಕೊಳ್ಳುವುದಿಲ್ಲ. ಸುದೀಪ್ ಈ ನಿರ್ಧಾರಕ್ಕೆ ಕಾರಣ ಏನು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ ಬಿಗ್‌ಬಾಸ್ ಕನ್ನಡ ಸೀಸನ್ 12ಕ್ಕೆ ನಿರೂಪಕರಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಬರಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ.
ಹೌದು... ಪ್ರಸ್ತುತ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಸುವ ಮೂಲಕ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ ಎಷ್ಟೇ ಕಷ್ಟಪಟ್ಟರೂ ಸಹ ದರ್ಶನ್ ಜೈಲಿನಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಆದರೆ ಅವರ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಇಡೀ ಸಿನಿಮಾ ರಂಗ ಇಂದಲ್ಲಾ ನಾಳೆ ದರ್ಶನ್ ಜೈಲಿನಿಂದ ಹೊರಗೆ ಬಂದೇ ಬರುತ್ತಾರೆ ಎಂಬ ನಂಬಿಕೆ ಇಟ್ಟುಕೊಂಡಿದ್ದಾರೆ. ಅವರ ಆಗಮನವನ್ನು ಎದುರು ನೋಡುತ್ತಿದ್ದಾರೆ.

ಆದರೆ ಯಾವಾಗ ದರ್ಶನ್ ಜೈಲಿನಿಂದ ಹೊರಬರುತ್ತಾರೆ ಅನ್ನೋದು ಮಾತ್ರ ಯಾರಿಗೂ ಗೊತ್ತಿಲ್ಲ. ಹೀಗಿರುವಾಗ ದರ್ಶನ್ ಜೈಲಿನಿಂದ ಹೊರ ಬಂದ ಬಳಿಕ ಏನು ಮಾಡುತ್ತಾರೆ ಎನ್ನುವುದು ಕೂಡ ಸ್ಪಷ್ಟವಾಗಿಲ್ಲ. ಅವರು ನಟನೆಯ 'ಡೆವಿಲ್' ಸಿನಿಮಾ ಶೂಟಿಂಗ್ ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತುಕೊಂಡಿದೆ. ಅದನ್ನು ಪೂರ್ಣಗೊಳಿಸಲು ಚಿತ್ರತಂಡ ಕಾತುರದಿಂದ ಕಾಯುತ್ತಿದೆ.
ಜಾಮೀನು ಸಿಕ್ಕರೆ ಮುಂದೇನು?
ಒಂದು ವೇಳೆ ದರ್ಶನ್‌ಗೆ ಜಾಮೀನು ಮಂಜೂರಾದರೆ ಅವರು ಜೈಲಿನಿಂದ ಹೊರಬಂದು ಎಲ್ಲದರಿಂದಲೂ ಕೊಂಚ ವಿರಾಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಯಾಕೆಂದರೆ ದರ್ಶನ್ ಅವರ ಆರೋಗ್ಯ ಸದ್ಯಕ್ಕೆ ಸರಿಯಾಗಿಲ್ಲ. ಅವರಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಬೆನ್ನು ನೋವಿನಿಂದಾಗಿ ಅವರ ಆರೋಗ್ಯದಲ್ಲಿ ಸಾಕಷ್ಟು ಏರುಪೇರಾಗುತ್ತಿದೆ. ಹೀಗಾಗಿ ಜೈಲಿನಿಂದ ಹೊರ ಬಂದ ಬಳಿಕ ದರ್ಶನ್ ಬೆಡ್ ರೆಸ್ಟ್ ಮಾಡುವ ಅವಶ್ಯಕತೆ ಇದೆ.
ಜೊತೆಗೆ ಜೈಲಿನಲ್ಲಿ ತನ್ನವರನ್ನು ದರ್ಶನ್ ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಜೈಲಿನಿಂದ ಹೊರಬಂದ ಬಳಿಕ ತಮ್ಮ ಕುಟುಂಬಸ್ಥರೊಂದಿಗೆ ದರ್ಶನ್ ಕಾಲ ಕಳೆಯಲಿದ್ದಾರೆ. ಕೆಲ ತಿಂಗಳುಗಳ ನಂತರವಷ್ಟೇ ದರ್ಶನ್ ಸಿನಿಮಾಕ್ಕೆ ಮತ್ತೆ ಪ್ರವೇಶ ಮಾಡಲಿದ್ದಾರೆ ಎನ್ನುವ ಮಾಹಿತಿ ಕುಟುಂಬ ಮೂಲಗಳಿಂದ ಸಿಕ್ಕಿದೆ.
ಬಿಗ್‌ಬಾಸ್ ಕನ್ನಡ ಸೀಸನ್ 12ರ ನಿರೂಪಕ ದರ್ಶನ್
ಆದರೆ ಸಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಬಿಗ್‌ಬಾಸ್ ಶೋಗೆ ದರ್ಶನ್ ತೂಗುದೀಪ್ ಅವರೇ ಮುಂದೆ ನಿರೂಪಣೆ ಮಾಡಲಿದ್ದಾರೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ದರ್ಶನ್ ಇನ್ನೂ ಕೂಡ ಜೈಲಿನಿಂದ ಹೊರಬಂದಿಲ್ಲ. ಅದಾಗಲೇ ಅಭಿಮಾನಿಗಳು ದರ್ಶನ್ ಜೈಲಿನಿಂದ ಹೊರಬಂದ ಬಳಿಕ ಮುಂದೇನು ಮಾಡಲಿದ್ದಾರೆ ಎನ್ನುವ ವಿಚಾರಗಳನ್ನು ಚರ್ಚಿಸುತ್ತಿದ್ದಾರೆ.
ಕೆಲವರು ದರ್ಶನ್ ಅವರು ಮುಂದಿನ ಬಿಗ್‌ಬಾಸ್ ಹೋಸ್ಟರ್ ಎನ್ನುವುದನ್ನು ಮನಸಾರೆ ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ಮೊದಲು ಜೈಲಿನಿಂದ ದರ್ಶನ್ ಹೊರಬರಲಿ ಆಮೇಲೆ ಅವರೇನು ಮಾಡ್ತಾರೆ ಅನ್ನೋದನ್ನು ಕಾದು ನೊಡೋಣ ಎಂದು ಪ್ರತಿಕ್ರಿಯಿಸುತ್ತಿದ್ದಾರೆ.
ಒಟ್ಟಿನಲ್ಲಿ ಅಭಿಮಾನಿಗಳು ದರ್ಶನ್ ಜೈಲಿನಿಂದ ಹೊರಬರುವುದಕ್ಕೂ ಮೊದಲೇ ಬಿಗ್‌ಬಾಸ್ ಶೋನ ಮುಂದಿನ ನಿರೂಪಕ ದರ್ಶನ್ ಎಂದಿದ್ದಾರೆ. ಇದೆಲ್ಲದಕ್ಕೂ ದರ್ಶನ್ ಅವರು ಜೈಲಿನಿಂದ ಹೊರ ಬಂದ ಬಳಿಕವಷ್ಟೇ ಉತ್ತರ ಸಿಗಲಿದೆ.












Click it and Unblock the Notifications