Darshan Thoogudeepa: ಡಿ ಬಾಸ್ ಬರ್ತಡೇ- ಮಕ್ಕಳಿಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಗಿಫ್ಟ್
ಫೆಬ್ರವರಿ 16ರಂದು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ಅವರ ಹುಟ್ಟುಹಬ್ಬ. ಆದರೆ ಅನಾರೋಗ್ಯ ಕಾರಣದಿಂದಾಗಿ ಅವರು ಈ ಬಾರಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಸ್ವತ: ದರ್ಶನ್ ಅವರು ಹೇಳಿಕೊಂಡಿರುವುದು ಎಲ್ಲಾ ಅಭಿಮಾನಿಗಳಿಗೂ ಗೊತ್ತೇ ಇದೆ. ಆದರೆ ಅಭಿಮಾನಿಗಳು ತಮ್ಮ ಕಡೆಯಿಂದ ದರ್ಶನ್ ಅವರ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಿದ್ದಾರೆ. ಹಾಗಾದರೆ ಫ್ಯಾನ್ಸ್ ದರ್ಶನ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದು ಹೇಗೆ?
ದರ್ಶನ್ ಹುಟ್ಟುಹಬ್ಬಕ್ಕೆ ಕೆಲ ದಿನಗಳು ಬಾಕಿ ಇವೆ. ಅದಾಗಲೇ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮ ದಿನವನ್ನು ಆಚರಿಸಲು ಆರಂಭಿಸಿದ್ದಾರೆ. ಬೆಂಗಳೂರು ಸಾರಕ್ಕಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಅಭಿಮಾನಿಗಳು ಡಿ-ಬಾಸ್ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಶಾಲಾ ಶಿಕ್ಷಕರಿಗೆ ಹಾಗೂ ಶಾಲಾ ಮಕ್ಕಳಿಗೆ ಉಡುಗೊರೆಯನ್ನು ನೀಡುವ ಮೂಲಕ ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಮಕ್ಕಳಿಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಗಿಫ್ಟ್
ಈಗಾಗಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮುಕ್ತಾಯದ ಹಂತವನ್ನು ತಲುಪಿದೆ. ಫೆಬ್ರವರಿ 16ರಂದು ಡೆವಿಲ್ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಭರವಸೆಯನ್ನು ನೀಡಿದೆ. ದರ್ಶನ್ ನಾಲ್ಕೈದು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆದರೆ ಅವರ ಅನಾರೋಗ್ಯ ಕಾರಣ ಅದು ಯಾವುದೂ ಕೂಡ ಪೂರ್ಣಗೊಂಡಿಲ್ಲ. ಹೀಗಾಗಿ ದರ್ಶನ್ ಹುಟ್ಟುಹಬ್ಬಕ್ಕೆ ಏನಾದ್ರೂ ಸರ್ಪೈಸ್ ಸಿಗುವ ಕುತೂಹಲದಲ್ಲಿ ದರ್ಶನ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
ಈ ಬಾರಿ ದರ್ಶನ್ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸುವ ಕನಸು ಹೊಂದಿದ್ದರು. ಆದರೆ ದರ್ಶನ್ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಏನೇ ಆದರೂ ಕೂಡ ತಮ್ಮ ಫ್ಯಾನ್ಸ್ ಮಾತ್ರ ತಮ್ಮ ಮೇಲೆ ಮೊದಲಿನಷ್ಟೇ ಪ್ರೀತಿ ಇಟ್ಟುಕೊಂಡಿರುವುದು ದರ್ಶನ್ ಅವರಿಗೆ ತುಂಬಾ ಖುಷಿ ತಂದಿದೆ.
ಹೀಗಾಗಿ ಈ ಬಾರಿ ಹುಟ್ಟುಹಬ್ಬವನ್ನು ತಮ್ಮ ಅಭಿಮಾನಿಗಳೊಂದಿಗೆ ಆಚರಿಸುವ ಆಸೆ ದರ್ಶನ್ ಅವರಿಗೂ ಹೆಚ್ಚಾಗಿತ್ತು. ಆದರೆ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಇರುವುದರಿಂದ ಅವರು ಹೆಚ್ಚು ಹೊತ್ತು ನಿಂತುಕೊಳ್ಳಲು ಆಗುವುದಿಲ್ಲ. ಈ ಕಾರಣದಿಂದಾಗಿ ಜನ್ಮ ದಿನವನ್ನು ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ.
ದರ್ಶನ್ ಹುಟ್ಟುಹಬ್ಬಕ್ಕೆ ತಯಾರಿ
ದರ್ಶನ್ ತೂಗುದೀಪ ಅವರ ಅಭಿಮಾನಿ ಬಳಗ ಪ್ರತಿಬಾರಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಬ್ಯಾನರ್, ಕಟೌಟ್ ಕಟ್ಟುವ ಮೂಲಕ ದರ್ಶನ್ ಹುಟ್ಟುಹಬ್ಬವನ್ನು ಆಚರಿಸುತ್ತಾರೆ. ಈಗಾಗಲೇ ಫ್ಯಾನ್ ಪೇಜ್‌ಗಳಲ್ಲಿ ವಿಭಿನ್ನ ಬಗೆಯ ಪೋಸ್ಟರ್‌ಗಳು ಹರಿದಾಡುತ್ತವೆ. ಹುಟ್ಟುಹಬ್ಬಕ್ಕೂ ಮುನ್ನ ಅಭಿಮಾನಿಗಳು ಸಂಭ್ರಮಿಸುತ್ತಾರೆ. ಈಗಾಗಲೇ ಅಡ್ವಾನ್ಸ್ ಹ್ಯಾಪಿ ಬರ್ಡ್‌ಡೇ ಅನ್ನೋ ಪೋಸ್ಟರ್‌ಗಳು ರಾರಾಜಿಸುತ್ತಿವೆ.
ಆದರೆ ದರ್ಶನ್ ಹಲವಾರು ಬಾರಿ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ತರಬೇಡಿ. ಅದೇ ಹಣದಲ್ಲಿ ನಿಮ್ಮ ಕೈಲಾದ ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ಅನಾಥಾಶ್ರಮ ವೃದ್ಧಾಶ್ರಮಗಳಿಗೆ ದಾನ ಮಾಡಿ ಎಂದು ಹಲವಾರು ಬಾರಿ ಕೇಳಿಕೊಂಡಿದ್ದಾರೆ. ಹೀಗಾಗಿ ಈ ಬಾರಿ ದರ್ಶನ್ ಮಾತನ್ನು ಅಭಿಮಾನಿಗಳು ಪಾಲಿಸಿದ್ದಾರೆ. ಸಾರಕ್ಕಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಅಭಿಮಾನಿಗಳು ಮಕ್ಕಳಿಗೆ ಉಡುಗೊರೆ ನೀಡಿ ಸಿಹಿಯನ್ನು ಹಂಚಿ ದಾಸನಿಗೆ ಶುಭಾಶಯ ತಿಳಿಸಿದ್ದಾರೆ.












Click it and Unblock the Notifications