ಕರ್ನಾಟಕ ಸಿಎಂ ಕುರ್ಚಿ ಮೇಲೆ ನಟ ದರ್ಶನ್ ಕಣ್ಣು, ಯಾವ ಪಕ್ಷದಿಂದ ರಾಜಕೀಯಕ್ಕೆ?
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ಅವರು ಡಿಬಾಸ್ ಎಂದು ಅಭಿಮಾನಿಗಳಿಂದ ಕರೆಸಿಕೊಂಡಿದ್ದಾರೆ. ಆದರೆ ಸದ್ಯದಲ್ಲೇ ದರ್ಶನ್ ಅವರು ಚೀಫ್ ಮಿನಿಸ್ಟರ್ (ಸಿಎಂ) ಎಂದು ಕರೆಸಿಕೊಳ್ಳಲಿದ್ದಾರೆ. ಹೌದು ಇದಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಇಲ್ಲಿವರೆಗೆ ನಟರಾಗಿ ಮಿಂಚಿದ್ದ ದರ್ಶನ್ ಅವರು ಸದ್ಯದಲ್ಲೇ ರಾಜಕಾರಣಕ್ಕೆ ಎಂಟ್ರಿ ನೀಡುತ್ತಿದ್ದು, ನೇರವಾಗಿ ಸಿಎಂ ಆಗಲು ಹೊರಟಿದ್ದಾರೆ. ಈ ಕುರಿತು ಎಕ್ಸ್‌ಕ್ಲೂಸಿವ್ ಮಾಹಿತಿ ಇಲ್ಲಿದೆ..
ನಟ ದರ್ಶನ್ ಅವರು ಸದ್ಯ ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ದರ್ಶನ್ ಅವರು ಮುಖ್ಯಮಂತ್ರಿಯಾಗುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಆದರೆ ಸದ್ಯಕ್ಕೆ ರಾಜ್ಯದಲ್ಲಿ ಯಾವುದೇ ಚುನಾವಣೆ ಇಲ್ಲ. ಸಿಎಂ ಕುರ್ಚಿಯೂ ಖಾಲಿ ಇಲ್ಲ, ಹೀಗಿರುವಾಗ ದರ್ಶನ್ ಹೇಗೆ ಸಿಎಂ ಆಗ್ತಾರೆ? ಎನ್ನುವ ಪ್ರಶ್ನೆಯನ್ನು ಕೂಡ ಅವರ ಅಭಿಮಾನಿಗಳು ಕೇಳುತ್ತಿದ್ದಾರೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರ ಜೋರಾಗಿದೆ. ಇದರ ನಡುವೆಯೇ ದರ್ಶನ್ ಅವರು ಮುಖ್ಯಮಂತ್ರಿಯಾಗುತ್ತಿದ್ದಾರೆ ಎನ್ನುವ ವಿಚಾರ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ದರ್ಶನ್ ಅವರು ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಕೊಡ್ತಿದ್ದಾರಾ ಎಂದೂ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕೊನೆಗೂ ಸ್ಪಷ್ಟ ಉತ್ತರ ಸಿಕ್ಕಿದೆ.
ದರ್ಶನ್ ಅವರು ಮುಖ್ಯಮಂತ್ರಿಯಾಗಿತ್ತಿರುವುದು ಸತ್ಯ. ಆದರೆ, ಇದು ನಿಜವಾಗಿ ಅಲ್ಲ. ಬದಲಾಗಿ ಅವರು ನಟಿಸುತ್ತಿರುವ ಡೆವಿಲ್ ಸಿನಿಮಾದಲ್ಲಿ ದರ್ಶನ್ ಅವರು ಮುಖ್ಯಮಂತ್ರಿ ಪಾತ್ರ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ಫೋಟೋ ಕೂಡ ಲೀಕ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ರಾಜಕಾರಣಿಯಾಗಿ ಕಾಣಿಸಿಕೊಂಡಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಎಂದು ಅವರ ಪಾತ್ರದ ಹೆಸರು ಹಾಗೂ ಪಕ್ಷದ ಹೆಸರು ಕೂಡ ಬರೆಯಲಾಗಿದೆ.
ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಆದರೆ, ಈ ಫೋಟೋ ಚಿತ್ರತಂಡ ಹಂಚಿಕೊಂಡಿಲ್ಲ. ಶೂಟಿಂಗ್ ಸೆಟ್‌ನಿಂದಲೇ ಯಾರೋ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಡೆವಿಲ್ ಸಿನಿಮಾದ ಶೂಟಿಂಗ್ ಸೆಟ್‌ನಿಂದ ಈ ಫೋಟೋ ಲೀಕ್ ಆಗಿದೆ ಎಂದು ಹೇಳಲಾಗುತ್ತಿದೆ. ಡಿಬಾಸ್ ಅಭಿಮಾನಿಗಳಂತೂ ಈ ವಿಚಾರ ಕೇಳಿ ಫುಲ್ ಖುಷಿಯಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿರುವ ದರ್ಶನ್ ಅವರು ಕೆಲವು ತಿಂಗಳ ಬಳಿಕ ಆರೋಗ್ಯ ಸುಧಾರಿಸಿಕೊಂಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬಹುನಿರೀಕ್ಷಿತ ಡೆವಿಲ್ ಸಿನಿಮಾ ಕಳೆದ ವರ್ಷವೇ ತೆರೆಗೆ ಬರಬೇಕಿತ್ತು. ಆದರೆ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿದ್ದರಿಂದ ಶೂಟಿಂಗ್ ಅರ್ಧಕ್ಕೆ ನಿಂತಿತ್ತು. ಇದೀಗ ಶೂಟಿಂಗ್ ಮತ್ತೆ ವೇಗವಾಗಿ ಶುರುವಾಗಿದ್ದು, ಇತ್ತೀಚೆಗೆ ರಾಜಸ್ತಾನದಲ್ಲಿ ಶೂಟಿಂಗ್ ಮುಗಿಸಿ ಬಂದಿದೆ. ಸದ್ಯ ಬೆಂಗಳೂರಿನಲ್ಲಿ ಚಿತ್ರೀಕರಣ ಮುಂದುವರಿದಿದೆ.












Click it and Unblock the Notifications