Darshan Thoogudeepa: ದರ್ಶನ್ ತೂಗುದೀಪ್‌ಗೆ ಜೈಲು ದರ್ಶನ ಮಾಡಿಸಿದ್ದ ಪೊಲೀಸ್ ಅಧಿಕಾರಿ ಎಸಿಪಿ ಚಂದನ್‌ಗೆ ಕಂಟಕ?
ದರ್ಶನ್ ತೂಗುದೀಪ್ ಅವರನ್ನ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಅರೆಸ್ಟ್ ಮಾಡಿದ್ದ & ನಿರ್ಭಯವಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿ ಎಸಿಪಿ ಚಂದನ್ ಅವರಿಗೆ ದೊಡ್ಡ ಕಂಟಕ ಎದುರಾಗಿದೆ ಎಂಬ ಆರೋಪ ಕೇಳಿಬಂದಿದೆ. ಹಾಗಾದ್ರೆ ಏನದು ಕಂಟಕ? ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.
ಕರ್ನಾಟಕ ಪೊಲೀಸ್ ಖದರ್ ಏನು ಅನ್ನೋದು ಇಡೀ ದೇಶಕ್ಕೇ ಗೊತ್ತು. ಕರ್ನಾಟಕ ಖಾಕಿ ಪಡೆ ಕಂಡರೆ ಕಳ್ಳರು, ರೌಡಿಗಳು, ಸಮಾಜಘಾತುಕರು ಹೆದರುತ್ತಾರೆ. ಬೇರೆ ರಾಜ್ಯದ ಪೊಲೀಸ್ ಪಡೆಗೆ ಹೋಲಿಕೆ ಮಾಡಿದರೆ ಕರ್ನಾಟಕದ ಪೊಲೀಸರು ದೊಡ್ಡ ಮಟ್ಟಿಗೆ ಹವಾ ಇಟ್ಟಿದ್ದಾರೆ. ಹೀಗೆ ಭಾರಿ ಹೆಸರು ಮಾಡಿರುವ ಪೊಲೀಸ್ ಅಧಿಕಾರಿಗಳ ಪೈಕಿ ಎಸಿಪಿ ಚಂದನ್ ಅವರು ಕೂಡ ಒಬ್ಬರು. ಆದರೆ ಇದೇ ಎಸಿಪಿ ಚಂದನ್ ಅವರನ್ನು ಇದೀಗ ಬೇಕು ಅಂತಾ ಟಾರ್ಗೆಟ್ ಮಾಡಿ ಸುಳ್ಳು ಆರೋಪ ಹೊರಿಸುತ್ತಿರುವ ಮಾತು ಕೇಳಿಬಂದಿದೆ. ಹಾಗಾದ್ರೆ ಎಸಿಪಿ ಚಂದನ್ ಅವರಿಗೆ ದರ್ಶನ್ ತೂಗುದೀಪ್ ಅರೆಸ್ಟ್ ಮಾಡಿದ್ದೇ ಕಂಟಕ ಆಯ್ತಾ? ಅಥವಾ ಬೇರೆ ಏನಿದೆ ವಿಷಯ?

ಎಸಿಪಿ ಚಂದನ್ VS ಪ್ರತಾಪ್ ಸಿಂಹ!
ಪ್ರತಾಪ್ ಸಿಂಹ ಇದೀಗ ದರ್ಶನ್ ತೂಗುದೀಪ್ ಅವರನ್ನು ಬಂಧಿಸಿದ್ದ ದಕ್ಷ ಅಧಿಕಾರಿ ಎಸಿಪಿ ಚಂದನ್ ಅವರ ವಿರುದ್ಧ ಗಂಭೀರ ಆರೋಪ ಒಂದನ್ನ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಒಂದನ್ನ ಮಾಡಿರುವ ಪ್ರತಾಪ್ ಸಿಂಹ, 'ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು.' ಎಂದು ಹೇಳಿ ಎಚ್ಚರಿಕೆಯ ನೀಡಿದ್ದಾರೆ. ಆದರೆ ಈ ವಿಚಾರಕ್ಕೆ ಮತ್ತು ದರ್ಶನ್ ತೂಗುದೀಪ್ ಬಂಧನಕ್ಕೂ ನಂಟು ಬೆಸೆದು ಕೆಲವರು ಆರೋಪ ಮಾಡಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿ ಮಾಡುತ್ತಿದೆ.
ದರ್ಶನ್ ಕೇಸ್‌ನಲ್ಲಿ ಚಂದನ್ ಹೀರೋ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿದ್ದ ದರ್ಶನ್ ತೂಗೂದೀಪ್ ಅವರನ್ನು ಅರೆಸ್ಟ್ ಮಾಡಲು ಹೋಗಿದ್ದೇ ಎಸಿಪಿ ಚಂದನ್ ಅವರು. ಮೈಸೂರಿಗೆ ಹೋಗಿ ನೇರವಾಗಿ ನಟ ದರ್ಶನ್ ತೂಗೂದೀಪ್ ಅವರನ್ನು ಅರೆಸ್ಟ್ ಮಾಡಿಕೊಂಡು, ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು ಎಸಿಪಿ ಚಂದನ್. ಹೀಗಿದ್ದಾಗಲೇ, ಬೇಕು ಅಂತಲೇ ಬಿಜೆಪಿ ನಾಯಕರು ಎಸಿಪಿ ಚಂದನ್ ಅವರನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಆರಂಭವಾಗಿದೆ.
ದರ್ಶನ್‌ಗೆ 1 ವರ್ಷ ಜಾಮೀನು ಸಿಗಲ್ಲ?
ನಟ ದರ್ಶನ್ ತೂಗುದೀಪ್ ಅವರಿಗೆ ಇನ್ನೂ 6 ತಿಂಗಳು ಅಥವಾ 1 ವರ್ಷ ಜಾಮೀನು ಸಿಗಲ್ಲ ಎಂಬ ಮಾತನ್ನು ಕೂಡ ಕೆಲವರು ಹೇಳುತ್ತಿದ್ದಾರೆ. ಕಾನೂನು ತಜ್ಞರು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ದರ್ಶನ್ ತೂಗುದೀಪ್ ಅವರಿಗೆ ಸದ್ಯಕ್ಕೆ ಜಾಮೀನು ಸಿಗುವುದು ಚಾರ್ಜ್ ಶೀಟ್ ಸಲ್ಲಿಕೆ ಆದ ನಂತರ. ಹೀಗಾಗಿ ಎಸಿಪಿ ಚಂದನ್ ಅವರ ನೇತೃತ್ವದ ತಂಡ ಪ್ರಕರಣದ ಬಗ್ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ನಂತರವಷ್ಟೇ ದರ್ಶನ್ ಅವರು ರಿಲೀಸ್ ಆಗುವುದು ಯಾವಾಗ? ಎಂಬ ಪ್ರಶ್ನೆಗೆ ಪಕ್ಕಾ ಉತ್ತರ ಸಿಗಲಿದೆ.
ಕರ್ನಾಟಕದ ವಿಧಾನಸಭೆಗೆ ದರ್ಶನ್ ಎಂಟ್ರಿ?
ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಒಂದು ಕಡೆ ಸಿನಿಮಾ ಹಾಗೂ ಮತ್ತೊಂದು ಕಡೆ ರಾಜಕೀಯ ಅಖಾಡದಲ್ಲೂ ದರ್ಶನ್ ಅವರು ಹವಾ ಇಟ್ಟಿದ್ದರು. ಇದೇ ಕಾರಣಕ್ಕೆ ಮುಂದೆ ಬರಲಿರುವ ಚನ್ನಪಟ್ಟಣ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ದರ್ಶನ್ ಅವರನ್ನ ಕಾಂಗ್ರೆಸ್ ಪಕ್ಷದಿಂದ, ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಸಲು ಕಾಂಗ್ರೆಸ್‌ನ ನಾಯಕರು ಚಿಂತನೆ ನಡೆಸಿದ್ದರು ಎನ್ನಲಾಗಿತ್ತು. ಆದರೆ ಅಷ್ಟರಲ್ಲೇ ಘೋರ ದುರಂತ ಕೂಡ ನಡೆದು ಹೋಗಿತ್ತು. ನಟ ದರ್ಶನ್ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ದರ್ಶನ್ ತಂಗಿ ಮದುವೆಗೆ ಬರ್ತಾರಾ?
ತರುಣ್ ಸುಧೀರ್ ಮತ್ತು ಸೋನಾಲ್ ಮದುವೆ ಫಿಕ್ಸ್ ಆಗಿದೆ. ಸೋನಾಲ್ ಅವರಿಗೆ ನಟ ದರ್ಶನ್ ತೂಗುದೀಪ್ ಅಣ್ಣನ ಸಮಾನ. ಅಲ್ಲದೆ ಖುದ್ದು ಸೋನಾಲ್ ಕೂಡ ದರ್ಶನ್ ಅವರನ್ನ ಅಣ್ಣಾ ಅಂತಾ ಕರೆಯುತ್ತಿದ್ದರು. ಹೀಗಾಗಿಯೇ ಈಗ ಜೈಲಿನಲ್ಲಿ ಇರುವ ನಟಿ ಸೋನಾಲ್ ಅವರ ಅಣ್ಣ ದರ್ಶನ್ ತೂಗುದೀಪ್ ಮದುವೆಗೆ ಬರ್ತಾರ? ಎಂಬ ಪ್ರಶ್ನೆ ದರ್ಶನ್ ಅಭಿಮಾನಿಗಳನ್ನ ಕಾಡ್ತಿದೆ. ಆಗಸ್ಟ್ 10 & 11ಕ್ಕೆ ಇಬ್ಬರೂ ಮದುವೆ ಆಗುತ್ತಿದ್ದಾರೆ. ಹೀಗಾಗಿ ಇಬ್ಬರ ಮದುವೆ ಸುದ್ದಿ ಕನ್ನಡ ಸಿನಿ ಇಂಡಸ್ಟ್ರಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡುವ ಮುನ್ಸೂಚನೆ ನೀಡಿದೆ.
ದರ್ಶನ್ ಫ್ಯಾನ್ಸ್ vs ಧ್ರುವ ಸರ್ಜಾ!
ದರ್ಶನ್ ತೂಗುದೀಪ್ ಅವರು ಜೈಲಿಂದ ರಿಲೀಸ್ ಆಗಿ ಹೊರಗೆ ಬರುವವರೆಗು ಕನ್ನಡದ ಬೇರೆ ಯಾವುದೇ ಹೀರೋಗಳ ಸಿನಿಮಾ ನೋಡಬಾರದು ಎಂದು ಆಗ್ರಹಿಸುತ್ತಿದ್ದಾರೆ ದರ್ಶನ್ ಫ್ಯಾನ್ಸ್. ಹೀಗಿದ್ದಾಗಲೇ, ಧ್ರುವ ಸರ್ಜಾ ಅವರ 'ಮಾರ್ಟಿನ್' ಸಿನ್ಮಾ ರಿಲೀಸ್‌ಗೆ ರೆಡಿಯಾಗಿದೆ. ಅದ್ರಲ್ಲೂ 'ಮಾರ್ಟಿನ್' ಟ್ರೇಲರ್ ರಿಲೀಸ್ ಆಗಿದ್ದು, ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಏನು ಹೇಳ್ತಿದ್ದಾರೆ ಗೊತ್ತಾ? ಮಾರ್ಟಿನ್ ಟ್ರೇಲರ್ ಬಗ್ಗೆ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ, ಕಮೆಂಟ್ ಏನು?? ಮುಂದೆ ಓದಿ.
ಫೈಟಿಂಗ್ ಬಲು ಜೋರು ಗುರೂ!
'ಆ್ಯಕ್ಷನ್ ಪ್ರಿನ್ಸ್' ಎಂಬ ಬಿರುದು ಪಡೆದ ಧ್ರುವ ಸರ್ಜಾರ ಬಹು ನಿರೀಕ್ಷಿತ ಸಿನಿಮಾ ಮಾರ್ಟಿನ್. ಈ ಕಾರಣಕ್ಕೆ 'ಮಾರ್ಟಿನ್' ಸಿನಿಮಾ ನೋಡಲು ಕೋಟ್ಯಂತರ ಫ್ಯಾನ್ಸ್ ಹಾಗೂ ಕನ್ನಡಿಗರು ಕಾಯುತ್ತಿದ್ದಾರೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಧ್ರುವ ಸರ್ಜಾ ಅವರ ಸಿನಿಮಾ 'ಮಾರ್ಟಿನ್' ಟ್ರೇಲರ್ ನೋಡಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದರ ಜತೆಗೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ 'ಮಾರ್ಟಿನ್' ಟ್ರೇಲರ್ ಅತ್ಯಂತ ಕೆಟ್ಟ ಟ್ರೇಲರ್ ಅಂತಾ ಆರೋಪ ಮಾಡುತ್ತಿದ್ದಾರೆ. ಇದು ದರ್ಶನ್ ಫ್ಯಾನ್ಸ್ vs ಧ್ರುವ ಸರ್ಜಾ ಎಂಬ ರೀತಿ ವಾತಾವರಣ ಸೃಷ್ಟಿಸಿದೆ. ಅಲ್ದೆ, ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಜಗಳ ಶುರುವಾಗುವ ಮುನ್ಸೂಚನೆ ನೀಡುತ್ತಿದೆ.












Click it and Unblock the Notifications